ETV Bharat / entertainment

ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ ಧ್ವನಿಸುರುಳಿ ಬಿಡುಗಡೆ: ಚಿತ್ರಕ್ಕೆ ಸಾಥ್ ನೀಡಿದ ಚಿನ್ನಾರಿ ಮುತ್ತ ವಿಜಿ - ETV Bharath Kannada

ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ ಸಿನಿಮಾಗೆ ಚಿನ್ನಾರಿ ಮುತ್ತ ಖ್ಯಾತಿಯ ವಿಜಯ ರಾಘವೇಂದ್ರ ಸಾಥ್​ ಕೊಟ್ಟಿದ್ದಾರೆ. ಚಿತ್ರದ ಧ್ವನಿಸುರುಳಿ ಬಿಡುಗಡೆ ಮಾಡಿದ ಅವರು ಹಳ್ಳಿ ಮೂಲದ ಕಥೆಗೆ ಪ್ರೇಕ್ಷಕ ಯಾವಾಗಲೂ ಬೆಂಬಲಿಸುತ್ತಾನೆ ಎಂದಿದ್ದಾರೆ.

sri-balaji-photo-studio-movie-song-release
ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ
author img

By

Published : Dec 14, 2022, 7:20 AM IST

ಕನ್ನಡದಲ್ಲಿ ಈಗಾಗಲೇ ತರಹವೇವಾರಿ ಶೀರ್ಷಿಕೆ ಇರುವ ಚಿತ್ರಗಳು ಬಂದಿವೆ. ಆ ಸಾಲಿಗೆ ಈಗ ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ ಸಿನಿಮಾ ಕೂಡ ಸೇರಿದೆ. ಈಗಾಗಲೇ ಸಿನಿಮಾ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಸದ್ಯ ಚಿತ್ರದ ಟೈಟಲ್ ನಿಂದ ಸದ್ದು ಮಾಡುತ್ತಿರುವ ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ ಚಿತ್ರಕ್ಕೆ ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ ಸಾಥ್ ನೀಡಿದ್ದಾರೆ. ಹೌದು, ಈ ಚಿತ್ರದ ಹಾಡುಗಳನ್ನು ವಿಜಯ ರಾಘವೇಂದ್ರ ಹಾಗೂ ಕರ್ನಾಟಕ ಚಲನಚಿತ್ರ ಅಧ್ಯಕ್ಷ ಭಾ.ಮಾ ಹರೀಶ್ ಹಾಗೂ ಛಾಯಾಗ್ರಾಹಕ ಅಶೋಕ್ ಕಶ್ಯಪ್ ಬಿಡುಗಡೆ ಮಾಡಿದರು.

ಬಳಿಕ ಮಾತನಾಡಿದ ವಿಜಯ ರಾಘವೇಂದ್ರ, ಊರು ಕಥೆಯ ಬೇರು, ಒಂದು ಊರಿನಲ್ಲಿ ಹಲವು ತರಹದ ಕಥೆ ಇರೋದು ಸಹಜ. ಅದು ಹೃದಯದಿಂದ ಹುಟ್ಟೋ ಕಥೆಯಾಗಿ ಹೊರಬರುತ್ತೆ. ಅಂತಹ ಕಥೆಗಳು ಸೋತಿರೋ ಉದಾರಹಣೆ ತುಂಬಾ ಕಡಿಮೆ. ಇಂತಹ ಸಿನಿಮಾವನ್ನು ಜನರು ಇಷ್ಟ ಪಡುತ್ತಾರೆ. ಈಗಿನ ಸಿನಿಮಾ ನೋಡೋ ಮಂದಿ ಇದನ್ನೇ ಎದುರು ನೋಡುತ್ತಿದ್ದಾರೆ ಎಂದರು‌.

sri-balaji-photo-studio-movie-song-release
ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ ಧ್ವನಿಸುರುಳಿ ಬಿಡುಗಡೆ

ನಂತರ ಛಾಯಾಗ್ರಾಹ ಅಶೋಕ್ ಕಶ್ಯಪ್ ಮಾತನಾಡಿ, ಮಲೆನಾಡಿನ ಸೌಂದರ್ಯಕ್ಕೆ ತಾನು ಬೆರಗಾಗಿ, ಅಲ್ಲೇ ಹಲವು ವರ್ಷಗಳ ಕಾಲ ಅಲ್ಲೇ ಇದ್ದು ಅಲ್ಲಿಯ ಭಾಷೆ - ಸಂಸ್ಕೃತಿಯ ಬಗ್ಗೆ ಮಾರು ಹೋಗಿದ್ದೆ. ಈಗ ಈ ಸಿನೆಮಾ ಮತ್ತೆ ತನ್ನನ್ನು ಅಲ್ಲಿಗೆ ಕರೆದುಕೊಂಡು ಹೋಗಿದೆ. ಒಬ್ಬ ಫೋಟೋಗ್ರಾಫರ್ ಜೀವನದ ಬಗ್ಗೆ ಇದುವರೆಗೆ ಬರದ ಕಥೆ ಇಲ್ಲಿದೆ. ಒಂದೊಂದು ಪ್ರೇಮ್ ಕೂಡ ಅದ್ಭುತವಾಗಿ ಮೂಡಿ ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈಗಾಗಲೇ ಕಿರುತೆರೆಯಲ್ಲಿ ನಟನಾಗಿ ಗಮನ ಸೆಳೆದಿರುವ ರಾಜೇಶ್ ಧ್ರುವ ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ ಸಿನಿಮಾ ಮೂಲಕ ನಿರ್ದೇಶಕರಾಗುತ್ತಿದ್ದಾರೆ‌. ಈ ಚಿತ್ರದ ವಿಶೇಷತೆ ಅಂದರೆ, ಬಳಸಿರುವ ಉತ್ತರ ಕನ್ನಡ ಭಾಷೆ. ಕಥೆ ಬಗ್ಗೆ ಹೇಳುವುದಾದರೆ, ಒಬ್ಬ ಫೋಟೋಗ್ರಾಫರ್ ಹಾಗೂ ಫೋಟೋ ಸ್ಟುಡಿಯೋ ನಡುವಿನ ಭಾವನಾತ್ಮಕ ಸಂಬಂಧ ಚಿತ್ರದ ಹೈಲೈಟ್. ಜೊತೆಗೊಂದು ನವಿರಾದ ಲವ್ ಸ್ಟೋರಿ. ಇಡೀ ಚಿತ್ರ ಶಿರಸಿ, ಯಲ್ಲಾಪುರ, ಹೊನ್ನಾವರ ಸುತ್ತ ಮುತ್ತ ಚಿತ್ರೀಕರಣವಾಗಿದೆ. 23 ದಿನ ಮಳೆಯಲ್ಲೇ ಈ ಸಿನಿಮಾ ಚಿತ್ರೀಕರಣ ಮಾಡಲಾಗಿದೆ.

ನಿರ್ದೇಶಕರಾಗಿ ಹಾಗೂ ಮುಖ್ಯ ಪಾತ್ರದಲ್ಲಿ ಕಿರುತೆರೆಯ 6 ವರ್ಷಗಳ ಕಾಲ ಸಂಚಲನ ಮೂಡಿಸಿದ್ದ ನಟ ರಾಜೇಶ್ ಧ್ರುವ ಇಲ್ಲಿದ್ದಾರೆ. ಉಳಿದಂತೆ ರವಿ ಸಾಲಿಯಾನ್, ರಾಧಿಕಾ ಅಚ್ಯುತ್ ರಾವ್, ಸಂಪತ್ ಜೆ ರಾಮ್, ಕಾಮಿಡಿ ಕಿಲಾಡಿಗಳು 4 ಖ್ಯಾತಿಯ ಶುಭಲಕ್ಷ್ಮಿ, ಕನ್ಯಾಕುಮಾರಿ ಧಾರವಾಹಿ ಖ್ಯಾತಿಯ ನಕುಲ್ ಶರ್ಮ, ರಕ್ಷಿತ್, ಬಿಗ್ ಬಾಸ್ 4 ಖ್ಯಾತಿಯ ರವಿ ಮೂರೂರು ಹಾಗೂ ವಿಶೇಷ ಪಾತ್ರದಲ್ಲಿ ಕಿರುತೆರೆ ನಟ ಶಿಶಿರ್ ಹಾಗೂ ಹಲವಾರು ಹೊಸ ಕಲಾವಿದರು ಕಾಣಿಸಿಕೊಂಡಿದ್ದಾರೆ.

ಕಥೆ - ಚಿತ್ರಕಥೆಗೆ ಅಭಿಷೇಕ್ ಶಿರಸಿ ಪಲ ಹಾಗೂ ಪೃಥ್ವಿಕಾಂತ ಪೆನ್ನು ಹಿಡಿದಿದ್ದಾರೆ. ಅಜಿತ್ ಬೊಪ್ಪನಳ್ಳಿ ಸಂಭಾಷಣೆ ಬರೆದಿದ್ದಾರೆ. ಮನೋಜ್ ಸಿನಿ ಸ್ಟುಡಿಯೋ ಛಾಯಾಗ್ರಹಣವಿದೆ. ಗಣಪತಿ ಭಟ್ ಸಂಕಲನ ಮಾಡಿದ್ದಾರೆ. ಚಿತ್ರದಲ್ಲಿ 2 ಹಾಡುಗಳಿಗೆ ಶ್ರೀರಾಮ್ ಗಂಧರ್ವ ಸಂಗೀತ ನೀಡಿದ್ದಾರೆ‌. ಕಾಂತಾರ ಖ್ಯಾತಿಯ ಪ್ರಮೋದ್ ಮರವಂತೆ ಸಾಹಿತ್ಯ ಇದೆ, ಸ್ವಸ್ತಿಕ್ ಕಾರೆಕಾಡ್ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ. ನಿರ್ಮಾಪಕ ವೆಂಕಟೇಶ್ವರ ರಾವ್ ಸೃಜನ ಪ್ರೊಡಕ್ಷನ್ ಅಡಿ ಸಿನಿಮಾ ನಿರ್ಮಿಸಿದ್ದಾರೆ. ಹೊಸ ವರ್ಷಕ್ಕೆ ಈ ಚಿತ್ರ ಪ್ರೇಕ್ಷಕರ ಮುಂದೆ ಬರಲಿದೆ.

ಇದನ್ನೂ ಓದಿ: ಜಮಾಲಿ ಗುಡ್ಡ ಚಿತ್ರ ನೋಡಿದ್ಮೇಲೆ ನನ್ನನ್ನು ನಾಗಸಾಕಿ ಅಂತಾ ಕರೆಯುತ್ತಾರೆ: ಯಶ್ ಶೆಟ್ಟಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.