ಮುಂಬೈ: ರೋಹಿತ್ ಶೆಟ್ಟಿ ನಿರ್ದೇಶನದ ‘ಇಂಡಿಯನ್ ಪೊಲೀಸ್ ಫೋರ್ಸ್’ ವೆಬ್ ಸೀರಿಸ್ ಶೂಟಿಂಗ್ ನಡೆಯುತ್ತಿದ್ದಾಗ ನಟಿ ಶಿಲ್ಪಾ ಶೆಟ್ಟಿ ಅವರ ಕಾಲಿಗೆ ಗಾಯವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಇನ್ಸ್ಟಾಗ್ರಾಮ್ನಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಮುಂದಿನ ಆರು ವಾರಗಳ ಕಾಲ ವಿಶ್ರಾಂತಿ ಪಡೆದುಕೊಳ್ಳುವಂತೆ ವೈದ್ಯರು ಸೂಚಿಸಿರುವುದಾಗಿ ತಿಳಿಸಿದ್ದಾರೆ.
- " class="align-text-top noRightClick twitterSection" data="
">
ಅಪಾಯಕಾರಿ ಆ್ಯಕ್ಷನ್ ಶೂಟಿಂಗ್ ನಡೆಯುತ್ತಿದ್ದಾಗ ಅವಘಡ ಸಂಭವಿಸಿದೆ. ಗಾಲಿಕುರ್ಚಿಯಲ್ಲಿ ಕುಳಿತುಕೊಂಡಿರುವ ಚಿತ್ರ ಶೇರ್ ಮಾಡಿರುವ ಶಿಲ್ಪಾ ಶೆಟ್ಟಿ, ಶೀಘ್ರವಾಗಿ ಶೂಟಿಂಗ್ಗೆ ಮರಳಲಿದ್ದೇನೆ, ಅಭಿಮಾನಿಗಳ ಹಾರೈಕೆ ಇರಲಿ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಜಿಮ್ ವೇಳೆ ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ್ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು
ಇಂಡಿಯನ್ ಪೊಲೀಸ್ ಫೋರ್ಸ್ನಲ್ಲಿ ತಾರಾಗಣದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ, ವಿವೇಕ್ ಒಬೆರಾಯ್ ಮತ್ತು ಇಶಾ ತಲ್ವಾರ್ ಇದ್ದಾರೆ. ಈ ವೆಬ್ ಸರಣಿ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗಲಿದೆ. ಶಿಲ್ಪಾ ಶೆಟ್ಟಿ ಅವರಿಗಿದು ಚೊಚ್ಚಲ OTT ಸರಣಿಯಾಗಿದೆ.