ETV Bharat / entertainment

ನಿರ್ಮಾಪಕ ರಮೇಶ್ ರೆಡ್ಡಿ ಹೊಸ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಮತ್ತು ರಿಯಲ್ ಸ್ಟಾರ್ - 45 ಸಿನಿಮಾ

ನಿರ್ಮಾಪಕ ರಮೇಶ್ ರೆಡ್ಡಿ ಅರ್ಜುನ್ ಜನ್ಯ ನಿರ್ದೇಶನದಲ್ಲಿ, ಶಿವರಾಜ್​ ಕುಮಾರ್ ಅಭಿನಯದಲ್ಲಿ ಅವರು ‘45’ ಎಂಬ ಪ್ಯಾನ್ ಇಂಡಿಯಾ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ ಈಗ ಉಪೇಂದ್ರ ಸೇರ್ಪಡೆಯಾಗಿದ್ದು, ಅವರು ಕೂಡ ಇನ್ನೊಬ್ಬ ನಾಯಕನಾಗಿ ಅಭಿನಯಿಸುತ್ತಿದ್ದಾರೆ.

Upendra  and  Shivarajkumar
ಉಪೇಂದ್ರ ಮತ್ತು ಶಿವರಾಜಕುಮಾರ್
author img

By

Published : Oct 3, 2022, 9:42 AM IST

ಕನ್ನಡ ಚಿತ್ರರಂಗದಲ್ಲಿ ನಾತಿಚಾರಮಿ,‌ 100 ಹಾಗೂ ಗಾಳಿಪಟ 2 ಅಂತಹ ಸಿನಿಮಾಗಳನ್ನ ನಿರ್ಮಾಣ ಮಾಡುತ್ತಿರುವ ಫ್ಯಾಷನಿಟಿಕ್ ಪ್ರೊಡ್ಯೂಸರ್ ರಮೇಶ್ ರೆಡ್ಡಿ. ಇತ್ತೀಚೆಗಷ್ಟೇ ಗಾಳಿಪಟ 2 ಎಂಬ ಬ್ಲಾಕ್ಬಸ್ಟರ್ ಚಿತ್ರವನ್ನು ತಮ್ಮ ಸೂರಜ್ ಪ್ರೊಡಕ್ಷನ್​ ಅಡಿ ನಿರ್ಮಿಸಿದ್ದ ರಮೇಶ್ ರೆಡ್ಡಿ, ಇದೀಗ ಇನ್ನೊಂದು ಸಾಹಸಕ್ಕೆ ಕೈ ಹಾಕಿದ್ದಾರೆ.

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದಲ್ಲಿ, ಶಿವರಾಜ್​ ಕುಮಾರ್ ಅಭಿನಯದಲ್ಲಿ ಅವರು '45' ಎಂಬ ಪ್ಯಾನ್ ಇಂಡಿಯಾ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ ಈಗ ಉಪೇಂದ್ರ ಸೇರ್ಪಡೆಯಾಗಿದ್ದು, ಅವರು ಕೂಡ ಇನ್ನೊಬ್ಬ ನಾಯಕನಾಗಿ ಅಭಿನಯಿಸುತ್ತಿದ್ದಾರೆ.

Upendra will starrer in Producer Ramesh Reddy new movie
ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ರಿಯಲ್ ಸ್ಟಾರ್ ಉಪೇಂದ್ರ

ಶಿವರಾಜ್ ಕುಮಾರ್ ಮತ್ತು ಉಪೇಂದ್ರ ಜೊತೆಯಾಗಿ ಕೆಲಸ ಮಾಡುತ್ತಿರುವುದು ಇದು 4ನೇ ಬಾರಿ. ಈ ಹಿಂದೆ ಉಪೇಂದ್ರ 'ಓಂ' ಚಿತ್ರ ನಿರ್ದೇಶಿಸಿದ್ದರು. ಆ ನಂತರ ಇಬ್ಬರೂ 'ಪ್ರೀತ್ಸೇ' ಮತ್ತು 'ಲವ-ಕುಶ' ಚಿತ್ರದಲ್ಲಿ ಜೊತೆಯಾಗಿ ನಟಿಸಿದ್ದರು. ಈಗ ದೊಡ್ಡ ಗ್ಯಾಪ್​ನ ನಂತರ ಅವರಿಬ್ಬರೂ '45' ಚಿತ್ರದಲ್ಲಿ ಮತ್ತೆ ಒಟ್ಟಾಗಿ ನಟಿಸಲಿದ್ದಾರೆ.

ನಿರ್ಮಾಪಕ ರಮೇಶ್ ರೆಡ್ಡಿ ಹೊಸ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ

ಶಿವರಾಜ್​ ಕುಮಾರ್ ಅವರ ಹುಟ್ಟುಹಬ್ಬದಂದು ಅಧಿಕೃತವಾಗಿ ಘೋಷಣೆಯಾದ '45' ಸಿನಿಮಾ ಈಗ ಪ್ರೀ-ಪ್ರೊಡಕ್ಷನ್ ಹಂತದಲ್ಲಿದೆ. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಚಿತ್ರೀಕರಣ ಡಿಸೆಂಬರ್​​ನಿಂದ ಅಧಿಕೃತವಾಗಿ ಪ್ರಾರಂಭವಾಗಲಿದೆ.

ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಅವರೇ ಕಥೆ-ಚಿತ್ರಕಥೆ ಬರೆದಿದ್ದು, ನಿರ್ದೇಶನದ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿಯನ್ನು ಹೊತ್ತಿದ್ದಾರೆ.

ಚಿತ್ರ ಪ್ರಾರಂಭವಾಗುವುದಕ್ಕೆ ಮುನ್ನವೇ ಚಿತ್ರದ ಆಡಿಯೋ ಹಕ್ಕುಗಳಿಗೆ ಭಾರಿ ಡಿಮ್ಯಾಂಡ್ ಬಂದಿದೆ ಎನ್ನಲಾಗಿದೆ. ಸದ್ಯ ಸ್ಯಾಂಡಲ್ ವುಡ್​​ನಲ್ಲಿ ಈ ಜೋಡಿ ದೊಡ್ಡ ಮಟ್ಟದ ಕ್ರೇಜ್ ಹುಟ್ಟಿಸಿದೆ.

ಇದನ್ನೂ ಓದಿ: ಗಣಿ ಗಾಳಿಪಟ 2 ಚಿತ್ರಕ್ಕೆ ಸಾಥ್ ಕೊಟ್ಟ ಹ್ಯಾಟ್ರಿಕ್ ಹೀರೋ, ರಿಯಲ್‌ ಸ್ಟಾರ್, ರಮೇಶ್ ಅರವಿಂದ್!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.