ನಾಟಕಕಾರ ಹಾಗೂ ಕನ್ನಡ ಚಿತ್ರರಂಗದ ಹಿರಿಯ ನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಅವರಿಗೆ ಭಾನುವಾರ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಕುಮಾರಸ್ವಾಮಿ ಲೇಔಟ್ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ಬಗ್ಗೆ 'ಈಟಿವಿ ಭಾರತ' ಜೊತೆ ಮಾತನಾಡಿರುವ ಲೋಹಿತಾಶ್ವ ಅವರ ಪುತ್ರ ಶರತ್ ಲೋಹಿತಾಶ್ವ, ತಂದೆಯವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಕೂಡ ತಂದೆಗೆ ಚಿಕಿತ್ಸೆ ನೀಡುತ್ತಿದ್ದಾರೆ. ಚಿಕಿತ್ಸೆಗೆ ತಂದೆಯವರು ಯಾವ ರೀತಿ ಸ್ಪಂದನೆ ಮಾಡ್ತಾರೆ ಅನ್ನೋದು ಗೊತ್ತಾಗಬೇಕಿದೆ ಎಂದು ತಿಳಿಸಿದ್ದಾರೆ.
ಇನ್ನು, ಲೋಹಿತಾಶ್ವ ಅವರು ಚಿತ್ರ ನಟ, ನಾಟಕಕಾರ ಮತ್ತು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದು, ಅವರು 500ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ರಂಗ ನಾಟಕಗಳು ಹಾಗೂ ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ.
(ಓದಿ: ಗಂಧದಗುಡಿ ಟ್ರೈಲರ್ ರಿಲೀಸ್ ವೇಳೆ ಅಶ್ವಿನಿ ಪುನೀತ್ ರಾಜ್ಕುಮಾರ್ ಭಾವುಕ: ಅಪ್ಪು ಸಿನಿಮಾ ಬಗ್ಗೆ ಹೇಳಿದ್ದೇನು?)