ETV Bharat / entertainment

ಕಮಲ್ ಹಾಸನ್ ನಿರ್ಮಾಣದ ಸಿನಿಮಾದಲ್ಲಿ ಶಿವಕಾರ್ತಿಕೇಯನ್ - ಸಾಯಿಪಲ್ಲವಿ: ಕಾಶ್ಮೀರದಲ್ಲಿ ಶೂಟಿಂಗ್​

author img

By

Published : May 5, 2023, 7:53 PM IST

ಕಮಲ್​ ಹಾಸನ್​ ನಿರ್ಮಾಣದ ಮುಂದಿನ ಸಿನಿಮಾದಲ್ಲಿ ಶಿವಕಾರ್ತಿಕೇಯನ್ ಮತ್ತು ಸಾಯಿಪಲ್ಲವಿ ತೆರೆ ಹಂಚಿಕೊಳ್ಳಲಿದ್ದಾರೆ.

Shivakarthikeyan Sai Pallavi in a movie produced by Kamal Haasan
ಕಮಲ್ ಹಾಸನ್ ನಿರ್ಮಾಣದ ಸಿನಿಮಾದಲ್ಲಿ ಶಿವಕಾರ್ತಿಕೇಯನ್-ಸಾಯಿಪಲ್ಲವಿ

ದಕ್ಷಿಣ ಚಿತ್ರರಂಗದ ಸೂಪರ್ ಸ್ಟಾರ್ ಕಮಲ್ ಹಾಸನ್ ಸಾರಥ್ಯದಲ್ಲಿ, ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್ ಅಡಿ ಮೂಡಿ ಬಂದಿದ್ದ 'ವಿಕ್ರಮ್' ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ಇದು ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್ ಸಂಸ್ಥೆಯ 50ನೇ ಚಿತ್ರ. ಲೋಕೇಶ್ ಕನಗರಾಜ್ ನಿರ್ದೇಶನದ ಹಾಗೂ ಕಮಲ್ ಹಾಸನ್ ನಟನೆಯ 'ವಿಕ್ರಮ್' ಸಿನಿಮಾ ಗಲ್ಲಾಪೆಟ್ಟಿಗೆಯಲ್ಲೂ ಯಶಸ್ಸು ಕಂಡಿದೆ. ಪ್ರೇಕ್ಷಕರು, ವಿಮರ್ಶಕರ ಉತ್ತಮ ಪ್ರತಿಕ್ರಿಯೆ ಪಡೆದಿತ್ತು.

ಈ ಸಕ್ಸಸ್ ಬಳಿಕ ಇದೇ ನಿರ್ಮಾಣ ಸಂಸ್ಥೆಯಡಿ 51ನೇ ಚಿತ್ರ ಸೆಟ್ಟೇರಿದೆ. ಮೇಜರ್ ಚಿತ್ರ ನಿರ್ಮಿಸಿದ್ದ ರಾಜ್ ಕಮಲ್ ಫಿಲ್ಮ್ಸ್ ಹಾಗೂ ಸೋನಿ ಪಿಕ್ಚರ್ಸ್ ಇಂಟರ್ನ್ಯಾಷನಲ್ ಪ್ರೊಡಕ್ಷನ್ಸ್ ಮತ್ತೊಮ್ಮೆ ಜೊತೆಗೂಡಿ ಹೊಸ ಸಿನಿಮಾಗೆ ಮುನ್ನುಡಿ ಬರೆದಿದೆ. ಚಿತ್ರದ ಶೀರ್ಷಿಕೆಯನ್ನು ಚಿತ್ರತಂಡ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.

ತಮಿಳು ಚಿತ್ರರಂಗದ ಖ್ಯಾತ ನಟ ಶಿವಕಾರ್ತಿಕೇಯನ್ ನಟಿಸುತ್ತಿರುವ 21ನೇ ಚಿತ್ರ ಇದು. ಸಾಯಿ ಪಲ್ಲವಿ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಸಮಾರಂಭ ಚೆನ್ನೈನಲ್ಲಿ ಅದ್ಧೂರಿಯಾಗಿ ನೆರವೇರಿದೆ. ಕಮಲ್ ಹಾಸನ್ ಈ ಸಿನಿಮಾಗೆ ಕ್ಲಾಪ್ ಮಾಡಿ ಶುಭ ಹಾರೈಸಿದ್ದಾರೆ. ಆರ್ ಮಹೇಂದ್ರನ್, ಶಿವಕಾರ್ತಿಕೇಯನ್, ಎಂಎಸ್ ಸಾಯಿ ಪಲ್ಲವಿ, ರಾಜ್ ಕುಮಾರ್ ಪೆರಿಯಸಾಮಿ, ಜಿ.ವಿ ಪ್ರಕಾಶ್, ಸಹ ನಿರ್ಮಾಪಕ ಶ್ರೀ ವಕೀಲ್ ಖಾನ್, ಲಾಡಾ ಗುರುಡೆನ್ ಸಿಂಗ್, ಸೋನಿ ಪಿಕ್ಚರ್ಸ್ ಇಂಟರ್ನ್ಯಾಷನಲ್ ಪ್ರೊಡಕ್ಷನ್ಸ್​ನ ನಾರಾಯಣನ್ ಸೇರಿದಂತೆ ಹಲವರು ಚಿತ್ರದ ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಕಮಲ್ ಹಾಸನ್ ನಿರ್ಮಾಣದ ಸಿನಿಮಾದಲ್ಲಿ ಶಿವಕಾರ್ತಿಕೇಯನ್

ರಾಜ್ ಕುಮಾರ್ ಪೆರಿಯಸಾಮಿ ಕಥೆ ಬರೆದಿದ್ದು, ನಿರ್ದೇಶಿಸಲಿದ್ದಾರೆ. ಶಿವಕಾರ್ತಿಕೇಯನ್ ಅವರನ್ನು ಅವರ ಅಭಿಮಾನಿಗಳು ಹಿಂದೆಂದೂ ನೋಡಿರದ ರೀತಿಯಲ್ಲಿ ದೊಡ್ಡ ಪರದೆಯ ಮೇಲೆ ತರುವ ಪ್ರಯತ್ನದಲ್ಲಿದ್ದಾರೆ. #SK21 ಚಿತ್ರಕ್ಕೆ ಸಾಯಿ ಪಲ್ಲವಿ ನಾಯಕಿಯಾಗಿ ನಟಿಸುತ್ತಿದ್ದು, ಕಾಶ್ಮೀರದಲ್ಲಿ ಎರಡು ತಿಂಗಳುಗಳ ಕಾಲ ಶೂಟಿಂಗ್ ನಡೆಸಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.

ಇದನ್ನೂ ಓದಿ: ಶ್ರೀಲಂಕಾ ಪ್ರೇಕ್ಷಕರ ಮನಗೆದ್ದ ನಾಗತಿಹಳ್ಳಿ ಚಂದ್ರಶೇಖರ್ ಚಿತ್ರಗಳು

ಜಿ.ವಿ ಪ್ರಕಾಶ್ ಸಂಗೀತ ನಿರ್ದೇಶನ, ಸಿ.ಹೆಚ್ ಸಾಯಿ ಛಾಯಾಗ್ರಹಣ, ಆರ್. ಕಲೈವನನ್ ಸಂಕಲನ ಮತ್ತು ಸ್ಟೀಫನ್ ರಿಕ್ಟರ್ ಸಾಹಸ ನಿರ್ದೇಶಕ ಈ ಚಿತ್ರಕ್ಕಿದೆ. ಗಾಡ್ ಬ್ಲೆಸ್ ಎಂಟರ್‌ಟೈನ್‌ಮೆಂಟ್‌ ಸಹ ನಿರ್ಮಾಣ ಸಂಸ್ಥೆಯಾಗಿ ಕೆಲಸ ಮಾಡುತ್ತಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಟೈಟಲ್​ ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಚಿತ್ರತಂಡ ಶೀಘ್ರವೇ ಹಂಚಿಕೊಳ್ಳಲಿದೆ. ಶಿವಕಾರ್ತಿಕೇಯನ್ ಮತ್ತು ಸಾಯಿಪಲ್ಲವಿ ಇಬ್ಬರೂ ಬಹುಬೇಡಿಕೆ ನಟರಾಗಿದ್ದು, ಬಹು ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಹಾಗಾಗಿ ಅವರ ಮುಂದಿನ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ. ಆದಷ್ಟು ಬೇಗ ಚಿತ್ರತಂಡ ಮಾಹಿತಿ ಘೋಷಿಸಲಿ ಎಂದು ಕಾತರರಾಗಿದ್ದಾರೆ.

ಇದನ್ನೂ ಓದಿ: ಸಲ್ಮಾನ್-ಶಾರುಖ್​ನ ಆ ಒಂದು ಸೀನ್​ಗೆ 35 ಕೋಟಿಯ ಸೆಟ್​ ನಿರ್ಮಾಣ.. ಹಾಗಾದ್ರೆ ನಟರ ಸಂಭಾವನೆ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.