ETV Bharat / entertainment

ಅಮೆರಿಕದಲ್ಲಿ‌ 'ವಿಶ್ವ ಶ್ರೇಷ್ಠ ಕನ್ನಡಿಗ 2023' ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ - ವಿಶ್ವ ಶ್ರೇಷ್ಠ ಕನ್ನಡಿಗ 2023 ಪ್ರಶಸ್ತಿ

ನಟ, ನಿರ್ದೇಶಕ, ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ರಿಷಬ್ ಶೆಟ್ಟಿಗೆ ಇದೀಗ 'ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ದೊರೆತಿದೆ.

rishabh shetty
ರಿಷಬ್ ಶೆಟ್ಟಿ
author img

By

Published : Jun 28, 2023, 10:10 AM IST

Updated : Jun 28, 2023, 5:30 PM IST

ಅಮೆರಿಕದಲ್ಲಿ‌ 'ವಿಶ್ವ ಶ್ರೇಷ್ಠ ಕನ್ನಡಿಗ 2023' ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ

'ಕಾಂತಾರ' ಸಿನಿಮಾದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಗುರುತಿಸಿಕೊಂಡಿದ್ದಾರೆ. ಕಾಂತಾರ ಚಿತ್ರದ ಸಕ್ಸಸ್​ ಬಳಿಕ ಈಗಾಗಲೇ ಸಾಕಷ್ಟು ಪ್ರಶಸ್ತಿಗಳನ್ನ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ರಿಷಬ್ ಶೆಟ್ಟಿ ಅವರು ಪತ್ನಿ ಪ್ರಗತಿ ಶೆಟ್ಟಿ ಜೊತೆ ಅಮೆರಿಕದ ವಾಷಿಂಗ್ಟನ್​ನ ಸಿಯಾಟಲ್​ಗೆ ಭೇಟಿ ನೀಡಿದ್ದರು‌. ಈ ವೇಳೆ, ಅಲ್ಲಿನ ಪ್ರತಿಷ್ಠಿತ ಪ್ಯಾರಾಮೌಂಟ್ ಥಿಯೇಟರ್​ನಲ್ಲಿ ನಟ ರಿಷಬ್ ಅವರಿಗೆ "ವಿಶ್ವ ಶ್ರೇಷ್ಠ ಕನ್ನಡಿಗ 2023" ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

rishabh shetty
ಪ್ರಗತಿ ಶೆಟ್ಟಿಗೆ ಹೂಗುಚ್ಛ ನೀಡಿದ ಬಾಲಕಿ

ಹೌದು, ಅಲ್ಲಿನ ಸಹ್ಯಾದ್ರಿ ಕನ್ನಡ ಸಂಘ ಹಾಗೂ ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು ರಿಷಬ್ ಶೆಟ್ಟಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸೆನೆಟರ್ ಡಾ.ದೆರೀಕ್ ಟ್ರಸ್ಫರ್ಡ್ ಸಹ ಉಪಸ್ಥಿತರಿದ್ದರು. ಅಮೆರಿಕ ಹಾಗೂ ವಾಷಿಂಗ್ಟನ್ ನಗರಕ್ಕೆ ಕನ್ನಡಿಗರು ನೀಡುತ್ತಿರುವ ಕೊಡುಗೆಯನ್ನು ಸ್ಮರಿಸಿದ ಟ್ರಸ್ಫರ್ಡ್, ರಿಷಬ್ ಶೆಟ್ಟಿ ಅವರ "ಕಾಂತಾರ" ಸಿನಿಮಾವನ್ನು ಯುನಿವರ್ಸಲ್‌ ಸಿನಿಮಾ ಎಂದು ಮುಕ್ತ ಕಂಠದಿಂದ ಶ್ಲಾಘಿಸಿದರು.

ಇದನ್ನೂ ಓದಿ : Watch.. ವಿಶ್ವಸಂಸ್ಥೆಯಲ್ಲಿ ಕನ್ನಡದಲ್ಲಿ ಮಾತನಾಡಿ ಗಮನ ಸೆಳೆದ ಡಿವೈನ್ ಸ್ಟಾರ್

ಈ ಸಂದರ್ಭದಲ್ಲಿ ಅಮೆರಿಕದ ಇಡೀ ಕನ್ನಡಿಗರನ್ನು ಉದ್ದೇಶಿಸಿ ಮಾತನಾಡಿದ ರಿಷಬ್ ಶೆಟ್ಟಿ, "ವಾಷಿಂಗ್ಟನ್​ನ ಸಿಯಾಟಲ್ ನಗರದ ಪ್ಯಾರಾಮೌಂಟ್ ಥಿಯೇಟರ್​ಗೆ 95 ವರ್ಷಗಳ ಇತಿಹಾಸವಿದೆ‌. ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಸೇರಿದಂತೆ ಸಾಕಷ್ಟು ಗಣ್ಯರು ಈ ಸ್ಥಳದಲ್ಲಿ ಭಾಷಣ ಮಾಡಿದ್ದಾರೆ‌. ಅನೇಕ ಹೆಸರಾಂತ ಕಲಾವಿದರ ಕಾರ್ಯಕ್ರಮಗಳು ಇಲ್ಲಿ ನಡೆದಿದೆ‌.

rishabh shetty
ಪತ್ನಿಗೆ ಪ್ರಶಸ್ತಿ ನೀಡಿದ ನಟ ರಿಷಬ್ ಶೆಟ್ಟಿ

ಇಂತಹ ಇತಿಹಾಸವಿರುವ ಪ್ಯಾರಾಮೌಂಟ್ ಥಿಯೇಟರ್​ನಲ್ಲಿ "ವಿಶ್ವ ಶ್ರೇಷ್ಠ ಕನ್ನಡಿಗ 2023" ಗೌರವ ಪಡೆದಿರುವುದಕ್ಕೆ ಸಂತಸವಾಯಿತು" ಎಂದರು. ಇದಕ್ಕೂ ಮುನ್ನ ಸುಮಾರು ಐದು ಕೆಜಿ ತೂಕವಿರುವ ಚಿನ್ನದ ಲೇಪನ ಹೊಂದಿರುವ ಟ್ರೋಫಿ ನೀಡಲಾಯಿತು. 1,800 ಕ್ಕೂ ಅಧಿಕ ಕನ್ನಡಿಗರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

rishabh shetty
ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ದಂಪತಿ

ಇದನ್ನೂ ಓದಿ : ಕುಕ್ಕೆ ಸುಬ್ರಹ್ಮಣ್ಯನ ಸನ್ನಿಧಿಗೆ ಕಾಂತಾರ ಸ್ಟಾರ್​ ರಿಷಬ್​ ಕುಟುಂಬ ಭೇಟಿ, ಪೂಜೆ ಸಲ್ಲಿಕೆ

ಇನ್ನು ಈ ಹಿಂದೆ ಅಂದ್ರೆ ಮಾರ್ಚ್​ 17 ರಂದು ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಭಾಗಿಯಾಗಿದ್ದ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ವಿಶ್ವದ ಹಲವು ದೇಶದ ಪ್ರತಿನಿಧಿಗಳ ಮುಂದೆ ಕನ್ನಡದಲ್ಲೇ ನಮ್ಮ ಪರಿಸರ ಮತ್ತು ಅರಣ್ಯದಂಚಿನಲ್ಲಿರೋ ಜನರ ಸಮಸ್ಯೆಗಳ ಬಗ್ಗೆ ಮಾತನಾಡುವ ಮೂಲಕ ಭಾಷಾ ಅಭಿಮಾನ ಮೆರೆದಿದ್ದರು. ಈ ಮೂಲಕ ಕನ್ನಡದಲ್ಲಿ ಭಾಷಣ ಮಾಡಿದ ಮೊದಲ ಕನ್ನಡಿಗ ಎಂಬ ಕೀರ್ತಿಗೂ ಪಾತ್ರರಾಗಿದ್ದರು.

rishabh shetty
ರಿಷಬ್ ಶೆಟ್ಟಿಗೆ ಸ್ವಾಗತ ಕೋರಿದ ಮಕ್ಕಳು

ಇದನ್ನೂ ಓದಿ : ಒಂಬತ್ತು ವರ್ಷದ ಮೋದಿ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಡಿವೈನ್​ ಸ್ಟಾರ್​.. ವಿಡಿಯೋ ನೋಡಿ

ಇನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿದ ಕಾಂತಾರ ಸಿನಿಮಾವು ಮನುಷ್ಯ ಮತ್ತು ಪ್ರಕೃತಿ ಸಂಘರ್ಷಗಳನ್ನು ಒಳಗೊಂಡಿದೆ. ಹಾಗೆಯೇ, ಜಾನಪದ ಮೂಲ ಕಥೆಯಾಗಿದೆ. ಸಿನಿಮಾದಲ್ಲಿ ಕಿಶೋರ್, ಸಪ್ತಮಿ ಗೌಡ, ಅಚ್ಯುತ್ ಕುಮಾರ್ ಕೂಡ ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಅವರ ಸಂಗೀತ, ಅರವಿಂದ್ ಕಶ್ಯಪ್ ಛಾಯಾಗ್ರಹಣ ನೀಡಿದ್ದಾರೆ. ಒಟ್ಟಾರೆ ನಾಡಿನ ಸಂಸ್ಕೃತಿ, ಆಚರಣೆ, ಆಚಾರ ಹಾಗೂ ವಿಚಾರವನ್ನು ಸಿನಿಮಾ ಮೂಲಕ ತೋರಿಸಿರುವ ರಿಷಬ್‌ ಶೆಟ್ಟಿ, ಕನ್ನಡಿಗರಷ್ಟೇ ಅಲ್ಲ ಇಡೀ ದೇಶವೇ ಹೆಮ್ಮೆ ಪಡುವಂತೆ ಆಗಿದೆ.

Last Updated : Jun 28, 2023, 5:30 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.