ETV Bharat / entertainment

ಗುರು ಶಿಷ್ಯರು ಚಿತ್ರದ ಬಾಲ ಪ್ರತಿಭೆಗಳಿಗೆ ದುನಿಯಾ ವಿಜಯ್​ ಫಿದಾ

ಶರಣ್​ ನಟನೆಯ ಗುರು ಶಿಷ್ಯರು ಚಿತ್ರವು ಸದ್ಯ ಚಂದನವನದಲ್ಲಿ ಗಮನ ಸೆಳೆಯುತ್ತಿದೆ. ದೇಶೀ ಆಟ ಖೋಖೋವನ್ನು ಕೇಂದ್ರವಾಗಿಟ್ಟುಕೊಂಡು ತೆರೆಗೆ ಬರುತ್ತಿರುವ ಗುರು ಶಿಷ್ಯರು ಚಿತ್ರತಂಡದಿಂದ ಹಿರಿಯ ಕಲಾವಿದರನ್ನು ಸನ್ಮಾನ ಮಾಡಲಾಯಿತು.

Senior artists are honored by Guru Shishyaru film team
ಗುರು ಶಿಷ್ಯರು ಚಿತ್ರ ತಂಡದಿಂದ ಹಿರಿಯ ಕಲಾವಿದ ಸನ್ಮಾನ
author img

By

Published : Sep 5, 2022, 7:57 PM IST

ಎಂಭತ್ತರ ದಶಕದಲ್ಲಿ ದ್ವಾರಕೀಶ್ ನಿರ್ಮಾಣದ ಗುರು ಶಿಷ್ಯರು ಚಿತ್ರ ಕನ್ನಡಿಗರ ಮನ ಗಿದ್ದಿತ್ತು. ಈಗ ಆದೇ ಹೆಸರಿನ ಚಿತ್ರ ಮತ್ತೊಮ್ಮೆ ಬರುತ್ತಿದೆ. ಶರಣ್ ಹಾಗೂ ತರುಣ್ ಕಿಶೋರ್ ಸುಧೀರ್ ನಿರ್ಮಿಸಿರುವ ಈ ಚಿತ್ರವನ್ನು ಜಡೇಶ್ ಕೆ ಹಂಪಿ ನಿರ್ದೇಶಿಸಿದ್ದಾರೆ. ಶರಣ್​ ಅವರಿಗೆ ನಿಶ್ವಿಕಾ ನಾಯ್ಡು ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ದೇಸಿ ಕ್ರೀಡೆಯಾದ ಖೊಖೊ ಆಟದ ಸುತ್ತ ಈ ಚಿತ್ರದ ಕಥೆ ಹೆಣೆಯಲಾಗಿದೆ. ಚಿತ್ರದಲ್ಲಿ ಶರಣ್ ಖೊಖೊ ಕೋಚರ್ ಆಗಿ ಕಾಣಿಸಿಕೊಂಡಿದ್ದಾರೆ. ಹದಿಮೂರು ಜನ ಖೊಖೊ ಆಟಗಾರರ ಪಾತ್ರದಲ್ಲಿ ಆರು ಜನ ಸಿನಿರಂಗದ ನಟರ ಪುತ್ರರು ನಟಿಸಿದ್ದು ವಿಶೇಷ.

ಶರಣ್ ಪುತ್ರ ಹೃದಯ್, ಪ್ರೇಮ್(ನೆನಪಿರಲಿ) ಪುತ್ರ ಏಕಾಂತ್, ರವಿಶಂಕರ್ ಗೌಡ ಪುತ್ರ ಸೂರ್ಯ, ನವೀನ್ ಕೃಷ್ಣ ಪುತ್ರ ಹರ್ಷಿತ್, ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಹಾಗೂ ಶಾಸಕ‌ ರಾಜು ಗೌಡ ಅವರ ಪುತ್ರ ಮಣಿಕಂಠ ಈ ಚಿತ್ರದಲ್ಲಿ ನಟಿಸಿದ್ದಾರೆ. ಇವರಲ್ಲದೇ ಆಸಿಫ್ ಮುಲ್ಲಾ, ಸಾಂಬಶಿವ, ಸಂದೇಶ್, ಸಾಗರ್, ರುದ್ರಗೌಡ, ಅನುಪ್ ರಾಮಣ್ಣ ಮತ್ತು ಅಮಿತ್ ಬಿ ಕೂಡ ಖೊಖೊ ಆಟಗಾರರಾಗಿ ಕಾಣಿಸಿಕೊಂಡಿದ್ದಾರೆ.

Senior artists are honored by Guru Shishyaru film team
ಗುರು ಶಿಷ್ಯರು ಚಿತ್ರ ತಂಡದಿಂದ ಹಿರಿಯ ಕಲಾವಿದ ಸನ್ಮಾನ

ಇತ್ತೀಚೆಗೆ ಈ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭ ಅದ್ಧೂರಿಯಾಗಿ ನಡೆಯಿತು. ಹಿರಿಯ ನಟ ದ್ವಾರಕೀಶ್, ನಾಯಕರಾದ ದುನಿಯಾ ವಿಜಯ್ ಹಾಗೂ ಪ್ರಜ್ವಲ್ ದೇವರಾಜ್ ಸೇರಿ ಈ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದರು. ಇದೇ ವೇಳೆ, ಹಿರಿಯ ಕಲಾವಿದರಾದ ದ್ವಾರಕೀಶ್, ಎಂ.ಎಸ್.ಉಮೇಶ್, ಎಂ.ಎನ್ ಲಕ್ಷ್ಮೀದೇವಿ ಹಾಗೂ ಡಿಂಗ್ರಿ ನಾಗರಾಜ್ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಹಿರಿಯರು ಚಿತ್ರತಂಡಕ್ಕೆ ‌ಮನತುಂಬಿ ಹಾರೈಸಿದರು.

ಶರಣ್, ಪ್ರೇಮ್, ರವಿಶಂಕರ್ ಗೌಡ, ನವೀನ್ ಕೃಷ್ಣ ಹಾಗೂ ರಾಜು ಗೌಡ ದಂಪತಿ ತಮ್ಮ ಮಕ್ಕಳು ಈ ಸಿನಿಮಾಗೆ ಆಯ್ಕೆಯಾದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು. ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಸೇರಿದಂತೆ ಚಿತ್ರದಲ್ಲಿ ನಟಿಸಿರುವ ಎಲ್ಲ ಹುಡಗರು ತಮ್ಮ ಅನುಭವ ಹಂಚಿಕೊಂಡರು. ಚಿತ್ರ ಸಾಗಿ ಬಂದ ಕುರಿತು "ಜಂಟಲ್ ಮನ್" ಖ್ಯಾತಿಯ ನಿರ್ದೇಶಕ ಜಡೇಶ್ ಕೆ ಹಂಪಿ ಮಾಹಿತಿ ನೀಡಿದರು. ಉತ್ತಮ ಪಾತ್ರ ನೀಡಿರುವುದಕ್ಕೆ ನಿಶ್ವಿಕಾ ನಾಯ್ಡು ಧನ್ಯವಾದ ತಿಳಿಸಿದರು. ಈಗಾಗಲೇ ಬಿಡುಗಡೆಯಾಗಿರುವ ಹಾಡು ಹಿಟ್ ಆಗಿರುವುದಕ್ಕೆ ಅಜನೀಶ್ ಲೋಕನಾಥ್ ಸಂತೋಷಪಟ್ಟರು.

ಇದೊಂದು ಉತ್ತಮ ಚಿತ್ರ. ತುಂಬಾ ಚೆನ್ನಾಗಿ ಮೂಡಿಬಂದಿದೆ. ರಾಬರ್ಟ್​ನಲ್ಲಿ ದುಡಿದ ದುಡ್ಡನ್ನೆಲ್ಲ ಈ ಚಿತ್ರಕ್ಕೆ ಹಾಕಿದ್ದೇನೆ. ಶಾಸಕ ರಾಜುಗೌಡ ನಮಗೆ ಬೆನ್ನೆಲುಬಾಗಿ ನಿಂತಿದ್ದಾರೆ. ದೇಸಿ ಕ್ರೀಡೆ ಕುರಿತಾದ ಸಿನಿಮಾಗಳು ನಮ್ಮಲ್ಲಿ ಬರುವುದು ತುಂಬಾ ಕಡಿಮೆ. ಹಾಗಾಗಿ ಖೊಖೊ ಅಂತಹ ಆಟವನ್ನು ನಾವು ಆಯ್ಕೆ ಮಾಡಿಕೊಂಡೆವು. ಇದೇ 23ರಂದು ಚಿತ್ರ ತೆರೆಗೆ ಬರುತ್ತಿದೆ. ಒಂದು ಖುಷಿ ವಿಚಾರ ಎಂದರೆ ನಾವು ಬಿಡುಗಡೆಗೂ ಪೂರ್ವದಲ್ಲೇ ಸೇಫ್ ಆಗಿದ್ದೀವೆ ಎಂದು ತರುಣ್ ಕಿಶೋರ್ ಸುಧೀರ್ ತಿಳಿಸಿದರು.

ನಾನು ಧನ್ಯವಾದ ಹೇಳಲು ಶುರು ಮಾಡಿದರೆ ಎರಡು ಗಂಟೆ ಬೇಕು. ಅಷ್ಟು ಜನರನ್ನು ನಾನು ನೆನಪಿಸಿಕೊಳ್ಳಬೇಕು. ಎಲ್ಲರಿಗೂ ಧನ್ಯವಾದ. ನನ್ನ ಮಗ ಈ ಚಿತ್ರದಲ್ಲಿ ನಟಿಸಿದ್ದಾನೆ‌‌. ನನ್ನ ಮಗ ಒಳ್ಳೆಯ ನಟನಾದನೋ? ಇಲ್ಲವೋ? ಗೊತ್ತಿಲ್ಲ. ಈ ಸಿನಿಮಾ ಸಹವಾಸದಿಂದ ಒಳ್ಳೆಯ ಮನುಷ್ಯನಾಗಿದ್ದಾನೆ. ನನ್ನ ಮಗನಿಗೆ ಸ್ನೇಹಿತ ದುನಿಯಾ ವಿಜಯ್ ಸಾಕಷ್ಟು ಸಲಹೆ ನೀಡಿದ್ದಾರೆ. ಎಲ್ಲ ಮಕ್ಕಳು ಚೆನ್ನಾಗಿ ಅಭಿನಯಿಸಿದ್ದಾರೆ ಎಂದರು ಶರಣ್.

ನಾನು ಆಣೆ ಮಾಡಿ ಹೇಳುತ್ತೇನೆ ಈ ಸಿನಿಮಾ ಸೂಪರ್ ಹಿಟ್ ಆಗುವುದು ಖಂಡಿತ. ಮುಂದೊಂದು ದಿನ ಈ ಮಕ್ಕಳನ್ನಿಟ್ಟುಕೊಂಡು ನಾನು ಒಂದು ಸಿನಿಮಾ ನಿರ್ದೇಶನ ಮಾಡುತ್ತೇನೆ ಎಂದು ದುನಿಯಾ ವಿಜಯ್ ಭರವಸೆ ನೀಡಿದರು.

ನಾನು ಬೇರೆ ಚಿತ್ರದ ಸಮಾರಂಭಕ್ಕೆ ಬಂದಿದ್ದೀನಿ‌ ಅನಿಸುತ್ತಿಲ್ಲ. ನಮ್ಮ ಸಿನಿಮಾನೇ ಅನಿಸುತ್ತಿದೆ. ಇದರಲ್ಲಿ ಅಭಿನಯಿಸಿರುವವರು ಹುಡುಗರಲ್ಲ, ಹುಲಿಗಳು. ಅಷ್ಟು ಚೆನ್ನಾಗಿದೆ ಅವರೆಲ್ಲರ ಅಭಿನಯ ಎಂದು ಪ್ರಜ್ವಲ್ ದೇವರಾಜ್ ಪ್ರಶಂಸೆಯ ಮಾತುಗಳನ್ನಾಡಿದರು. ಮಾಲತಿ ಸುಧೀರ್, ನಂದ ಕಿಶೋರ್, ಡಿ.ಎಸ್ ಮ್ಯಾಕ್ಸ್ ದಯಾನಂದ್ ಸೇರಿದಂತೆ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಕಾಫಿ ವಿತ್​ ಕರಣ್ ಶೋನಲ್ಲಿ ಮತ್ತೆ ಫಸ್ಟ್​ನೈಟ್​ ಟಾಕ್​.. ಈ ಬಾರಿ ಯಾರ ಸರದಿ ಗೊತ್ತಾ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.