ETV Bharat / entertainment

ಒಂದು ವರ್ಷದ ಬಳಿಕ ಭಾರತಕ್ಕೆ ಆಗಮಿಸಿದ ರಿಷಬ್ ಶೆಟ್ಟಿ ನಿರ್ಮಾಣದ 'ಶಿವಮ್ಮ' ಸಿನಿಮಾ: ಟೀಸರ್​ ರಿಲೀಸ್ - ಮಾಮಿ ಮುಂಬೈ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ರಿಷಬ್ ಶೆಟ್ಟಿ ನಿರ್ಮಾಣದ 'ಶಿವಮ್ಮ' ಟೀಸರ್​ ರಿಲೀಸ್ ಆಗಿದೆ.

Rishabh Shetty's Shivamma teaser release
ಶಿವಮ್ಮ ಟೀಸರ್​ ರಿಲೀಸ್
author img

By ETV Bharat Karnataka Team

Published : Oct 11, 2023, 12:59 PM IST

Updated : Oct 11, 2023, 1:30 PM IST

ಕನ್ನಡ ಚಿತ್ರಗಳು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗಮನ ಸೆಳೆಯುತ್ತಿವೆ. ಬಿಗ್ ಬಜೆಟ್​​ ಸಿನಿಮಾಗಳ ಅಬ್ಬರದ ನಡುವೆ ಕನ್ನಡದ ಕೆಲವ ಸಣ್ಣ ಸಿನಿಮಾಗಳು ಭಾರತದ ಗಡಿಯಾಚೆಗೆ ಸಂಚರಿಸಿ ಅಲ್ಲಿನ ಪ್ರತಿಷ್ಟಿತ ಚಿತ್ರೋತ್ಸವಗಳಲ್ಲಿ ಭಾಗಿಯಾಗಿ ಮನ್ನಣೆ ಗಳಿಸಿವೆ. ಈ ಮೂಲಕ ಕನ್ನಡ ಚಿತ್ರೋದ್ಯಮದ ಕೀರ್ತಿ ಪತಾಕೆಯನ್ನು ಸಾಗರೋತ್ತರ ಪ್ರದೇಶಗಳಲ್ಲಿ ಹಾರಿಸಿವೆ. ಈ ಸಾಲಿನಲ್ಲಿ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಸಂಸ್ಥೆಯ 'ಶಿವಮ್ಮ' ಪ್ರಮುಖ ಪಾತ್ರ ವಹಿಸಿದೆ.

ಸಾಗರೋತ್ತರ ಪ್ರದೇಶಗಳಲ್ಲಿ ಒಂದು ವರ್ಷ ಪ್ರಯಾಣ: ಶಿವಮ್ಮ ಸಿನಿಮಾ ಪ್ರಪಂಚದಾದ್ಯಂತ ಸಂಚರಿಸಿ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಜಗತ್ತಿನಾದ್ಯಂತ ಹಲವು ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಭಾಗಿಯಾಗಿದೆ. ಸಾಗರೋತ್ತರ ಪ್ರದೇಶಗಳಲ್ಲಿ ಒಂದು ವರ್ಷದ ಪ್ರಯಾಣಿಸಿ, ಅಂತಿಮವಾಗಿ ಭಾರತಕ್ಕೆ ಆಗಮಿಸಿದೆ.

ಯರೆಹಂಚಿನಾಳ ಗ್ರಾಮದಿಂದ ಶುರುವಾಗಿತ್ತು ಪಯಣ: ಜೈಶಂಕರ್ ಆರ್ಯರ್ ನಿರ್ದೇಶನದ ಚೊಚ್ಚಲ ಚಿತ್ರ 'ಶಿವಮ್ಮ'. ಮೊದಲ ಸಿನಿಮಾದಲ್ಲೇ ಸಾಧನೆ ಮಾಡಿದ ಯುವ ನಿರ್ದೇಶಕ ಇವರು. ಕೊಪ್ಪಳ ಜಿಲ್ಲೆಯ ಯರೆಹಂಚಿನಾಳ ಗ್ರಾಮದಿಂದ ಶುರುವಾದ ಪ್ರಯಾಣ ಹತ್ತಾರು ದೇಶಗಳಲ್ಲಿ ಹಲವಾರು ಪ್ರಶಸ್ತಿ, ಪ್ರಶಂಸೆಗಳನ್ನು ಗಳಿಸಿದ್ದಲ್ಲದೇ ವಿದೇಶಿಗರ ಪ್ರೀತಿಗೂ ಪಾತ್ರವಾಗಿದೆ.

ಗ್ರಾಮಸ್ಥರೇ ಮುಖ್ಯ ತಾರಾಗಣ.... ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಗಳಲ್ಲಿ ಅತ್ಯಂತ ಮೆಚ್ಚುಗೆ ಪಡೆದ ರಿಷಬ್ ಶೆಟ್ಟಿ ಸಂಸ್ಥೆಯ ಹೆಮ್ಮೆಯ ಚಲನಚಿತ್ರ 'ಶಿವಮ್ಮ'ವೀಗ ಭಾರತಕ್ಕೆ ಬಂದಿದೆ. ಪ್ರತಿಷ್ಟಿತ ಮಾಮಿ ಮುಂಬೈ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ, 'ದಕ್ಷಿಣ ಏಷ್ಯಾದ ಚೊಚ್ಚಲ ಪ್ರದರ್ಶನ'ವನ್ನು ಕಾಣುತ್ತಿದೆ. ಶಿವಮ್ಮ ಚಿತ್ರವನ್ನು ಸಂಪೂರ್ಣವಾಗಿ ಉತ್ತರ ಕರ್ನಾಟಕದ ಕೊಪ್ಪಳ ಜಿಲ್ಲೆಯ ಯರೆಹಂಚಿನಾಳ ಗ್ರಾಮದಲ್ಲಿ ಚಿತ್ರೀಕರಿಸಲಾಗಿದ್ದು, ಊರಿನ ಗ್ರಾಮಸ್ಥರೇ ಮುಖ್ಯ ತಾರಾಗಣದಲ್ಲಿದ್ದಾರೆ.

rishabh-shettys-shivamma-teaser-release
ಒಂದು ವರ್ಷದ ಬಳಿಕ ಭಾರತಕ್ಕೆ ಆಗಮಿಸಿದ ರಿಷಬ್ ಶೆಟ್ಟಿ ನಿರ್ಮಾಣದ 'ಶಿವಮ್ಮ' ಸಿನಿಮಾ: ಟೀಸರ್​ ರಿಲೀಸ್

ಶಿವಮ್ಮ ಟೀಸರ್​ ರಿಲೀಸ್: ತನ್ನ ಕುಟುಂಬದ ಉನ್ನತಿಗೋಸ್ಕರ ನೆಟ್ವರ್ಕ್ ಮಾರ್ಕೆಟಿಂಗ್ ವ್ಯಾಪಾರದಲ್ಲಿ ತೊಡಗುವ, ಸರ್ಕಾರಿ ಶಾಲೆಯಲ್ಲಿ ಅಡುಗೆ ಕೆಲಸ ಮಾಡುವ ಹಳ್ಳಿ ಹೆಣ್ಣುಮಗಳ ಕಥೆಯಾಗಿದೆ. ಇರಾನ್‌ನಲ್ಲಿ ನಡೆದ ಫಜರ್ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ಗೆದ್ದ ಮೊದಲ ಕನ್ನಡ ಚಿತ್ರ ಇದಾಗಿದ್ದು, ಚಿತ್ರವು ಈಗಾಗಲೇ ಐದು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ಚಿತ್ರದ ಟೀಸರ್ ಕೂಡ ನಿನ್ನೆ ಸಂಜೆಯೇ ರಿಷಬ್ ಶೆಟ್ಟಿ ಫಿಲ್ಮ್ಸ್ ಯೂಟ್ಯೂಬ್ ಚಾನೆಲ್‌ನಲ್ಲಿ ಅನಾವರಣಗೊಂಡಿದೆ.

ಇದನ್ನೂ ಓದಿ: 5 ದಶಕದಲ್ಲಿ 200ಕ್ಕೂ ಹೆಚ್ಚು ಚಿತ್ರ: ಎವರ್​ಗ್ರೀನ್​​​ ಸ್ಟಾರ್​ ಅಮಿತಾಭ್​​ ಬಚ್ಚನ್ ಮುಂದಿನ ಸಿನಿಮಾಗಳಿವು

ರಿಷಬ್ ಶೆಟ್ಟಿ ಫಿಲ್ಮ್ಸ್ ಪೋಸ್ಟ್: ಸೋಷಿಯಲ್​ ಮೀಡಿಯಾಗಳಲ್ಲಿ ಟೀಸರ್​ ಹಂಚಿಕೊಂಡಿರುವ ರಿಷಬ್ ಶೆಟ್ಟಿ ಫಿಲ್ಮ್ಸ್,​ ''ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅತ್ಯಂತ ಮೆಚ್ಚುಗೆ ಪಡೆದ ರಿಷಬ್ ಶೆಟ್ಟಿ ಸಂಸ್ಥೆಯ ಹೆಮ್ಮೆಯ ಚಲನಚಿತ್ರ 'ಶಿವಮ್ಮ'ನ ಟೀಸರ್ ನಿಮ್ಮ ಮುಂದೆ'' ಎಂದು ಬರೆದುಕೊಂಡಿದೆ.

Last Updated : Oct 11, 2023, 1:30 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.