ಟಾಲಿವುಡ್ ಮಾಸ್ ಮಹಾರಾಜ ರವಿತೇಜ ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ 'ಟೈಗರ್ ನಾಗೇಶ್ವರ ರಾವ್' ಟೀಸರ್ ಬಿಡುಗಡೆಯಾಗಿದೆ. 'ಟೈಗರ್ ಇನ್ವೇಷನ್' ಎಂಬ ಟೈಟಲ್ನಡಿ ಚಿತ್ರದ ಮೊದಲ ನೋಟವನ್ನು ಅನಾವರಣಗೊಳಿಸಲಾಗಿದೆ. ಸಖತ್ ಮಾಸ್ ಲುಕ್ನಲ್ಲಿ ರವಿತೇಜ ಎಂಟ್ರಿ ಕೊಟ್ಟಿದ್ದಾರೆ. ಹಿಂದಿನ ಸಿನಿಮಾನಿಗಳಿಂದ ಈ ಚಿತ್ರದಲ್ಲೇ ಹೆಚ್ಚು ರಗಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್ ನೋಡಿದ ಪ್ರೇಕ್ಷಕರಿಗೆ ಸಿನಿಮಾ ಮೇಲಿನ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.
'ಟೈಗರ್ ನಾಗೇಶ್ವರ ರಾವ್' ಸಿನಿಮಾವನ್ನು ವಂಶಿ ನಿರ್ದೇಶಿಸಿದ್ದಾರೆ. ಕಾರ್ತಿಕೇಯ-2, ದಿ ಕಾಶ್ಮೀರಿ ಫೈಲ್ಸ್ನಂತಹ ಹಿಟ್ ಚಿತ್ರಗಳನ್ನು ನೀಡಿರುವ ಅಭಿಷೇಕ್ ಅಗರ್ವಾಲ್ ತಮ್ಮದೇ ಅಭಿಷೇಕ್ ಅಗರ್ವಾಲ್ ಆರ್ಟ್ಸ್ನಡಿ ನಿರ್ಮಿಸುತ್ತಿದ್ದಾರೆ. ಮಾಸ್ ಮಹಾರಾಜನ ನಾಯಕಿಯಾಗಿ ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ನಟಿಸಿದ್ದಾರೆ. ಆರ್ ಮಧಿ ಛಾಯಾಗ್ರಹಣ, ಶ್ರೀಕಾಂತ್ ವೀಸಾ ಸಂಭಾಷಣೆ, ವಿ ಪ್ರಕಾಶ್ ಕುಮಾರ್ ಸಂಗೀತ ಸಿನಿಮಾಕ್ಕಿದೆ. ಅವಿನಾಶ್ ಕೊಲ್ಲಾ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಣ ಮಾಡಿದ್ದಾರೆ.
- " class="align-text-top noRightClick twitterSection" data="">
ಚಿತ್ರಕಥೆ: 70 ರ ಕಾಲಘಟ್ಟದ ಹೈದರಾಬಾದ್ನ ಹಳ್ಳಿಯೊಂದರ ಕುಖ್ಯಾತ ಕಳ್ಳನ ಜೀವನಾಧಾರಿತ ಸಿನಿಮಾ ಇದಾಗಿದೆ. ರವಿತೇಜ ಅವರ ಗೆಟಪ್ ಈ ಹಿಂದಿನ ಎಲ್ಲಾ ಚಿತ್ರಗಳಿಗಿಂತಲೂ ಭಿನ್ನವಾಗಿರಲಿದೆ. ಹಾಗಾಗಿ ರವಿತೇಜ ಅವರು ತಮ್ಮ ಗೆಟಪ್, ಬಾಡಿ ಲಾಂಗ್ವೆಜ್ ಅನ್ನು ಬದಲಾಯಿಸಿಕೊಂಡಿದ್ದಾರೆ. 'ಟೈಗರ್ ನಾಗೇಶ್ವರ ರಾವ್' ಸಿನಿಮಾದಲ್ಲಿ ಬಾಲಿವುಡ್ ನಟ ಅನುಪಮ್ ಖೇರ್ ನಟಿಸಿದ್ದಾರೆ.
ಇದನ್ನೂ ಓದಿ: 'ಮಾನಾಡು' ಸಿನಿಮಾದ ಮೂಲಕ ಬಾಲಿವುಡ್ಗೆ ಎಂಟ್ರಿ ಕೊಡಲಿದ್ದಾರಾ ಮಾಸ್ ಮಹಾರಾಜ?
ಮುರಳಿ ಶರ್ಮಾ ಹಾಗೂ ಅನುಪಮ್ ಖೇರ್ ಗುಪ್ತಚರ ಇಲಾಖೆಯ ಅಧಿಕಾರಿಗಳಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ದಸರಾ ಹಬ್ಬದ ಸಮಯದಲ್ಲೇ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿದೆ. ಅದರಂತೆ ಅಕ್ಟೋಬರ್ 20 ರಂದು ಚಿತ್ರ ತೆರೆ ಕಾಣಲಿದೆ. ತಮಿಳು, ತೆಲುಗು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
ಮಾಸ್ ಮಹಾರಾಜ.. ತೆಲುಗು ಚಿತ್ರರಂಗದಲ್ಲಿ ಸೂಪರ್ ಹಿಟ್ ಸಿನಿಮಾಗಳನ್ನು ಮಾಡಿ ರವಿತೇಜ ಅವರು ಮಾಸ್ ಮಹಾರಾಜನೆಂದೇ ಖ್ಯಾತಿ ಪಡೆದಿದ್ದಾರೆ. ಇನ್ನೂ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ರವಿತೇಜ ಬ್ಯುಸಿಯಾಗಿದ್ದಾರೆ. ಈಗಾಗಲೇ ಒಂದರ ಹಿಂದೆ ಇನ್ನೊಂದರಂತೆ ಎರಡು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ನಟ 'ರಾವಣಾಸುರ'ನಾಗಿ ಅಬ್ಬರಿಸಲು ಸಜ್ಜಾಗಿದ್ದಾರೆ. ಜೊತೆಗೆ 'ಟೈಗರ್ ನಾಗೇಶ್ವರ ರಾವ್' ಚಿತ್ರದಲ್ಲೂ ಮಿಂಚಲು ಸಜ್ಜಾಗಿದ್ದಾರೆ. ಇವರ ಸಿನಿಮಾಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.
ಇದನ್ನೂ ಓದಿ: ರವಿತೇಜ- ಗೋಪಿಚಂದ್ ಕಾಂಬಿನೇಷನ್ನಲ್ಲಿ 4ನೇ ಸಿನಿಮಾ ಫಿಕ್ಸ್; ಮೋಷನ್ ಪೋಸ್ಟರ್ ಔಟ್