ETV Bharat / entertainment

ಮರಿ ಟೈಗರ್ ವಿನೋದ್ ಪ್ರಭಾಕರ್ ನೆಲ್ಸನ್ ಸಿನಿಮಾಗೆ ಸಿಕ್ಕಳು ನಾಯಕಿ! - ವಿನೋದ್ ಪ್ರಭಾಕರ್ ಅಭಿನಯದ ನೆಲ್ಸನ್​ ಸಿನಿಮಾ

ಮರಿ ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ನೆಲ್ಸನ್​ ಸಿನಿಮಾಗೆ ಶ್ವೇತಾ ಡಿಸೋಜಾ ನಾಯಕಿ ಪಾತ್ರದಲ್ಲಿ ನಟಿಸಲಿದ್ದಾರೆ.

ವಿನೋದ್ ಪ್ರಭಾಕರ್ ನೆಲ್ಸನ್ ಸಿನಿಮಾಗೆ ಸಿಕ್ಕಳು ನಾಯಕಿ

author img

By ETV Bharat Karnataka Team

Published : Nov 25, 2023, 9:39 PM IST

ಕನ್ನಡ ಚಿತ್ರರಂಗದಲ್ಲಿ ಗೊಂಬೆಗಳ ಲವ್ ಸಿನಿಮಾ ಖ್ಯಾತಿಯ ಅರುಣ್ ಕುಮಾರ್ ಈಗ ಮರಿ ಟೈಗರ್ ವಿನೋದ್ ಪ್ರಭಾಕರ್ ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ. ಇವರಿಬ್ಬರ ಕಾಂಬಿನೇಷನಲ್ಲಿ ಮೂಡಿ ಬರುತ್ತಿರುವ ನೆಲ್ಸನ್ ಸಿನಿಮಾದ ಟೀಸರ್ ಧೂಳ್ ಎಬ್ಬಿಸಿದೆ. ಇದೀಗ ಈ ಚಿತ್ರಕ್ಕೆ ಸಂಬಂಧಿಸಿದಂತೆ ಚಿತ್ರತಂಡದಿಂದ ಮತ್ತೊಂದು ಅಪ್​ಡೇಟ್ ಸಿಕ್ಕಿದೆ. ನೆಲ್ಸನ್​ ಜೊತೆ ತೆರೆ ಹಂಚಿಕೊಳ್ಳಲು ನಾಯಕಿ ಸಿಕ್ಕಿದ್ದಾಳೆ. ಮಾಸ್ ಮರಿ ಟೈಗರ್ ವಿನೋಸ್​ಗೆ ಜೋಡಿಯಾಗಿ ಶ್ವೇತಾ ಡಿಸೋಜಾ ಈ ಚಿತ್ರದಲ್ಲಿ ನಟಿಸಲಿದ್ದಾರೆ.

ಕರಾವಳಿಯ ಚೆಲುವೆ ಶ್ವೇತಾ ಡಿಸೋಜಾ
ಕರಾವಳಿಯ ಚೆಲುವೆ ಶ್ವೇತಾ ಡಿಸೋಜಾ

ಕರಾವಳಿಯ ಚೆಲುವೆ ಶ್ವೇತಾ ಡಿಸೋಜಾ ಸದ್ಯ ನೆಲ್ಸನ್ ಬಳಗ ಸೇರಿಕೊಂಡಿದ್ದಾರೆ. ಬಾಲಿವುಡ್​ನ Y ಮೂಲಕ ಸಿನಿಮಾ ಜರ್ನಿ ಆರಂಭಿಸಿದ್ದ ಈ ಸುಂದರಿ ಖಾಸಗಿ ಪುಟಗಳು ಹಾಗೂ ಹೆಜ್ಜಾರು ಚಿತ್ರದಲ್ಲಿ ನಟಿಸಿದ್ದಾರೆ. ಹೆಜ್ಜಾರು ಸಿನಿಮಾಗಾಗಿ ಕಾಯ್ತಿರುವ ಶ್ವೇತಾ, ಈಗ ನೆಲ್ಸನ್​ಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

1960-90ರ ದಶಕದಲ್ಲಿ ಚಾಮರಾಜನಗರದಲ್ಲಿ ನಡೆಯುವ ನೈಜ ಘಟನೆಯಾಧಾರಿತ ಚಿತ್ರ ನೆಲ್ಸನ್. ಅಲ್ಲಿನ ಭಾಷೆ, ಸಂಸ್ಕೃತಿ, ನೆಲ, ಜಲ, ಬುಡಕಟ್ಟು ಜನಾಂಗದ ಸಂಘರ್ಷ ಸೇರಿದಂತೆ ಒಂದಷ್ಟು ಅಂಶಗಳನ್ನು ಈ ಚಿತ್ರದಲ್ಲಿ ಅರುಣ್ ಕಟ್ಟಿಕೊಡಲಿದ್ದಾರೆ. ವಿಶೇಷ ಎಂದರೆ, ವಿನೋದ್ ಪ್ರಭಾಕರ್ ಹಿಂದೆಂದೂ ಕಾಣದ ಅವತಾರದಲ್ಲಿ ಈ ಸಿನಿಮಾದಲ್ಲಿ ನಿಮಗೆ ಕಾಣ ಸಿಗುತ್ತಾರೆ. ಬಹಳ ಇಂಪ್ರೆಸ್ ಎನಿಸುವ ಟೀಸರ್ ಝಲಕ್​ನಲ್ಲಿ ಛಾಯಾಗ್ರಹಣ ಹಾಗೂ ಸಂಗೀತ ಗಮನ ಸೆಳೆಯುತ್ತಿದೆ.

ಕರಾವಳಿಯ ಚೆಲುವೆ ಶ್ವೇತಾ ಡಿಸೋಜಾ
ಕರಾವಳಿಯ ಚೆಲುವೆ ಶ್ವೇತಾ ಡಿಸೋಜಾ

ಒಂದಷ್ಟು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅರುಣ್ ಕುಮಾರ್ ನೆಲ್ಸನ್ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಅರುಣ್ ಮೊದಲ ಕನಸಿಗೆ ದೀಪ ಫಿಲ್ಮ್ಸ್ ಬ್ಯಾನರ್​ನಲ್ಲಿ ಬಿ.ಎಮ್ ಶ್ರೀರಾಮ್ ಕೋಲಾರ ಹಣ ಹಾಕಿದ್ದಾರೆ. ಪ್ರಜ್ವಲ್ ಗೌಡ ಛಾಯಾಗ್ರಹಣ ಮತ್ತು ಭರತ್ ಬಿಜಿ ಸಂಗೀತ, ವಿಜಯ್ ರಾಜ್ ಸಂಕಲನ, ಹರಿ ಸಂಭಾಷಣೆ ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಸಿನಿಮಾ ಆಗಿದೆ.

ಈಗಾಗಲೇ ಚಿತ್ರದ ಟೀಸರ್​ ಯೂಟ್ಯೂಬ್​ನಲ್ಲಿ ಬಿಡುಗಡೆಯಾಗಿದೆ. ವಿನೋದ್​ ಪ್ರಭಾಕರ್​ ನಟನೆಯ ನೆಲ್ಸನ್​ ಟೀಸರ್​ ಅನ್ನು ಈ ವರೆಗೂ 6 ಲಕ್ಷ 23 ಸಾವಿರ ಜನ ವೀಕ್ಷಣೆ ಮಾಡಿದ್ದಾರೆ.

ಲಾಕ್​ಡೌನ್ ಆದ್ಮೇಲೆ ಹಸಿವು, ಅಸಹಾಯಕತೆ ಸಮಯದಲ್ಲಿ 'ನೆಲ್ಸನ್' ಹುಟ್ಟಿಕೊಂಡಿದ್ದು. ಬರೆಯುತ್ತಾ, ಬರೆಯುತ್ತಾ ತುಂಬಾ ಚೆನ್ನಾಗಿ ಕಥೆ ಬೆಳೆಯಿತು. ಮಲಯಾಳಂ, ತಮಿಳು ಇಂಡಸ್ಟ್ರಿಗೆ ಈ ಕಥೆ ಮಾಡೋಣ ಅಂತಿತ್ತು. ಆದರೆ ನನಗೆ ತೃಪ್ತಿಯಾಗಲಿಲ್ಲ. ಏನಾದರೂ ಇಲ್ಲೇ ಆಗಬೇಕು ಅದಕ್ಕೆ ಬಂದೆ. ಸ್ನೇಹಿತರ ಮೂಲಕ ನಿರ್ಮಾಪಕರು ಸಿಕ್ಕಿದ್ರು. ನಂಬಿಕೆ ಹುಟ್ಟಿಕೊಂಡಿತು. ಇದುವರೆಗೆ ನನ್ನ ನಂಬಿದ್ದು ಶ್ರೀರಾಮ್ ಸರ್. ನನ್ನ ಟೀಂ ನನ್ನ ಬೆನ್ನೆಲುಬಾಗಿ ನಿಂತರು. ಸಿನಿಮಾ ಈ ಹಂತಕ್ಕೆ ಬರಲು ನನ್ನ ಟೆಕ್ನಿಕಲ್ ಟೀಂ ಬೆಂಬಲವಿದೆ. ವಿನೋದ್ ಸರ್ ಡೆಡಿಕೇಷನ್ ನೋಡಿ ಭಯ ಆಯಿತು. ವಿನೋದ್ ಸರ್ ಸಪೋರ್ಟ್ ತುಂಬಾ ದೊಡ್ಡದಿದೆ. ಸ್ಕ್ರೀನ್ ಪ್ಲೇ, ಕಥೆ ತುಂಬಾ ಸ್ಟ್ರಾಂಗ್ ಆಗಿದೆ" ಎಂದು ನಿರ್ದೇಶಕ ಅರುಣ್ ಕುಮಾರ್​ಟೀಸರ್​ ಬಿಡುಗಡೆ ವೇಳೆ ತಿಳಿಸಿದ್ದರು.

ಇದನ್ನೂ ಓದಿ: ಮಿನುಗುವ ಸೀರೆಯಲ್ಲಿ ಶ್ರೀಯಾ ಶರಣ್​: ಫ್ಯಾನ್ಸ್ ಹೃದಯ 'ಕಬ್ಜ' ಮಾಡಿದ ಫೋಟೋಗಳಿವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.