ಬೆಂಗಳೂರು : ಸ್ಯಾಂಡಲ್ವುಡ್ನಲ್ಲಿ ತಮ್ಮ ಕಾಮಿಡಿ ಮೂಲಕ ಮನೆಮಾತಾಗಿರುವ ತರಂಗ ವಿಶ್ವ, ಮೊದಲ ಬಾರಿಗೆ ಗಿರ್ಕಿ ಸಿನಿಮಾ ಮೂಲಕ ಪೂರ್ಣ ಪ್ರಮಾಣದ ನಾಯಕನಾಗುತ್ತಿದ್ದಾರೆ. ವಿಶ್ವ ಅವರ ಜೊತೆ ಮತ್ತೊಬ್ಬ ಯುವ ನಟ ಕಾಣಿಸಿಕೊಳ್ಳಲಿದ್ದಾರೆ. ಗಿರ್ಕಿ ಸಿನಿಮಾದ ಮೋಷನ್ ಪೋಸ್ಟರ ಅನ್ನು ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಬಿಡುಗಡೆ ಮಾಡುವ ಮೂಲಕ ತಂಡಕ್ಕೆ ಶುಭ ಹಾರೈಸಿದರು.
ಲವ್, ಥ್ರಿಲ್ಲರ್ ಹಾಗೂ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರವನ್ನು ವೀರೇಶ್ ಪಿ ಎಂ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಸಹ ಇವರೇ ಬರೆದಿದ್ದಾರೆ. ಈ ಹಿಂದೆ ಯೋಗರಾಜ್ ಭಟ್ ಅವರೊಂದಿಗೆ ಕೆಲಸ ಮಾಡಿದ ಅನುಭವ ವೀರೇಶ್ ಪಿ.ಎಂ ಅವರಿಗಿದೆ. ಇನ್ನು ತರಂಗ ವಿಶ್ವ ಹಾಗೂ ವಿಲೋಕ್ ರಾಜ್ ಜೋಡಿಯಾಗಿ ಬಿಗ್ ಬಾಸ ಖ್ಯಾತಿಯ ದಿವ್ಯ ಉರುಡುಗ ಹಾಗೂ ರಾಶಿ ಮಹದೇವ್ ಮುಖ್ಯ ಭೂಮಿಕೆಯಲ್ಲಿರಲಿದ್ದಾರೆ.
ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್ ಸಹಯೋಗದೊಂದಿಗೆ ನಿರ್ಮಾಣವಾಗುತ್ತಿದೆ. ಈ ಚಿತ್ರಕ್ಕೆ ವೀರ್ ಸಮರ್ಥ್ ಸಂಗೀತ ನೀಡಿದ್ದಾರೆ. ಯೋಗರಾಜ್ ಭಟ್, ಜಯಂತ ಕಾಯ್ಕಿಣಿ, ವೀರೇಶ್ ಪಿ ಎಂ ಹಾಡುಗಳನ್ನು ಬರೆದಿದ್ದಾರೆ. ನವೀನ್ ಕುಮಾರ್ ಛಲ್ಲ ಛಾಯಾಗ್ರಹಣ, ಮಧು ತುಂಬಕೆರೆ ಅವರ ಸಂಕಲನ ಈ ಚಿತ್ರಕ್ಕಿದೆ.
ವಿನೋದ್ ಮಾಸ್ಟರ್ ಸಾಹಸ ನಿರ್ದೇಶನ ಹಾಗೂ ರಾಮು, ಮೋಹನ್ ಅವರ ನೃತ್ಯ ನಿರ್ದೇಶನವಿದೆ. ಸದ್ಯ ಎ2 ಮ್ಯೂಸಿಕ್ (A2 music) ಮೂಲಕ ಬಿಡುಗಡೆಯಾಗಿರುವ ಈ ಮೋಷನ್ ಪೋಸ್ಟರ್ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮುಂದಿನ ದಿನಗಳಲ್ಲಿ ಟೀಸರ್ ಬಿಡುಗಡೆಯಾಗಲಿದ್ದು, ಮೇನಲ್ಲಿ ಚಿತ್ರ ತೆರೆಗೆ ಬರಲಿದೆ.
ಇದನ್ನೂ ಓದಿ: ಅಪ್ಪ-ಮಗಳ ಬಾಂಧವ್ಯ ಬೆಸೆಯುವ ಶಿವಾಜಿ ಸುರತ್ಕಲ್-2