ಏಕ್ ಲವ್ ಯಾ ಸಿನಿಮಾ ಮೂಲಕ ಸ್ಯಾಂಡಲ್ವುಡ್ ಅಂಗಳಕ್ಕೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ನಟಿ ರಕ್ಷಿತಾ ಅವರ ಸಹೋದರ ರಾಣಾ ತಮ್ಮ ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿದ್ದಾರೆ. ಪ್ರೇಮ್ ನಿರ್ದೇಶನದಲ್ಲಿ ಮೂಡಿ ಬಂದ ಲವ್ ಕಹಾನಿಗೆ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅನುಭವಿ ಕಲಾವಿದನಂತೆ ಮೊದಲ ಸಿನಿಮಾದಲ್ಲೇ ಮಿಂಚಿ ಚಿತ್ರ ರಸಿಕರ ಮನಗೆದ್ದ ರಾಣಾ ಈಗೇನು ಮಾಡ್ತಿದ್ದಾರೆ? ಮುಂದಿನ ಸಿನಿಮಾ ಯಾವುದು? ಯಾರ ನಿರ್ದೇಶನದಲ್ಲಿ ರಾಣಾ ಮುಂದಿನ ಸಿನಿಮಾ ಮೂಡಿಬರಲಿದೆ? ಎಂಬೆಲ್ಲ ಪ್ರಶ್ನೆಗಳು ಮೂಡೋದು ಸಹಜ. ಅದಕ್ಕೀಗ ಉತ್ತರ ಸಿಕ್ಕಿದೆ. ಹೌದು, ರಾಣಾ ಮುಂದಿನ ಸಿನಿಮಾ ನಿರ್ದೇಶನ ಮಾಡಲಿದ್ದಾರೆ ಯುವ ನಿರ್ದೇಶಕ ವಿಜಯ್ ಈಶ್ವರ್.
ಇದನ್ನೂ ಓದಿ: ನಟ ದೇವರಾಜ್ ಹುಟ್ಟುಹಬ್ಬಕ್ಕೆ ಉಸಿರೇ ಉಸಿರೇ ಸಿನಿಮಾ ಟೀಮ್ನಿಂದ ಗಿಫ್ಟ್.. ಹೊಸ ಪೋಸ್ಟರ್ ರಿಲೀಸ್
ನಿರ್ದೇಶಕ ಪ್ರೇಮ್ ಜೊತೆಗೆ ಹಲವು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ದುಡಿದ ಅನುಭವ ಇರುವ ವಿಜಯ್ ಈಶ್ವರ್ ಸ್ವತಂತ್ರ ನಿರ್ದೇಶಕನಾಗಿ ಬಡ್ತಿ ಪಡೆಯಲು ಸಜ್ಜಾಗಿದ್ದಾರೆ. ತಮ್ಮ ಮೊದಲ ಸಿನಿಮಾದಲ್ಲಿ ರಾಣಾಗೆ ಡೈರೆಕ್ಟ್ ಮಾಡಲಿದ್ದಾರೆ. ವಿಜಯ್ ಈಶ್ವರ್ ಮಾಡಿಕೊಂಡ ವಿಷಯ ನಟ ರಾಣಾ ಅವರಿಗೂ ಇಂಪ್ರೆಸ್ ಮಾಡಿದ್ದು, ವಿಜಯ್ ಜೊತೆ ಕೈಜೋಡಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಪ್ರೇಮ್, ರಕ್ಷಿತಾ ಕೂಡ ವಿಜಯ್ ಈಶ್ವರ್ ಹೇಳಿದ ಕಥೆ ಕೇಳಿ ಥ್ರಿಲ್ ಆಗಿದ್ದಾರಂತೆ. ಯಾವ ರೀತಿಯ ಸಬ್ಜೆಕ್ಟ್, ರಾಣಾ ಲುಕ್ ಹೇಗಿರುತ್ತೆ, ಸಿನಿಮಾದ ತಯಾರಿ ಯಾವ ಹಂತದಲ್ಲಿದೆ. ಇದೆಲ್ಲದಕ್ಕೂ ಸದ್ಯದಲ್ಲೇ ಉತ್ತರ ಸಿಗಲಿದೆ.