ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರ ಅಚ್ಚುಮೆಚ್ಚಿನ ನಟ ಅಂದರೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್. ಹೊಸ ನಿರ್ದೇಶಕರಿಂದ ಹಿಡಿದು, ಅನುಭವಿ ನಿರ್ದೇಶಕರ ನೆಚ್ಚಿನ ನಾಯಕ ನಟನಾಗಿರುವ ಶಿವರಾಜ್ ಕುಮಾರ್, ಸದ್ಯ ಸ್ಯಾಂಡಲ್ ವುಡ್ ನ ಬಹುಬೇಡಿಕೆಯ ನಟ. ಬೈರಾಗಿ ಸಿನಿಮಾದ ಬಿಡುಗಡೆ ಸಿದ್ಧತೆಯಲ್ಲಿರೋ ಹ್ಯಾಟ್ರಿಕ್ ಹೀರೋ, ವಿವಿಧ ನಿರ್ದೇಶಕರ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಸೆಂಚುರಿ ಸ್ಟಾರ್ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸದಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಅಡಿ ನಿರ್ಮಾಣವಾಗುತ್ತಿರುವ ಗೋಸ್ಟ್ ಚಿತ್ರಕ್ಕೆ ಸಹಿ ಹಾಕಿದ್ದಾರೆ.
ಕನ್ನಡದಲ್ಲಿ ಶ್ರೀನಿವಾಸ ಕಲ್ಯಾಣ,ಬೀರ್ ಬಲ್, ಓಲ್ಡ್ ಮಾಂಕ್ ಮುಂತಾದ ಚಿತ್ರಗಳನ್ನು ನಿರ್ದೇಶನ ಮಾಡಿ ಅಭಿನಯಿಸಿರುವ ಶ್ರೀನಿಯವರು, ಇದೇ ಮೊದಲ ಬಾರಿಗೆ ಶಿವರಾಜ್ ಕುಮಾರ್ ನಟನೆಯ ಗೋಸ್ಟ್ ಸಿನಿಮಾಗೆ ನಿರ್ದೇಶನ ಮಾಡಲಿದ್ದಾರೆ. ಗೋಸ್ಟ್ ಸಿನಿಮಾದ ಕಥೆಯನ್ನು ಶ್ರೀನಿ ಅವರೇ ಬರೆದಿದ್ದು, ನಿರ್ದೇಶನವನ್ನೂ ಅವರೇ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಲಿದ್ದು, ಉಳಿದ ಕಲಾವಿದರ ಹಾಗೂ ತಂತ್ರಜ್ಞರ ಆಯ್ಕೆ ನಡೆಯುತ್ತಿದೆ.
ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್. ಎನ್ ಗೋಸ್ಟ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಸಂದೇಶ್ ಪ್ರೊಡಕ್ಷನ್ಸ್ ಅಡಿಯಲ್ಲಿ ಶಿವರಾಜ್ ಕುಮಾರ್ ಅಭಿನಯಿಸುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಸಿನಿಮಾದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ ಎಂದು ಚಿತ್ರತಂಡ ಹೇಳಿದೆ.
ಓದಿ : ಕಪಾಳಮೋಕ್ಷ ಪ್ರಕರಣ.. ವಿಲ್ಸ್ಮಿತ್ಗೆ ಆಸ್ಕರ್ನಿಂದ 10 ವರ್ಷ ನಿಷೇಧ