ಸ್ಯಾಂಡಲ್ವುಡ್ನಲ್ಲಿ ಸೂಪರ್ಹಿಟ್ ಸಿನಿಮಾಗಳ ಟೈಟಲ್ ಈಗ ಮರುಬಳಕೆ ಆಗೋದು ಹೊಸತೆನಲ್ಲ. ಈಗ ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ನಿರ್ದೇಶನದ 'ಶುಭಮಂಗಳ' ಸಿನೆಮಾ ಯಾರಿಗೆ ತಾನೆ ಗೊತ್ತಿಲ್ಲ. ಇದೇ ಟೈಟಲ್ ಇಟ್ಟುಕೊಂಡು ಸ್ಯಾಂಡಲ್ವುಡ್ನಲ್ಲಿ ಈಗಾಗಲೇ ಹೊಸ ಚಿತ್ರವೊಂದು ಸೆಟ್ಟೇರಿದೆ. ಇದೀಗ ಈ ಶುಭಮಂಗಳ ಸಿನಿಮಾ ತಂಡದಿಂದ ಸಖತ್ ಮಜವಾಗಿರುವ ಟೀಸರ್ ತುಣುಕು ಬಿಡುಗಡೆಯಾಗಿದೆ.
ಯುವ ನಟ ಸಿದ್ಧಾರ್ಥ್ ಮಾಧ್ಯಮಿಕ, ಮೇಘನಾ ಗಾಂವ್ಕರ್, ಹಿತಾ ಚಂದ್ರಶೇಖರ್ ಮುಖ್ಯ ಭೂಮಿಕೆಯಲ್ಲಿರುವ ಶುಭಮಂಗಳ ಚಿತ್ರದ ಟೀಸರ್ ಬೊಂಬಾಟ್ ಆಗಿದೆ. ಟೀಸರ್ನಲ್ಲಿ ಮೇಘನಾ ಗಾಂವ್ಕರ್ ಕಿಸ್ ಸೀನ್ನೊಂದಿಗೆ ಕಾಣಿಸೊಂಡಿದ್ದಾರೆ. ಇವರ ಜೊತೆಗೆ ರಾಕೇಶ್ ಮಯ್ಯ, ಅದಿತಿ ರಾಮ್, ದೀಪ್ತಿ ನಾಗೇಂದ್ರ, ಅರುಣ್ ಬಾಲಾಜಿ, ಬಾಬು ಹಿರಣ್ಣಯ್ಯ ಸೇರಿದಂತೆ ದೊಡ್ಡ ತಾರಾಬಳಗವೇ ಸಿನಿಮಾದಲ್ಲಿದೆ.
ಈ ಹಿಂದೆ ಸಿಲ್ಕ್ ಬೋರ್ಡ್, ಮಹಾ ಸಂಪರ್ಕ ಸೇರಿದಂತೆ 20ಕ್ಕೂ ಹೆಚ್ಚು ಕಿರುಚಿತ್ರಗಳ ನಿರ್ಮಾತೃ ಸಂತೋಷ್ ಗೋಪಾಲ್ ನಿರ್ದೇಶನದಲ್ಲಿ ತಯಾರಾಗಿರುವ ಶುಭಮಂಗಳ ಸಿನಿಮಾದಲ್ಲಿ ಒಂದು ಮದುವೆ ಮನೆಯಲ್ಲಿ ನಡೆಯುವ ಕಾಮಿಡಿ, ಲವ್, ಸೆಂಟಿಮೆಂಟ್ ಎಳೆಯನ್ನು ಇಟ್ಕೊಂಡು ಸಿನಿಮಾ ಮಾಡಿದ್ದಾರೆ. ಪ್ರತಿಯೊಬ್ಬರಿಗೂ ಕನೆಕ್ಟ್ ಆಗುವ ಸಿನಿಮಾ ಇದಾಗಿದೆ.
- " class="align-text-top noRightClick twitterSection" data="">
ಈಗಾಗಲೇ ಶೂಟಿಂಗ್ ಮುಗಿಸಿದ್ದು, ರಿಲೀಸ್ ಹೊಸ್ತಿಲಿನಲ್ಲಿರುವ ಶುಭಮಂಗಳ ಸಿನಿಮಾದಲ್ಲಿ 5 ವಿಭಿನ್ನ ಹಾಡುಗಳಿವೆ. ಜೂಡಾ ಸ್ಯಾಂಡಿ ಮ್ಯೂಸಿಕ್ ಇಂಪು, ರಾಕೇಶ್ ಬಿ ರಾಜ್ ಕ್ಯಾಮೆರಾ ತಂಪು ಸಿನಿಮಾಕ್ಕಿದೆ. ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುವುದರ ಜೊತೆಗೆ ನಿರ್ದೇಶಕ ಸಂತೋಷ್ ಸಂಕಲನದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ತಮ್ಮದೇ ಅವ್ಯಕ್ತ ಬ್ಯಾನರ್ನಡಿ ಸ್ನೇಹಿತರು ಹಾಗೂ ಕುಟುಂಬಸ್ಥರ ಜೊತೆಗೂಡಿ ಸಿನಿಮಾ ನಿರ್ಮಾಣ ಮಾಡಿದ್ದಾರೆ.
ಇದನ್ನೂ ಓದಿ: ಯಶ್ ಕೆಜಿಎಫ್ ಚಾಪ್ಟರ್ 2 ಚಿತ್ರ ಮೀರಿಸಿ ದಾಖಲೆ ಬರೆದ ಪವರ್ ಸ್ಟಾರ್ ಜೇಮ್ಸ್ ಸಿನಿಮಾ!