ETV Bharat / entertainment

Jawan Movie: ಶಾರುಖ್ ಖಾನ್ ನಟನೆಯ 'ಜವಾನ್' ಚಿತ್ರದ ಓಟಿಟಿ, ಸ್ಯಾಟಲೈಟ್ ಹಕ್ಕುಗಳು ಭಾರಿ ಮೊತ್ತಕ್ಕೆ ಮಾರಾಟ! - ಓಟಿಟಿ

ಜನವರಿಯಲ್ಲಿ ಶಾರುಖ್ ಖಾನ್ ಅಭಿನಯದ ಪಠಾಣ್ ಚಿತ್ರ ಜಗತ್ತಿನಾದ್ಯಂತ ಬಿಡುಗಡೆಗೊಂಡು 1,000 ಕೋಟಿ ರೂ ಗಳಿಕೆ ಮಾಡುವ ಮೂಲಕ ಬ್ಲಾಕ್‌ ಬಸ್ಟರ್ ಎಂದನಿಸಿಕೊಂಡಿತ್ತು. ಈಗ ‘ಜವಾನ್’ ಚಿತ್ರದ ಮೇಲೆ ನಿರೀಕ್ಷೆಗಳು ಹೆಚ್ಚಾಗಿದ್ದು, ಚಿತ್ರದ ಹಕ್ಕುಗಳನ್ನು ತಮ್ಮದಾಗಿಸಿಕೊಳ್ಳುವುದಕ್ಕೆ ಹಲವು ಪ್ರತಿಷ್ಠಿತ ಸಂಸ್ಥೆಗಳು ಮುಂದಾಗಿವೆ.

Jawan Movie
ಶಾರುಖ್ ಖಾನ್ ಅಭಿನಯದ ಜವಾನ್ ಚಿತ್ರ
author img

By

Published : Jun 8, 2023, 10:40 PM IST

ಶಾರುಖ್ ಖಾನ್ ಅಭಿನಯದ ‘ಜವಾನ್’ ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳು ಮನೆಮಾಡಿವೆ. ಈ ವರ್ಷದ ನಿರೀಕ್ಷಿತ ಮತ್ತು ದುಬಾರಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಜವಾನ್ ಚಿತ್ರವನ್ನು ಶಾರುಖ್ ಖಾನ್​ರವರ ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಸಂಸ್ಥೆ ನಿರ್ಮಿಸುತ್ತಿದೆ. ತಮಿಳಿನ ಜನಪ್ರಿಯ ನಿರ್ದೇಶಕ ಅಟ್ಲಿ ನಿರ್ದೇಶನ ಮಾಡುತ್ತಿದ್ದಾರೆ.

ಈ ವರ್ಷದ ಜನವರಿಯಲ್ಲಿ ಬಿಡುಗಡೆಯಾಗಿದ್ದ ಶಾರುಖ್ ಖಾನ್ ಅಭಿನಯದ ‘ಪಠಾಣ್’ ಚಿತ್ರವು ಜಗತ್ತಿನಾದ್ಯಂತ 1000 ಕೋಟಿ ರೂ.ಗೂ ಹೆಚ್ಚು ಗಳಿಕೆ ಮಾಡುವ ಮೂಲಕ ಬ್ಲಾಕ್‌ ಬಸ್ಟರ್ ಎಂದೆನಿಸಿಕೊಂಡಿತ್ತು. ಈಗ ‘ಜವಾನ್’ ಚಿತ್ರದ ಮೇಲೆ ನಿರೀಕ್ಷೆಗಳು ಹೆಚ್ಚಾಗಿರುವುದರಿಂದ ಚಿತ್ರದ ಹಕ್ಕುಗಳನ್ನು ತಮ್ಮದಾಗಿಸಿಕೊಳ್ಳುವುದಕ್ಕೆ ಹಲವು ಪ್ರತಿಷ್ಠಿತ ಸಂಸ್ಥೆಗಳು ಮುಂದಾಗಿವೆ. ದೊಡ್ಡ ಮೊತ್ತ ಕೊಟ್ಟು ಹಕ್ಕುಗಳನ್ನು ಖರೀದಿಸಿರುವ ಸುದ್ದಿ ಬಂದಿದೆ.

ಜವಾನ್ ಚಿತ್ರದ ಓಟಿಟಿ, ಸ್ಯಾಟಲೈಟ್ ಮತ್ತು ಸಂಗೀತ ಹಕ್ಕುಗಳಿಗೆ ಬೇರೆಬೇರೆ ಸಂಸ್ಥೆಗಳು ದೊಡ್ಡ ಆಫರ್ ನೀಡಿದ್ದು, 250 ಕೋಟಿ ರೂಪಾಯಿಗೆ ಎಲ್ಲ ಹಕ್ಕುಗಳನ್ನು ಖರೀದಿಸಿರುವ ಸುದ್ದಿ ಇದೆ. ಆದರೆ ಚಿತ್ರತಂಡದವರು ಮಾತ್ರ ಇನ್ನೂ ಹಕ್ಕುಗಳು ಎಷ್ಟಕ್ಕೆ ಮಾರಾಟವಾಗಿವೆ ಎಂಬ ಗುಟ್ಟು ಬಿಟ್ಟುಕೊಟ್ಟಿಲ್ಲ. ಇದೀಗ ಜವಾನ್‌ ತೆರೆಗೆ ಬರಲು ಸಿದ್ಧವಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಈ ಚಿತ್ರವು ಜೂನ್ 2 ರಂದು ಚಿತ್ರಮಂದಿರಗಳಿಗೆ ಬರಲಿದೆ ಎಂದು ನಿರ್ಮಾಪಕರು ಘೋಷಿಸಿದ್ದರು. ಆದರೆ ಚಿತ್ರ ಸೆಪ್ಟೆಂಬರ್‌ನಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಇತ್ತೀಚೆಗೆ ಮತ್ತೆ ನಿರ್ಮಾಪಕರು ಸ್ಪಷ್ಟಪಡಿಸಿದ್ದಾರೆ.

ಆಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ಶಾರುಖ್ ಖಾನ್ ಜೊತೆಗೆ ನಯನತಾರಾ, ವಿಜಯ್ ಸೇತುಪತಿ, ಪ್ರಿಯಾಮಣಿ ಸೇರಿದಂತೆ ಹಲವು ಪ್ರಸಿದ್ಧ ಕಲಾವಿದರು ಅಭಿನಯಿಸಿದ್ದಾರೆ. ತಮಿಳಿನ ಜನಪ್ರಿಯ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್, ಈ ಚಿತ್ರದ ಮೂಲಕ ಬಾಲಿವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಸೆಪ್ಟೆಂಬರ್ 7ರಂದು ಸಿನಿಮಾ ಜಗತ್ತಿನಾದ್ಯಂತ ಬಿಡುಗಡೆಗೊಳ್ಳಲಿದೆ.

ಮತ್ತೆ ಶಾರುಖ್- ಪ್ರಿಯಾಮಣಿ ನಟನೆ: ಪ್ಯಾನ್ ಇಂಡಿಯಾ ನಟಿ ಪ್ರಿಯಾಮಣಿ ಹಲವಾರು ಸಿನಿಮಾಗಳಲ್ಲಿ ಈಗ ಬ್ಯುಸಿಯಾಗಿದ್ದಾರೆ. ಪ್ರಸ್ತುತ ಶಾರುಖ್ ನಟಿಸಿರುವ ‘ಜವಾನ್’ ಚಿತ್ರದಲ್ಲಿ ಪ್ರಿಯಾಮಣಿ ನಟಿಸುತ್ತಿರುವುದನ್ನು ಖುಷಿಯಿಂದ ಹೇಳಿಕೊಂಡಿದ್ದಾರೆ. ಅಟ್ಲಿ ನಿರ್ದೇಶನದ ಜವಾನ್ ಚಿತ್ರದಲ್ಲಿ ಮಲ್ಟಿ ಸ್ಟಾರ್ಸ್ ನಟಿಸುತ್ತಿದ್ದು,ಅದರಲ್ಲಿ ನಾನೂ ಒಬ್ಬಳು. ಈ ಹಿಂದೆ ಚೆನ್ನೈ ಎಕ್ಸ್‌ಪ್ರೆಸ್ ಸಿನಿಮಾದಲ್ಲಿ ಒಂದು ಹಾಡಿಗೆ ಶಾರುಖ್ ಜೊತೆ ಮಸ್ತ್ ಆಗಿ ಡ್ಯಾನ್ಸ್ ಮಾಡಿದ್ದ ಪ್ರಿಯಾಮಣಿ, ಈಗ ಮತ್ತೆ ಶಾರುಖ್- ಪ್ರಿಯಾ ಒಟ್ಟಿಗೆ ನಟಿಸುತ್ತಿದ್ದಾರೆ.

‘ಜವಾನ್’ ಚಿತ್ರದಲ್ಲಿ ಶಾರುಖ್ ಜೊತೆ ನಟಿಸುತ್ತಿದ್ದೇನೆ ಎಂಬ ಬಗ್ಗೆ ಸಂತಸವಿದೆ. ಶಾರುಖ್ ಖಾನ್ ಜತೆಗೆ ನಟಿಸುವುದೆಂದರೆ ಆಗೋಚರ ಅನುಭವ. ಈಗಲೂ ಶಾರುಖ್ ನನ್ನನ್ನು ನೆನಪಿಟ್ಟುಕೊಂಡಿದ್ದಾರೆ ಎನ್ನುವುದು ನನಗೆ ಖುಷಿ ಎಂದು ಹೇಳಿದ್ದಾರೆ.

ಇದನ್ನೂಓದಿ:ಪರಿಣಿತಿ ರಾಘವ್​ ಲಂಡನ್​ ವಿಡಿಯೋ ಶೇರ್ ಮಾಡಿದ ಅಭಿಮಾನಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.