ETV Bharat / entertainment

ಜಾಕ್ ಮಂಜು, ಚಕ್ರವರ್ತಿ ಚಂದ್ರಚೂಡ್​ ನೇತೃತ್ವದಲ್ಲಿ 'ಪಾದರಾಯ' ಸಿನಿಮಾ

ಜಾಕ್ ಮಂಜು ನಿರ್ಮಾಣದ ಪ್ಯಾನ್ ಇಂಡಿಯಾ ಚಿತ್ರ 'ಪಾದರಾಯ'ಕ್ಕೆ ಚಕ್ರವರ್ತಿ ಚಂದ್ರಚೂಡ್ ಆ್ಯಕ್ಷನ್​ ಕಟ್ ಹೇಳಲಿದ್ದಾರೆ.

Sandalwood new pan india movie titled as Padaraya
ಪಾದರಾಯ ಸಿನಿಮಾ
author img

By

Published : Dec 6, 2022, 12:17 PM IST

ಕಿಚ್ಚ ಸುದೀಪ್ ಅವರ ಸೂಪರ್​ ಹಿಟ್ 'ವಿಕ್ರಾಂತ್ ರೋಣ' ಸಿನಿಮಾ ಬಳಿಕ ನಿರ್ಮಾಪಕ ಜಾಕ್ ಮಂಜು ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಮಾಡಲು ಸಜ್ಜಾಗಿದ್ದಾರೆ. ಚಕ್ರವರ್ತಿ ಚಂದ್ರಚೂಡ್ ಮತ್ತೆ ನಿರ್ದೇಶನದ ಟ್ರ್ಯಾಕ್​​ಗೆ ಮರಳಿದ್ದಾರೆ. ಹೌದು, ಇತ್ತೀಚೆಗೆ ಈ ಪ್ಯಾನ್ ಇಂಡಿಯಾ ಸಿನಿಮಾದ ಟೈಟಲ್ ಅನಾವರಣ ಆಗಿದೆ. ಚಿತ್ರಕ್ಕೆ 'ಪಾದರಾಯ' ಎಂದು ಶೀರ್ಷಿಕೆ ಇಡಲಾಗಿದೆ.

ಮೈನಾ, ಸಂಜು ವೆಡ್ಸ್ ಗೀತಾ ಖ್ಯಾತಿಯ ನಿರ್ದೇಶಕ ನಾಗಶೇಖರ್ ಈ ಚಿತ್ರದಲ್ಲಿ ನಾಯಕ ನಟನಾಗಿ ನಟಿಸುತ್ತಿದ್ದಾರೆ. ನೈಜ ಘಟನೆ ಆಧರಿಸಿದ ಸಿನಿಮಾಗೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಚಕ್ರವರ್ತಿ ಚಂದ್ರಚೂಡ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಏಕಕಾಲದಲ್ಲಿ ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಸೇರಿ ಒಟ್ಟು ಐದು ಭಾಷೆಯಲ್ಲಿ ನಿರ್ಮಾಣವಾಗಿ ಬಿಡುಗಡೆಯಾಗಲಿದೆ. ನಾಗಶೇಖರ್ ನಾಯಕ ನಟನಾಗಿ ನಟಿಸುವುದರ ಜೊತೆಗೆ ಚಿತ್ರಕ್ಕೆ ಸಹ ನಿರ್ಮಾಪಕರಾಗಿಯೂ ಕೆಲಸ ಮಾಡಲಿದ್ದಾರೆ.

ಪಾದರಾಯ ಎಂದರೆ ಹನುಮಂತ. ಅಂಜನಾದ್ರಿ ಸುತ್ತಮುತ್ತ ನಡೆಯುವ ಕಥೆ ಚಿತ್ರಲ್ಲಿದೆ. 2013-14ರಲ್ಲಿ ನಡೆದ ನೈಜ ಘಟನೆ ಆಧರಿಸಿದ ಸಿನಿಮಾವಿದು. ಈ ಘಟನೆ ಆರು ರಾಜ್ಯಕ್ಕೆ ಸಂಬಂಧಿಸಿದ್ದು, ಯೂನಿವರ್ಸಲ್ ಸಬ್ಜೆಕ್ಟ್ ಆದ್ರಿಂದ ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿದ್ದೇವೆ. ಶಾಲಿನಿ ಆರ್ಟ್ಸ್ ಬ್ಯಾನರ್ ಅಡಿ ಜಾಕ್ ಮಂಜು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸದ್ಯ ಚಿತ್ರಕ್ಕಾಗಿ ನಾಯಕಿ ಹುಡುಕಾಟದಲ್ಲಿದ್ದೇವೆ, ಜನವರಿಯಲ್ಲಿ ಚಿತ್ರೀಕರಣ ಆರಂಭಿಸಲಿದ್ದೇವೆ. ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ಹಂಚಿಕೊಳ್ಳೋದಾಗಿ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ತಿಳಿಸಿದ್ದಾರೆ.

ಇದನ್ನೂ ಓದಿ: ಇಯರ್ ಎಂಡ್​ ಪಾರ್ಟಿಗೆ ಶುಗರ್ ಫ್ಯಾಕ್ಟರಿಯ ಹಾಡು ರೆಡಿ

ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ‌ವಿದೆ. ತಮಿಳು ಚಿತ್ರರಂಗದ ಹೆಸರಾಂತ ಸಂಕಲನಕಾರ ಆಂಟೋನಿ ಚಿತ್ರದ ಸಂಕಲನ ಜವಾಬ್ದಾರಿ ಹೊತ್ತಿದ್ದಾರೆ. ಸತ್ಯ ಹೆಗಡೆ ಕ್ಯಾಮೆರಾ ವರ್ಕ್ ಈ ಪಾದರಾಯ ಚಿತ್ರಕ್ಕಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.