ETV Bharat / entertainment

ಪಿವಿಆರ್ - ಐನಾಕ್ಸ್ ಮಲ್ಟಿಪ್ಲೆಕ್ಸ್​ಗಳಲ್ಲಿ ಸಲಾರ್ ಚಿತ್ರ ಬಿಡುಗಡೆ ಆಗ್ತಿಲ್ಲ: ಕಾರಣ ಏನು ಗೊತ್ತಾ? - ಸಲಾರ್​ ಬಿಡುಗಡೆ ಚಿತ್ರಮಂದಿರ

ಬಹುನಿರೀಕ್ಷಿತ ಪ್ರಭಾಸ್​ ಅಭಿನಯದ ಸಲಾರ್ ಚಿತ್ರವನ್ನು​ ಮಲ್ಟಿಪ್ಲೆಕ್ಸ್​ಗಳಲ್ಲಿ ಬಿಡುಗಡೆ ಮಾಡದಿರುವುದಕ್ಕೆ ಹೊಂಬಾಳೆ ಫಿಲಂಸ್‍ ತೀರ್ಮಾನಿಸಿದೆ.

ಮಲ್ಟಿಪ್ಲೆಕ್ಸ್​ಗಳಲ್ಲಿ ಸಲಾರ್ ಚಿತ್ರ ಬಿಡುಗಡೆ ಆಗುತ್ತಿಲ್ಲ

author img

By ETV Bharat Karnataka Team

Published : Dec 21, 2023, 9:13 AM IST

ಹೊಂಬಾಳೆ ಫಿಲಂಸ್‍ನ ಮಹತ್ವಾಕಾಂಕ್ಷೆಯ ಚಿತ್ರವಾದ 'ಸಲಾರ್ ಪಾರ್ಟ್ 1: ಸೀಸ್‍ಫೈರ್' ಡಿಸೆಂಬರ್ 22ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿದೆ. ಈ ಮಧ್ಯೆ, ಚಿತ್ರವನ್ನು ದಕ್ಷಿಣ ಭಾರತದ ಪಿವಿಆರ್- ಐನಾಕ್ಸ್ ಮಲ್ಟಿಪ್ಲೆಕ್ಸ್​ಗಳಲ್ಲಿ ಬಿಡುಗಡೆ ಮಾಡದಿರುವುದಕ್ಕೆ ಹೊಂಬಾಳೆ ಫಿಲಂಸ್‍ ತೀರ್ಮಾನಿಸಿದೆ.

ಇಂಥದ್ದೊಂದು ನಿರ್ಧಾರಕ್ಕೆ ಕಾರಣವಾಗಿರುವುದು ಶಾರುಖ್‍ ಖಾನ್‍ ಅಭಿನಯದ 'ಡಂಕಿ'. ಈ ಚಿತ್ರವು ಡಿ. 21ರ ಗುರುವಾರ ಬಿಡುಗಡೆಯಾಗುತ್ತಿದ್ದು, ಸಲಾರ್ ಜೊತೆಗೆ ಕ್ಲಾಶ್‍ ಆಗುತ್ತಿದೆ. ಎರಡು ದೊಡ್ಡ ಚಿತ್ರಗಳು ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಹಳಷ್ಟು ಏಕಪರದೆಯ ಚಿತ್ರಮಂದಿರಗಳು ಎರಡೂ ಚಿತ್ರಗಳನ್ನು ಎರಡೆರೆಡು ಪ್ರದರ್ಶನ ಮಾಡಬೇಕು ಎಂದು ತೀರ್ಮಾನಿಸಿದ್ದರು.

ಆದರೆ, 'ಡಂಕಿ' ವಿತರಕರು ಮಾತ್ರ ತಮಗೆ ನಾಲ್ಕೂ ಪ್ರದರ್ಶನಗಳನ್ನು ಕೊಡುವುದಾದರೆ ಮಾತ್ರ ಚಿತ್ರವನ್ನು ಪ್ರದರ್ಶಿಸುವುದಕ್ಕೆ ಅನುಮತಿ ನೀಡಲಾಗುವುದು ಎಂದಿದ್ದರು. ಯಾವಾಗ ಏಕಪರದೆಯ ಚಿತ್ರಮಂದಿರಗಳ ಸಂಘಗಳು ಎರಡೂ ಚಿತ್ರಗಳನ್ನು ಪ್ರದರ್ಶಿಸುವ ತೀರ್ಮಾನ ತೆಗೆದುಕೊಂಡಿತೋ, ಆಗ ಡಂಕಿ ಚಿತ್ರದ ವಿತರಕರು ಮಲ್ಟಿಪ್ಲೆಕ್ಸ್​ನತ್ತ ವಾಲಿದರು. ಅಲ್ಲಿ ಹೆಚ್ಚು ಪ್ರದರ್ಶನಗಳನ್ನು ಗಿಟ್ಟಿಸಿದರು. ಪಿವಿಆರ್ - ಐನಾಕ್ಸ್ ಮತ್ತು ಮಿರಾಜ್‍ ಮಲ್ಟಿಪ್ಲೆಕ್ಸ್​ಗಳಲ್ಲಿ ಸಲಾರ್ ಗಿಂತ ಡಂಕಿ ಚಿತ್ರಕ್ಕೆ ಹೆಚ್ಚಿನ ಪ್ರದರ್ಶನಗಳನ್ನು ಕೊಡುವುದಕ್ಕೆ ಮಲ್ಟಿಪ್ಲೆಕ್ಸ್​ಗಳು ಸಹ ಒಪ್ಪಿವೆ.

ತಮ್ಮ ಚಿತ್ರಕ್ಕೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿರುವ ಹೊಂಬಾಳೆ ಫಿಲಂಸ್‍, ಸಲಾರ್ ಪಾರ್ಟ್ 1: ಸೀಸ್‍ಫೈರ್ ಚಿತ್ರವನ್ನು ದಕ್ಷಿಣ ಭಾರತದ ಪಿವಿಆರ್-ಇನಾಕ್ಸ್ ಮತ್ತು ಮಿರಾಜ್‍ ಮಲ್ಟಿಪ್ಲೆಕ್ಸ್​ಗಳಲ್ಲಿ ಬಿಡುಗಡೆ ಮಾಡದಿರುವುದಕ್ಕೆ ತೀರ್ಮಾನಿಸಿದೆ. ಮಿಕ್ಕಂತೆ ಬೇರೆ ಮಲ್ಟಿಪ್ಲೆಕ್ಸ್ ಚೈನ್‍ಗಳಾದ ಸಿನಿಪೊಲಿಸ್‍ ಮತ್ತು ಏಕಪರದೆಯ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಕ್ಕೆ ಮುಂದಾಗಿದೆ.

ಸಲಾರ್ ಪಾರ್ಟ್ 1: ಸೀಸ್‍ಫೈರ್ ಚಿತ್ರದಲ್ಲಿ ಪ್ರಭಾಸ್‍ ಜೊತೆಗೆ ಪೃಥ್ವಿರಾಜ್‍ ಸುಕುಮಾರನ್‍, ಶ್ರುತಿ ಹಾಸನ್‍, ಜಗಪತಿ ಬಾಬು ಮುಂತಾದವರು ನಟಿಸಿದ್ದು, ಪ್ರಶಾಂತ್ ನೀಲ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಹೊಂಬಾಳೆ ಫಿಲಂಸ್‍ನಡಿ ವಿಜಯ್‍ ಕಿರಗಂದೂರು ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಎರಡೂ ಚಿತ್ರಗಳ ಟಿಕೆಟ್​ ಅಡ್ವಾನ್​ ಬುಕ್​: ಶಾರುಖ್ ಖಾನ್ ಅಭಿನಯದ ಡಂಕಿ ಹಾಗೂ ಪ್ರಭಾಸ್ ಅಭಿನಯದ ಆ್ಯಕ್ಷನ್​ ಎಂಟರ್​ಟೈನ್ಮೆಂಟ್​​ ಸಲಾರ್ ವೀಕ್ಷಿಸಲು ಅಪಾರ ಸಂಖ್ಯೆಯ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಎರಡೂ ಸಿನಿಮಾಗಳು ಪ್ರೇಕ್ಷಕರ ಆಸಕ್ತಿ ಹೆಚ್ಚಿಸಿದೆ. ಸಿನಿಮಾ ಉದ್ಯಮದ ಟ್ರ್ಯಾಕರ್ ಸ್ಯಾಕ್ನಿಲ್ಕ್ ವರದಿ ಪ್ರಕಾರ, ಸಲಾರ್ ಅಡ್ವಾನ್ಸ್ ಟಿಕೆಟ್ ಸೇಲ್​​ ವ್ಯವಹಾರದಲ್ಲಿ 'ಡಂಕಿ'ಯನ್ನು ಮೀರಿಸಿದೆ.

ಸಲಾರ್ ಈಗಾಗಲೇ 12.85 ಕೋಟಿ ರೂಪಾಯಿಗಳ ವ್ಯವಹಾರ (ಮೊದಲ ದಿನದ ಕಲೆಕ್ಷನ್​) ನಡೆಸಿದೆ. ದೇಶಾದ್ಯಂತ 6,439 ಶೋಗಳಿಗೆ 5,77,406 ಅಧಿಕ ಟಿಕೆಟ್‌ಗಳು ಮಾರಾಟ ಗೊಂಡಿವೆ.

ಮತ್ತೊಂದೆಡೆ ಡಂಕಿ ಸಿನಿಮಾ 12,612 ಶೋಗಳಲ್ಲಿ 3,62,027 ಕ್ಕೂ ಅಧಿಕ ಟಿಕೆಟ್‌ಗಳನ್ನು ಮಾರಾಟ ಮಾಡುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ 10.3 ಕೋಟಿ ರೂ.ನ ಬ್ಯುಸಿನೆಸ್​ ನಡೆದಿದೆ.

ಇದನ್ನೂ ಓದಿ: 'ಸಲಾರ್'​​ ತಿರಸ್ಕರಿಸಿದ್ದರಂತೆ ಪ್ರಭಾಸ್!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.