ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಜಗತ್ತಿನಾದ್ಯಂತ ಹೆಚ್ಚು ಕ್ರೇಜ್ ಹೊಂದಿರುವ ಟಿ - 20 ಲೀಗ್‌ಗಳಲ್ಲಿ ಒಂದು. ಇದು ಶ್ರೀಮಂತ ಕ್ರಿಕೆಟ್ ಲೀಗ್ ಕೂಡ. ಈ ಮೆಗಾ ಟೂರ್ನಿಗಾಗಿ ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಈ ಕ್ರಿಕೆಟ್ ಪಂದ್ಯಾವಳಿ ಆರಂಭ ಆಗಲಿದೆ. ಮಾರ್ಚ್ 31ರಿಂದ ಇಂಡಿಯನ್ ಪ್ರೀಮಿಯರ್ ಲೀಗ್ ಅದ್ಧೂರಿಯಾಗಿ ಆರಂಭವಾಗಲಿದೆ. ಆದ್ರೀಗ ಅಭಿಮಾನಿಗಳ ಕುತೂಹಲ ಹೆಚ್ಚಿಸುವ ಸುದ್ದಿಯೊಂದು ಹೊರಬಿದ್ದಿದೆ.
ರಶ್ಮಿಕಾ ಮಂದಣ್ಣ, ತಮನ್ನಾ ಭಾಟಿಯಾ ಡ್ಯಾನ್ಸ್.. ಹೌದು, ಐಪಿಎಲ್ 2023 ಉದ್ಘಾಟನಾ ಸಮಾರಂಭದಲ್ಲಿ ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಮತ್ತು ತಮನ್ನಾ ಭಾಟಿಯಾ ಸದ್ದು ಮಾಡಲಿದ್ದಾರೆ ಎಂದು ತಿಳಿದಿದೆ. ಅವರ ಲೈವ್ ಡ್ಯಾನ್ಸ್ ಪ್ರದರ್ಶನ ನಡೆಯಲಿದೆ ಎಂದು ವರದಿಯಾಗಿದೆ. ಕೊರೊನಾದಿಂದಾಗಿ ಕಳೆದ ಮೂರು ವರ್ಷಗಳಿಂದ ಉದ್ಘಾಟನಾ ಸಮಾರಂಭ ನಡೆದಿರಲಿಲ್ಲ. ಹಾಗಾಗಿ ಈ ಬಾರಿಯ ಉದ್ಘಾಟನಾ ಸಮಾರಂಭವನ್ನು ಅದ್ಧೂರಿಯಾಗಿ ಆಯೋಜಿಸಲು ಬಿಸಿಸಿಐ ಮುಂದಾಗಿದೆ.
ಹೀಗಾಗಿ ಈ ಹಿಂದಿನಂತೆ ಸುಂದರ ತಾರೆಯರನ್ನು ಕ್ರಿಕೆಟ್ ಅಖಾಡಕ್ಕೆ ಕರೆ ತರಲಾಗುವುದು. ರಶ್ಮಿಕಾ ಮಂದಣ್ಣ ಮತ್ತು ತಮನ್ನಾ ಭಾಟಿಯಾ ಜೊತೆಗೆ ಇನ್ನೂ ಕೆಲ ಬಾಲಿವುಡ್ ನಟಿಯರನ್ನು ಕರೆತರಲಾಗುತ್ತದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಮೆಗಾ ಪಂದ್ಯಾವಳಿಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಹಾಗಾಗಿ ಉದ್ಘಾಟನಾ ಸಮಾರಂಭ ಅದ್ಧೂರಿಯಾಗಿ ಆಯೋಜಿಸಲಾಗುವುದು.
ಅಹಮದಾಬಾದ್‌ನಲ್ಲಿ ಪಂದ್ಯ ಆರಂಭ: ಐಪಿಎಲ್ - 16 ಮಾರ್ಚ್ 31ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪ್ರಾರಂಭವಾಗಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದೊಂದಿಗೆ ಐಪಿಎಲ್ ಆರಂಭವಾಗಲಿದೆ. ಈ ಪಂದ್ಯ ಆರಂಭಕ್ಕೂ ಅರ್ಧ ಗಂಟೆ ಮೊದಲು ಉದ್ಘಾಟನಾ ಸಮಾರಂಭ ನಡೆಯಲಿದೆ.
ಇದನ್ನೂ ಓದಿ: 47ನೇ ವಯಸ್ಸಿಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಲಯಾಳಂ ನಟಿ ಆರ್ಯ ಪಾರ್ವತಿಯ ತಾಯಿ!
ಈ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಒಟ್ಟು 70 ಪಂದ್ಯಗಳು ನಡೆಯಲಿದ್ದು, ಇದರಲ್ಲಿ ಹತ್ತು ತಂಡಗಳು ಭಾಗವಹಿಸಲಿವೆ. ಮುಂಬೈ ಇಂಡಿಯನ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್, ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್‌ಜೈಂಟ್ಸ್ ತಂಡಗಳು ಗ್ರೂಪ್-ಎ ಅಲ್ಲಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್, ಸನ್ ರೈಸರ್ಸ್ ಹೈದರಾಬಾದ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ಗ್ರೂಪ್-ಬಿ ಯಲ್ಲಿವೆ. ಈ ಎಲ್ಲಾ ಪಂದ್ಯಗಳಿಗೆ 12 ಸ್ಥಳಗಳನ್ನು ನಿರ್ಧರಿಸಲಾಗಿದೆ. ಈ ಪಂದ್ಯಗಳು ಅಹಮದಾಬಾದ್, ಮೊಹಾಲಿ, ಲಕ್ನೋ, ಹೈದರಾಬಾದ್, ಬೆಂಗಳೂರು, ಚೆನ್ನೈ, ದೆಹಲಿ, ಕೋಲ್ಕತ್ತಾ, ಜೈಪುರ, ಮುಂಬೈ, ಗುವಾಹಟಿ ಮತ್ತು ಧರ್ಮಶಾಲಾದಲ್ಲಿ ನಡೆಯಲಿವೆ. ಎರಡು ಪಂದ್ಯಗಳಿರುವಾಗ, ಒಂದು ಮಧ್ಯಾಹ್ನ 3.30ಕ್ಕೆ ಮತ್ತು ಇನ್ನೊಂದು ರಾತ್ರಿ 7.30ಕ್ಕೆ ನಡೆಯಲಿದೆ.
ಇದನ್ನೂ ಓದಿ: ಬಾಲಿವುಡ್ ಕ್ವೀನ್‌ಗಿಂದು ಹುಟ್ಟುಹಬ್ಬದ ಸಂಭ್ರಮ: 'ನನ್ನಿಂದ ದುಃಖವಾಗಿದ್ದರೆ ಕ್ಷಮಿಸಿ'- ಕಂಗನಾ ರಣಾವತ್