ನಿರ್ದೇಶಕ ಹಾಗೂ ನಟನಾಗಿ ತನ್ನದೇ ಬೇಡಿಕೆ ಹೊಂದಿರುವ ರಿಷಬ್ ಶೆಟ್ಟಿ ಕಾಂತಾರ ಸಿನಿಮಾದಲ್ಲಿ ಅಭಿನಯದ ಜೊತೆಗೆ ನಿರ್ದೇಶನ ಮಾಡಿದ್ದಾರೆ. ಚಿತ್ರದ ಮೊದಲ ಹಾಡು ಬಿಡುಗಡೆಯಾಗಿ 18 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ. ಅಜನೀಶ್ ಲೋಕನಾಥ್ ಸಂಗೀತ ನೀಡಿರುವ, ಗೀತರಚನೆಕಾರ ಪ್ರಮೋದ್ ಮರವಂತೆ ರಚಿಸಿರುವ ಸಿಂಗಾರ ಸಿರಿಯೆ ಎಂಬ ಮೋಹಕ ಹಾಡಿನಲ್ಲಿ ಜಾನಪದ ಸೊಗಡು ಮೇಳೈಸಿದೆ.
- " class="align-text-top noRightClick twitterSection" data="">
ಕರಾವಳಿ ತೀರದ ಸೊಗಡಿನಲ್ಲಿ ಮೂಡಿಬಂದಿರುವ ಈ ಹಾಡು ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಹಾಡಿನಲ್ಲಿ ಕರುನಾಡ ಸಂಸ್ಕ್ರತಿ ಹಾಗು ಭವ್ಯ ಪರಂಪರೆಯನ್ನು ಮನಮುಟ್ಟುವಂತೆ ನಿರ್ದೇಶಕ ರಿಷಬ್ ಶೆಟ್ಟಿ ಪ್ರದರ್ಶಿಸಿದ್ದಾರೆ. ಹಲವು ಜನಪದ ನೃತ್ಯಗಳ ಹಿನ್ನೆಲೆಯಲ್ಲಿ ನಾಯಕ, ನಾಯಕಿಗೆ ಪ್ರೇಮದ ವಿಷಯ ತಿಳಿಸುವ ರೀತಿ ಈ ಹಾಡು ಸೊಗಸಾಗಿದೆ. ವಿಜಯ್ ಪ್ರಕಾಶ್, ಅನನ್ಯ ಭಟ್ ಹಾಗೂ ಪನ್ನಾರ್ ವಲ್ಟುರ್ ಕಂಠಸಿರಿ ಹಾಡಿನ ಶ್ರೀಮಂತಿಕೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಇದನ್ನೂ ಓದಿ: ಕೌಟಿಲ್ಯ ಟ್ರೈಲರ್‌ಗೆ ರಕ್ಷಿತ್ ಶೆಟ್ಟಿ, ಪ್ರೇಮ್ ಮೆಚ್ಚುಗೆ: ಆಗಸ್ಟ್ 26ಕ್ಕೆ ಚಿತ್ರ ಬಿಡುಗಡೆ
ಕಂಬಳದ ಕಥೆ ಆಧರಿಸಿರೋ ಕಾಂತಾರ ಚಿತ್ರರಂಗದಲ್ಲಿ ದೊಡ್ಡ ನಿರೀಕ್ಷೆ ಹುಟ್ಟಿಸಿದೆ. ಅರವಿಂದ್ ಎಸ್ ಕಶ್ಯಪ್ ಕ್ಯಾಮರಾ ವರ್ಕ್ ಮಾಡಿದ್ದು, ಹೊಂಬಾಳೆ ಫಿಲ್ಮ್ಸ್ ಮೂಲಕ ನಿರ್ಮಾಪಕ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ್ದಾರೆ. ಸಿನಿಮಾ ಸೆಪ್ಟೆಂಬರ್ 30ಕ್ಕೆ ರಾಜ್ಯಾದ್ಯಂತ ತೆರೆ ಕಾಣಲಿದೆ.