ETV Bharat / entertainment

'ಶುಭಮಂಗಳ' ಟ್ರೈಲರ್ ಬಿಡುಗಡೆ : ಅಕ್ಟೋಬರ್ 14ರಂದು ಚಿತ್ರ ತೆರೆಗೆ - ಶುಭಮಂಗಳ ಟ್ರೈಲರ್ ಬಿಡುಗಡೆ

ಸಾಕಷ್ಟು ಕಿರುಚಿತ್ರಗಳನ್ನು ನಿರ್ಮಿಸಿರುವ ಸಂತೋಷ್ ಗೋಪಾಲ್ ಈ ಸಿನಿಮಾ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಮದುವೆ ಮನೆಯಲ್ಲಿ ನಡೆಯುವ ಕಾಮಿಡಿ, ಲವ್, ಸೆಂಟಿಮೆಂಟ್ ಎಳೆಯನ್ನು ಇಟ್ಟುಕೊಂಡು ಶುಭಮಂಗಳ ಸಿನಿಮಾ ಮಾಡಿದ್ದಾರೆ.

shubhamangala-cinema-to-release-on-october-14th
'ಶುಭಮಂಗಳ' ಟ್ರೈಲರ್ ಬಿಡುಗಡೆ : ಅಕ್ಟೋಬರ್ 14ರಂದು ಚಿತ್ರ ತೆರೆಗೆ
author img

By

Published : Sep 17, 2022, 7:44 AM IST

ಸ್ಯಾಂಡಲ್​ವುಡ್​​ನಲ್ಲಿ ಸೂಪರ್ ಹಿಟ್ ಸಿನಿಮಾಗಳ ಟೈಟಲ್ ಮರುಬಳಕೆ ಆಗೋದು ಹೊಸದೇನಲ್ಲ. ಈಗ ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ನಿರ್ದೇಶನದ 'ಶುಭಮಂಗಳ' ಚಿತ್ರದ ಶೀರ್ಷಿಕೆ ಇಟ್ಟುಕೊಂಡು ಬಂದಿರುವ ಹೊಸ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ರೇಣುಕಾಂಬ ಸ್ಟುಡಿಯೋದಲ್ಲಿ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ನಡೆದಿದ್ದು, ಚಿತ್ರತಂಡವು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

ನಿರ್ದೇಶಕ ಸಂತೋಷ್ ಗೋಪಾಲ್ ಮಾತನಾಡಿ, ಮದುವೆ ಮನೆಯಲ್ಲಿ ನಡೆಯುವ ಕಥೆ ಇದು. ಮದುವೆ ವೇಳೆ ಎಮೋಷನ್, ಡ್ರಾಮಾ ಸೇರಿ ತುಂಬಾ ಕಥೆಗಳು ನಡೆಯುತ್ತಲೇ ಇರುತ್ತದೆ. ಆ ಕಥೆಗಳಲ್ಲಿ ಐದನ್ನು ಆಯ್ಕೆ ಮಾಡಿ ಸಿನಿಮಾ ಮಾಡಿದ್ದೇನೆ. ಈ ಚಿತ್ರದಲ್ಲಿ ಪುರುಷರು ಹಾಗೂ ಮಹಿಳೆಯರಿಬ್ಬರಿಗೂ ಹೆಚ್ಚಿನ ಪ್ರಾಮುಖ್ಯತೆ ಇದೆ ಎಂದರು.

shubhamangala-cinema-to-release-on-october-14th
ಶುಭಮಂಗಳ ಚಿತ್ರ ತಂಡ

ಸಾಕಷ್ಟು ಕಿರುಚಿತ್ರಗಳನ್ನು ನಿರ್ಮಿಸಿರುವ ಸಂತೋಷ್ ಗೋಪಾಲ್ ಈ ಸಿನಿಮಾ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಮದುವೆ ಮನೆಯಲ್ಲಿ ನಡೆಯುವ ಕಾಮಿಡಿ, ಲವ್, ಸೆಂಟಿಮೆಂಟ್ ಎಳೆಯನ್ನು ಇಟ್ಟುಕೊಂಡು ಸಿನಿಮಾ ರೂಪಿಸಿದ್ದಾರೆ.

ಚಾರ್​​ಮಿನಾರ್ ಬೆಡಗಿ ಮೇಘನಾ ಗಾಂವ್ಕರ್, ಹಿತಾ ಚಂದ್ರಶೇಖರ್, ರಾಕೇಶ್ ಮಯ್ಯ ಮುಖ್ಯಭೂಮಿಕೆಯಲ್ಲಿರುವ ಟ್ರೈಲರ್​ಗೆ ಎಲ್ಲರ ಮೆಚ್ಚುಗೆ ವ್ಯಕ್ತವಾಗಿದೆ‌. ಇದರ ಜೊತೆಗೆ ಅದಿತಿ ರಾಮ್, ದೀಪ್ತಿ ನಾಗೇಂದ್ರ, ಅರುಣ್ ಬಾಲಾಜಿ ಮುಂತಾದವರು ನಟಿಸಿದ್ದಾರೆ.

  • " class="align-text-top noRightClick twitterSection" data="">

ಈ ಚಿತ್ರಕ್ಕೆ ಜೂಡಾ ಸ್ಯಾಂಡಿ ಸಂಗೀತ, ರಾಕೇಶ್ ಬಿ. ರಾಜ್ ಕ್ಯಾಮರಾ, ಸಂತೋಷ್ ನಿರ್ದೇಶನದ ಜೊತೆಗೆ ಸಂಕಲನ ಇದೆ. ಅವ್ಯಕ್ತ ಫಿಲ್ಮಂಸ್​ನಡಿ ಸಂತೋಷ್ ಸ್ನೇಹಿತರ ಜೊತೆಗೂಡಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಚಿತ್ರತಂಡವು ಮದುವೆ ಮನೆಗಳಿಗೆ ತೆರಳಿ ವಿಭಿನ್ನವಾಗಿ ಪ್ರಮೋಷನ್ ನಡೆಸುತ್ತಿದ್ದು, ಅಕ್ಟೋಬರ್ 14ರಂದು ಚಿತ್ರ ತೆರೆ ಕಾಣಲಿದೆ.

ಇದನ್ನೂ ಓದಿ: 'ಖಂಡಿತ ನನಗೂ ಮೀ ಟೂ ಅನುಭವ ಆಗಿದೆ' - ನಟಿ ಆಶಿತಾ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.