ETV Bharat / entertainment

ಕ್ರಿಕೆಟರ್ ಎಬಿ ಡಿ ವಿಲಿಯರ್ಸ್ ಬಾಯಲ್ಲೂ 'ಕಾಂತಾರ': ಅಭಿಮಾನಿಗಳು ಖುಷ್ - kantara

ದಕ್ಷಿಣ ಆಫ್ರಿಕಾ ಕ್ರಿಕೆಟರ್ ಎಬಿ ಡಿ ವಿಲಿಯರ್ಸ್ ಮತ್ತು ರಿಷಬ್​ ಶೆಟ್ಟಿ ಒಂದೇ ಫ್ರೇಮ್​ನಲ್ಲಿ ಕಾಣಿಸಿಕೊಂಡಿದ್ದು, ಇಬ್ಬರೂ ಕಾಂತಾರ ಎಂದು ಹೇಳಿದ್ದಾರೆ.

Rishab shetty poses with ab de villiers
ಎಬಿ ಡಿ ವಿಲಿಯರ್ಸ್ ಜೊತೆ ರಿಷಬ್ ಶೆಟ್ಟಿ
author img

By

Published : Nov 4, 2022, 12:42 PM IST

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಫ್ರಾಂಚೈಸಿಯೊಂದಿಗೆ ಮಾತುಕತೆ ನಡೆಸುವ ಸಲುವಾಗಿ ದಕ್ಷಿಣ ಆಫ್ರಿಕಾ ಕ್ರಿಕೆಟರ್ ಎಬಿ ಡಿ ವಿಲಿಯರ್ಸ್ ಗುರುವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ಕಳೆದ ವರ್ಷ ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವ ಅವರು ಆರ್‌ಸಿಬಿ ತಂಡ ಸೇರಿಕೊಂಡಿರುವುದು ಅಭಿಮಾನಿಗಳಿಗೆ ಸಂತಸ ಉಂಟುಮಾಡಿದೆ. ಮತ್ತೊಂದು ಸಂತೋಷಕರ ವಿಷಯವೆಂದರೆ, ದೇಶಾದ್ಯಂದ ಸದ್ದು ಮಾಡುತ್ತಿರುವ ಕಾಂತಾರ ಸಿನಿಮಾ ಬಗ್ಗೆ ಮಾತನಾಡಿರುವುದು.

ಹೌದು, ಕಾಂತಾರ ಸಾರಥಿ ರಿಷಬ್​ ಶೆಟ್ಟಿ ಮತ್ತು ಎಬಿ ಡಿವಿಲಿಯರ್ಸ್ ಒಂದೇ ಫ್ರೇಮ್​ನಲ್ಲಿ ಕಾಣಿಸಿಕೊಂಡಿದ್ದು, ಇಬ್ಬರೂ ಕಾಂತಾರ ಎಂದಿದ್ದಾರೆ. ಈ ವಿಡಿಯೋವನ್ನು ಹೊಂಬಾಳೆ ಫಿಲ್ಮ್ಸ್​, ರಿಷಬ್​ ಶೆಟ್ಟಿ ಅವರು ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಇವರಿಬ್ಬರನ್ನೂ ಒಂದೇ ಫ್ರೇಮ್​ನೊಳಗೆ ನೋಡಿದ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಕಾಂತಾರ ಭಾರತದಾದ್ಯಂತ ಧೂಳೆಬ್ಬಿಸುತ್ತಿದೆ. ಬಿಡುಗಡೆಯಾಗಿ ಒಂದು ತಿಂಗಳು ಕಳೆದರೂ ಅಭಿಮಾನಿಗಳ ಕ್ರೇಜ್ ಕಡಿಮೆ ಆಗಿಲ್ಲ. ಅನೇಕ ಕಡೆಗಳಲ್ಲಿ ಈಗಲೂ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದ್ದು, ಕನ್ನಡ ಚಿತ್ರತರಂಗದ ಹಿರಿಮೆ ಹೆಚ್ಚಿದೆ. ಪರಭಾಷೆ ಚಿತ್ರರಂಗದ ಸ್ಟಾರ್​ ನಟರು ಸಹ ಸಿನಿಮಾ ಬಗ್ಗೆ ಹಾಡಿ ಹೊಗಳಿದ್ದಾರೆ. ಇದೀಗ ಎಬಿ ಡಿವಿಲಿಯರ್ಸ್ ಬಾಯಲ್ಲೂ ಈ ಚಿತ್ರದ ಹೆಸರು ಕೇಳಿ ಬಂದಿದ್ದು ಅಭಿಮಾನಿಗಳ ಸಂತಸ ಮತ್ತು ಚಿತ್ರತಂಡದ ವಿಶ್ವಾಸ ದುಪ್ಪಟ್ಟಾಗಿದೆ.

ಇದನ್ನೂ ಓದಿ: ಆರ್​ಸಿಬಿ ಅಭಿಮಾನಿಗಳೇ,​ ಬೆಂಗಳೂರಿಗೆ ಆಗಮಿಸಿದ್ದಾರೆ ಎಬಿ ಡಿ ವಿಲಿಯರ್ಸ್! ಈ ಸಲ..?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.