ನಟ, ಪೋಷಕ ನಟ, ಖಳನಾಯಕ ಪಾತ್ರಗಳಿಂದ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಬೇಡಿಕೆ ಹೊಂದಿರುವ ನಟ ರಂಗಾಯಣ ರಘು. ಇವರು ಪ್ರಮುಖ ಪಾತ್ರದಲ್ಲಿ ನಟಿಸಿರುವ 'ರಂಗಸಮುದ್ರ' ಎಂಬ ಸಿನಿಮಾ ಸದ್ದಿಲ್ಲದೇ ಶೂಟಿಂಗ್ ಮುಗಿಸಿ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಚಿತ್ರಕ್ಕೆ ರಾಘವೇಂದ್ರ ರಾಜ್ ಕಮಾರ್ ಅವರ ಸಾಥ್ ಸಿಕ್ಕಿದೆ. ಹೌದು, ಪ್ರಮುಖ ಪಾತ್ರವೊಂದನ್ನು ನಿರ್ವಹಿಸಿರುವ ರಾಘಣ್ಣ ಈ ಚಿತ್ರದ ಟ್ರೇಲರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ.

ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಹಿರಿಯ ನಟ ರಾಘವೇಂದ್ರ ರಾಜ್ಕುಮಾರ್, 'ಇಂಥ ಕಥಾವಸ್ತು ಆಯ್ಕೆ ಮಾಡಿಕೊಂಡಿರುವ ನಿರ್ದೇಶಕರಿಗೆ ನನ್ನ ಮೊದಲ ಸೆಲ್ಯೂಟ್. ರಂಗಾಯಣ ರಘು ಅವರ ಅಭಿನಯ ನಿಜಕ್ಕೂ ಅದ್ಭುತ. ಇಂತಹ ಚಿತ್ರದಲ್ಲಿ ನಾನು ಅಭಿನಯಿಸಿರುವುದು ನನ್ನ ಭಾಗ್ಯ. ಈ ಚಿತ್ರ ಯಶಸ್ವಿಯಾಗಲಿ. ನಾನು ಸದಾ ಅವರ ಜೊತೆಗಿರುತ್ತೇನೆ' ಎಂದು ತಿಳಿಸಿದರು.

ನಟ ರಂಗಾಯಣ ರಘು ಮಾತನಾಡಿ, ನನಗೆ ರಾಜ್ ಕುಮಾರ್ ಅಸ್ಕಿ ಅವರು ಹೇಳಿದ ಕಥೆ ಇಷ್ಟವಾಯಿತು. ತಕ್ಷಣ ಒಪ್ಪಿಕೊಂಡೆ. ಜನಪದ ಸೊಗಡಿನ ಈ ಸಿನಿಮಾದ ಚಿತ್ರೀಕರಣ ಕರ್ನಾಟಕ ಹಾಗೂ ಮಹಾರಾಷ್ಟ್ರದ ಅದ್ಭುತ ಸ್ಥಳಗಳಲ್ಲಿ ನಡೆದಿದೆ. ಪುನೀತ್ ರಾಜ್ಕುಮಾರ್ ಅವರು ಈ ಚಿತ್ರದಲ್ಲಿ ನಟಿಸಬೇಕಿತ್ತು. ಆದ್ರೆ ಆಗಲಿಲ್ಲ. ಇದೀಗ ಅದೇ ಮನೆಯ ರಾಘವೇಂದ್ರ ರಾಜ್ಕುಮಾರ್ ಅವರು ಚಿತ್ರದ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ ಎಂದು ತಿಳಿಸಿದರು.

ನಿರ್ದೇಶಕ ರಾಜ್ ಕುಮಾರ್ ಅಸ್ಕಿ ಮಾತನಾಡಿ, ರಂಗಸಮುದ್ರ ಎಂದರೆ ಊರಿನ ಹೆಸರು. ಈ ಕಥೆಯನ್ನು ನಿರ್ಮಾಪಕ ಹೊಯ್ಸಳ ಕೊಣನೂರು ಅವರ ಮುಂದೆ ಹೇಳಿದಾಗ ಅವರು, ರಂಗಾಯಣ ರಘು ಅವರು ಈ ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸದರೆ ಚೆನ್ನಾಗಿರುತ್ತದೆ ಎಂದರು. ನನಗೂ ಅವರ ಬಳಿ ಈ ಪಾತ್ರ ಮಾಡಿಸಬೇಕೆಂಬ ಆಸೆಯಿತ್ತು. ಅವರು ಅಭಿನಯಿಸಲು ಒಪ್ಪಿಗೆ ನೀಡಿ ನಮ್ಮ ಆಸೆ ಈಡೇರಿಸಿದರು. ಈ ಚಿತ್ರವನ್ನು ಮೊದಲು ಕೇಳಿದವರು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು. ಜಿಲ್ಲಾಧಿಕಾರಿ ಪಾತ್ರದಲ್ಲಿ (ಅತಿಥಿ ಪಾತ್ರ) ನಟಿಸುವುದಾಗಿ ಹೇಳಿದ್ದರು. ಆದರೆ ವಿಧಿಯಾಟದಿಂದ ಅದು ಸಾಧ್ಯವಾಗಲಿಲ್ಲ. ಕಲಾವಿದರ ಹಾಗೂ ತಂತ್ರಜ್ಞರ ಸಹಕಾರದಿಂದ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ ಎಂದು ತಿಳಿಸಿದರು.
- " class="align-text-top noRightClick twitterSection" data="">
ಇದನ್ನೂ ಓದಿ: ಫೆ. 29 ರಿಂದ ಮಾ. 7ರ ವರೆಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಸೌಹಾರ್ದತೆ, ಸಹಬಾಳ್ವೆಗೆ ಒತ್ತು: ಸಿಎಂ
ನಿರ್ಮಾಪಕ ಹೊಯ್ಸಳ ಕೊಣನೂರು ಮಾತನಾಡಿ, ನಾನು ಹಾಸನ ಜಿಲ್ಲೆಯ ಕೊಣನೂರಿನವನು. ರಾಜಕೀಯ ಹಾಗೂ ಸಾಮಾಜಿಕ ಕಾರ್ಯಕರ್ತ. ಸಿನಿಮಾ ರಂಗ ಹೊಸತು. ರಾಜ್ ಕುಮಾರ್ ಅಸ್ಕಿ ಅವರು ಹೇಳಿದ ಕಥೆ ಇಷ್ಟವಾಗಿ, ನಿರ್ಮಾಣಕ್ಕೆ ಮುಂದಾದೆ. ಎಲ್ಲರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿ ಬಂದಿದೆ ಎಂದರು.
ಇದನ್ನೂ ಓದಿ: 'ಕೋಳಿ ಎಸ್ರು', 'ಹದಿನೇಳೆಂಟು' ಸಿನಿಮಾಗಳಿಗೆ ಗಿರೀಶ್ ಕಾಸರವಳ್ಳಿ, ಜೋಗಿ ಸಾಥ್
ಚಿತ್ರದಲ್ಲಿ ಐದು ಹಾಡುಗಳಿವೆ. ವಾಗೀಶ್ ಚನ್ನಗಿರಿ ಹಾಡುಗಳನ್ನು ಬರೆದಿದ್ದಾರೆ. ಕೈಲಾಶ್ ಖೇರ್, ವಿಜಯ ಪ್ರಸಾದ್, ಎಂ.ಎಂ ಕೀರವಾಣಿ, ಸಂಚಿತ್ ಹೆಗಡೆ ಹಾಗೂ ನಾನು ಹಾಡಿದ್ದೇವೆ ಎಂದು ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ದೇಸಿ ಮೋಹನ್ ಮಾಹಿತಿ ನೀಡಿದರು. ಗೀತರಚನೆಕಾರ ವಾಗೀಶ್ ಚನ್ನಗಿರಿ ಚಿತ್ರದ ಉಸ್ತುವಾರಿ ಹೊತ್ತಿದ್ದಾರೆ. ನೃತ್ಯ ನಿರ್ದೇಶಕರಾಗಿ ಧನು ಮಾಸ್ಟರ್ ಹಾಗೂ ಚಿತ್ರದಲ್ಲಿ ಅಭಿನಯಿಸಿರುವ ಅನೇಕ ಕಲಾವಿದರು ಪಾತ್ರಗಳು ಉತ್ತಮವಾಗಿ ಮೂಡಿಬಂದಿದೆ ಎಂದು ತಿಳಿಸಿದರು. ಸದ್ಯ ಟ್ರೇಲರ್ನಿಂದ ಗಮನ ಸೆಳೆದಿರುವ ರಂಗಸಮುದ್ರ ಚಿತ್ರ ಇದೇ ಜನವರಿ 12ರಂದು ಬಿಡುಗಡೆ ಆಗಲಿದೆ.