ETV Bharat / entertainment

ಯುವ ನಟ ಕಿರೀಟಿ ಸಿನಿಮಾ ಸೆಟ್​​​ಗೆ ಸರ್ಪ್ರೈಸ್ ವಿಸಿಟ್ ಕೊಟ್ಟ ಶಿವಣ್ಣ - ಈಟಿವಿ ಭಾರತ ಕನ್ನಡ

ಇನ್ನೂ ಹೆಸರಿಡದ ಯುವ ನಟ ಕಿರೀಟಿ ಅಭಿನಯದ ಸಿನೆಮಾ ಸೆಟ್ಟಿಗೆ ಕರುನಾಡ ಚಕ್ರವರ್ತಿ ಶಿವಣ್ಣ ಅವರು ಭೇಟಿ ನೀಡಿ ಚಿತ್ರ ತಂಡಕ್ಕೆ ಶುಭ ಹಾರೈಸಿದರು.

shivarajkumar-visit-to-set-of-the-young-actor-kireetis-movie
ಯುವ ನಟ ಕಿರೀಟಿ ಸಿನಿಮಾ ಸೆಟ್ ಗೆ ಸರ್ಪ್ರೈಸ್ ವಿಸಿಟ್ ಕೊಟ್ಟ ಶಿವಣ್ಣ
author img

By

Published : Sep 3, 2022, 4:42 PM IST

ತನ್ನ ಇಂಟ್ರೋಡಕ್ಷನ್ ಟೀಸರ್ ನಿಂದಲೇ ಕನ್ನಡ ಚಿತ್ರರಂಗದಲ್ಲಿ ಸುದ್ದಿಯಾದ ನಟ ಕಿರೀಟಿ ಅವರು ಇದೀಗ ತಮ್ಮ ಚೊಚ್ಚಲ ಸಿನೆಮಾದ ಚಿತ್ರೀಕರಣದಲ್ಲಿ ತೊಡಗಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರವನ್ನು ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ ನಿರ್ಮಾಣ ಮಾಡುತ್ತಿದೆ. ಕನ್ನಡ ಹಾಗೂ ತೆಲುಗು ಎರಡೂ ಭಾಷೆಯಲ್ಲೂ ಚಿತ್ರವನ್ನು ಅದ್ಧೂರಿಯಾಗಿ ನಿರ್ಮಾಣ ಮಾಡಲಾಗುತ್ತಿದೆ.

ರಾಧಾಕೃಷ್ಣ ರೆಡ್ಡಿ ಸಾರಥ್ಯದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರ ಸಾಕಷ್ಟು ಸಿನಿ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆಯನ್ನು ಹುಟ್ಟಿಸಿದೆ. ಸದ್ಯ ಬಿಡುಗಡೆಯಾಗಿರುವ ಕಿರೀಟಿ ಇಂಟ್ರೂಡಕ್ಷನ್ ಟೀಸರ್​​​ಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು, ಇದೀಗ ಸಿನಿಮಾ ಅಂಗಳದಿಂದ ಹೊಸ ಸುದ್ದಿ ಹೊರಬಿದ್ದಿದೆ.

ಅದ್ಧೂರಿಯಾಗಿ ಚಿತ್ರದ ಮುಹೂರ್ತ ನೆರವೇರಿಸಿಕೊಂಡು ಶೂಟಿಂಗ್ ಅಖಾಡಕ್ಕೆ ಧುಮುಕ್ಕಿದ್ದ ಚಿತ್ರತಂಡ ಯಾವುದೇ ವಿರಾಮ ತೆಗೆದುಕೊಳ್ಳದೇ ನಿರಂತರವಾಗಿ ಚಿತ್ರೀಕರಣ ನಡೆಸುತ್ತಿದೆ. ಸದ್ಯ ಬೆಂಗಳೂರಿನ ನಾಗವಾರದ ಮ್ಯಾನತಾ ಟೆಕ್ ಪಾರ್ಕ್ ನಲ್ಲಿ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈ ಶೂಟಿಂಗ್ ಸೆಟ್ ಗೆ ಕರುನಾಡ ಚಕ್ರವರ್ತಿ ಶಿವಣ್ಣ ಭೇಟಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಕಿರೀಟಿ ಹಾಗೂ ಜೆನಿಲಿಯಾ ಅವರ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ, ಕೆಲಕಾಲ ಸಿನೆಮಾದ ಬಗ್ಗೆ ವಿಚಾರಿಸಿದರು. ಬಳಿಕ ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಜನಾರ್ದನ ರೆಡ್ಡಿಯವರು ಉಪಸ್ಥಿತರಿದ್ದರು.

shivarajkumar-visit-to-set-of-the-young-actor-kireetis-movie
ಕರುನಾಡ ಚಕ್ರವರ್ತಿ ಶಿವರಾಜ್​ ಕುಮಾರ್ ಮತ್ತು ಯುವ ನಟ ಕಿರೀಟಿ

ಇನ್ನೂ ಕಿರೀಟಿ ಅಭಿನಯದ ಚೊಚ್ಚಲ ಸಿನಿಮಾದ ಟೈಟಲ್ ಅನಾವರಣಕ್ಕೂ ಮುಹೂರ್ತ ನಿಗದಿಪಡಿಸಲಾಗಿದೆ. ಇದೇ ತಿಂಗಳ 29ರಂದು ಕಿರೀಟಿ ಹುಟ್ಟುಹಬ್ಬವಿದ್ದು,ಈ ದಿನದಂದು ಒಂದು ವಿಡಿಯೋ ಝಲಕ್ ಮೂಲಕ ಸಿನೆಮಾದ ಹೆಸರನ್ನು ಘೋಷಿಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಯುವ ನಟ ಕಿರೀಟಿ ಸಿನಿಮಾ ಸೆಟ್ ಗೆ ಸರ್ಪ್ರೈಸ್ ವಿಸಿಟ್ ಕೊಟ್ಟ ಶಿವಣ್ಣ

ಸದ್ಯ ಚಿತ್ರದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಪ್ರೊಡಕ್ಷನ್ ಕಾರ್ಯಗಳು ಭರದಿಂದ ಸಾಗುತ್ತಿದೆ. ಸಾಯಿ ಕೊರಪಾಠಿ ನಿರ್ಮಿಸಲಿರುವ ಈ ಚಿತ್ರಕ್ಕೆ ರಾಕ್‌ಸ್ಟಾರ್ ದೇವಿ ಶ್ರೀ ಪ್ರಸಾದ್ ಸಂಗೀತ ನೀಡಿದ್ದಾರೆ. ಬಾಹುಬಲಿ ಸಿನಿಮಾದ ಛಾಯಾಗ್ರಾಹಕ ಕೆ ಸೆಂಥಿಲ್ ಕುಮಾರ್ ಅವರು ಚಿತ್ರದ ಛಾಯಾಗ್ರಹಣ ಮಾಡಿದ್ದಾರೆ. ರವೀಂದರ್ ಕಲಾ ನಿರ್ದೇಶನ, ಭಾರತದ ಟಾಪ್ ಸ್ಟಂಟ್ ನಿರ್ದೇಶಕ ಪೀಟರ್ ಹೆನ್ ಅವರ ಆ್ಯಕ್ಷನ್ ಈ ಚಿತ್ರಕ್ಕಿದೆ.

ಇದನ್ನೂ ಓದಿ : ಶೀಘ್ರದಲ್ಲೇ ತಂದೆಯಾಗಲಿರುವ ಧ್ರುವ ಸರ್ಜಾ.. ನೋಡಿ ಪ್ರೇರಣಾ ಬೇಬಿ ಬಂಪ್ ಫೋಟೋಶೂಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.