ETV Bharat / entertainment

'ಶ್ರೀರಂಗ' ಚಿತ್ರದ ಟ್ರೈಲರ್ ರಿಲೀಸ್​: ಕನ್ನಡ ಸಿನಿಮಾಗಳನ್ನು ಚಿತ್ರಮಂದಿರಗಳಲ್ಲೇ ನೋಡುವಂತೆ ಜೋಗತಿ ಮಂಜಮ್ಮ ಮನವಿ - ಜೋಗತಿ ಮಂಜಮ್ಮ ಮನವಿ

ಸದ್ಯ ಟ್ರೈಲರ್ ರಿಲೀಸ್ ಮಾಡಿ ಪ್ರಚಾರ ಕಾರ್ಯ ಆರಂಭಿಸಿರುವ 'ಶ್ರೀರಂಗ' ಸಿನಿಮಾ ಇದೇ ತಿಂಗಳ 22ಕ್ಕೆ ಪ್ರೇಕ್ಷಕರ ಮುಂದೆ ಬರೋದಿಕ್ಕೆ ಸಜ್ಜಾಗಿದೆ.

Sri Ranga Trailer Released
'ಶ್ರೀರಂಗ' ಚಿತ್ರದ ಟ್ರೈಲರ್ ರಿಲೀಸ್
author img

By

Published : Jul 16, 2022, 9:15 PM IST

ಸ್ಯಾಂಡಲ್​ವುಡ್​ನಲ್ಲಿ ವಿಭಿನ್ನ ಶೀರ್ಷಿಕೆ ಹಾಗೂ ವಿಭಿನ್ನ ಪೋಸ್ಟರ್ ಮೂಲಕ ಕುತೂಹಲ ಹುಟ್ಟಿಸಿರುವ ನಿರ್ದೇಶಕ ವೆಂಕಟ್ ಭಾರಧ್ವಾಜ್ ಸಾರಥ್ಯದ 'ಶ್ರೀರಂಗ' ಸಿನಿಮಾದ ಟ್ರೈಲರ್ ರಿಲೀಸ್ ಆಯಿತು. ಚಿತ್ರದ ಟ್ರೈಲರ್ ಅನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಜೋಗತಿ ಮಂಜಮ್ಮ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ ಹರೀಶ್ ಅನಾವರಣ ಮಾಡಿದರು.

ಕಾಮಿಡಿ ಜೊತೆಗೆ ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿರುವ 'ಶ್ರೀರಂಗ' ಚಿತ್ರದ ಟ್ರೈಲರ್ ಬಿಡುಗಡೆ ಮಾಡಿ ಮಾತನಾಡಿದ ಜೋಗತಿ ಮಂಜಮ್ಮ, ಈ ಸಿನಿಮಾದ ಟ್ರೈಲರ್ ಬಿಡುಗಡೆ ಮಾಡೋದಿಕ್ಕೆ ಕಾರಣ ಈ ಚಿತ್ರದಲ್ಲಿ ನಮ್ಮ ಸಂಸ್ಕೃತಿಯ ಯಕ್ಷಗಾನ ಇದೆ. ಹೀಗಾಗಿ ಈ ಸಿನಿಮಾ ಮೇಲೆ ನನಗೆ ಪ್ರೀತಿ ಇದೆ. ಇತ್ತೀಚೆಗೆ ಕನ್ನಡದಲ್ಲಿ ಚೆನ್ನಾಗಿರುವ ಸಿನಿಮಾಗಳು ಬರುತ್ತಿವೆ. ಕನ್ನಡ ಸಿನಿಮಾಗಳನ್ನ ಹೆಚ್ಚಾಗಿ ಚಿತ್ರಮಂದಿರಗಳಿಗೆ ಬಂದು ನೋಡಿ. ಯೂಟ್ಯೂಬ್​ನಲ್ಲಿ ಬರುತ್ತೆ ಅಂತಾ ಕಾಯಬೇಡಿ ಎಂದು ಸಿನಿಮಾ ಪ್ರೇಕ್ಷಕರಿಗೆ ಮನವಿ ಮಾಡಿದರು.

ನಂತರ ಮಾತನಾಡಿದ ನಿರ್ದೇಶಕ ವೆಂಕಟ್ ಭಾರಧ್ವಾಜ್, ಸಿನಿಮಾ ಅನ್ನೋದನ್ನು ಒಬ್ಬರ ಕೈಯಲ್ಲಿ ಮಾಡಲು ಆಗುವುದಿಲ್ಲ. ತಾಂತ್ರಿಕ ವರ್ಗ, ಕಲಾ ವರ್ಗ ಹೀಗೆ ಎಲ್ಲರೂ ಕೂಡಿದಾಗ ಮಾತ್ರ ಸಿನಿಮಾ ಆಗುತ್ತದೆ. ಶಂಕರ್ ರಾಮನ್ ಡೈಲಾಗ್ ಅದ್ಭುತವಾಗಿದೆ. ಚಿಕ್ಕ ಪಾತ್ರದಿಂದ ಹಿಡಿದು ದೊಡ್ಡ ಪಾತ್ರದವರೆಗೂ ಎಲ್ಲರೂ ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ನಾನು ಒಂದು ಪಾತ್ರ ಮಾಡಿದ್ದೇನೆ. ಸಿನಿಮಾದಲ್ಲಿ ಸುನಿಲ್ ಅವರ ವಾಯ್ಸ್ ಇದೆ ಎಂದರು.

ಯುವ ನಟರಾದ ಶಿನವ್, ರಚನಾ ರಾಯ್, ರೂಪ ರಾಯಪ್ಪ ಹಾಗೂ ವಂದನಾ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವೆಂಕಟ್ ಭಾರದ್ವಾಜ್ ಚಿತ್ರಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಉಳಿದಂತೆ ಗುರುರಾಜ್ ಹೊಸಕೋಟೆ, ಯಮುನಾ ಶ್ರೀನಿಧಿ, ಸಾಗರ್ ಜಯರಾಮ್, ಚಿಪ್ಸ್ ಬಾಬು, ಗಿರೀಶ್, ಮಣಿ ಮಾರನ್ ಅಭಿನಯಿಸಿದ್ದಾರೆ. ಇವರ ಜೊತೆಗೆ ಪುಟಾಣಿಗಳ ದಂಡೇ ಇದೆ. ಮಾಸ್ಟರ್​ ಚಿರಾಯು ಚಕ್ರವರ್ತಿ, ತ್ರಿಧಾರ ಲಕ್ಷ್ಮಣ್, ಪುಶ್ಕಲ್ ಪ್ರೀತ್, ರಜತ್ ರಿತಿಕ್, ಐಶಾನಿ ಕೂಡ ನಟಿಸಿದ್ದಾರೆ.

ಮಿಥುನ್ ಛಾಯಾಗ್ರಾಹಣ, ಚಂದನ್ ಸಂಕಲನ, ಶಂಕರ್ ರಾಮನ್ ಸಂಭಾಷಣೆ, ಸಮೀರ್ ಕುಲಕರ್ಣಿ ಸಂಗೀತ, ಕನ್ನಡದ ಟಾಪ್ ರ‍್ಯಾಪರ್ ವಿರಾಜಕನ್ನಡಿಗ, ಅವಿನಾಶ್ ಛೆಬ್ಬಿ, ಚೈತ್ರಾ ನಾಣಯ್ಯ ಹಾಡುಗಳಿಗೆ ಧ್ವನಿಯಾಗಿದ್ದಾರೆ. ರುತು ಕ್ರಿಯೇಷನ್ ನಡಿ ಸುಮಾ ಸಿಆರ್ ನಿರ್ಮಾಣ ಮಾಡಿದ್ದು, ಬಿಎಂ ದಿಲೀಪ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಸದ್ಯ ಟ್ರೈಲರ್ ರಿಲೀಸ್ ಮಾಡಿ ಪ್ರಚಾರ ಕಾರ್ಯ ಆರಂಭಿಸಿರುವ 'ಶ್ರೀರಂಗ' ಸಿನಿಮಾ ಇದೇ ತಿಂಗಳ 22ಕ್ಕೆ ಪ್ರೇಕ್ಷಕರ ಮುಂದೆ ಬರೋದಿಕ್ಕೆ ಸಜ್ಜಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.