ETV Bharat / entertainment

ಹೃದಯಘಾತದಿಂದ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ನಿಧನ! - Jolly Bastian death

ಮಂಗಳವಾರ ಸಂಜೆ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ.

stunt master Jolly Bastian died
ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ನಿಧನ
author img

By ETV Bharat Karnataka Team

Published : Dec 27, 2023, 2:17 PM IST

Updated : Dec 27, 2023, 2:26 PM IST

ಭಾರತೀಯ ಚಿತ್ರರಂಗದಲ್ಲಿ ಒಂದಾದ ಬಳಿಕ ಒಂದರಂತೆ ಕಹಿಘಟನೆಗಳು ಜರುಗುತ್ತಿವೆ. ಹೃದಯಘಾತದಿಂದ ಕೆಲ ಕಲಾವಿದರು ಮೃತಪಟ್ಟಿದ್ದಾರೆ. ಇದೀಗ ಕನ್ನಡ ಸೇರಿ ಬಹುಭಾಷಾ ಸಿನಿಮಾಗಳಲ್ಲಿ ಕೆಲಸ ಮಾಡಿದ್ದ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಅವರ ಕೊನೆಯುಸಿರೆಳೆದಿದ್ದು, ಚಿತ್ರರಂಗ ಕಂಬನಿ ಮಿಡಿದಿದೆ.

ಹೌದು, ಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಕೇರಳದ ಅಲೆಪ್ಪಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು. ಸುಮಾರು 900ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೆಲಸ‌ ಮಾಡಿದ್ದ ಜಾಲಿ ಬಾಸ್ಟಿನ್ ಹಠಾತ್ ಹೃದಯಘಾತದಿಂದ ನಿಧನರಾಗಿದ್ದಾರೆ. ನಿನ್ನೆ ಸಂಜೆ ಈ ಘಟನೆ ನಡೆದಿದೆ.

stunt master Jolly Bastian died
ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ನಿಧನ

ಕೇರಳ ಮೂಲದ ಜಾಲಿ ಬಾಸ್ಟಿನ್ 1966 ರಲ್ಲಿ‌ ಜನನಿದರು. ಅವರಿಗೆ 57 ವರ್ಷ ವಯಸ್ಸಾಗಿತ್ತು. ಬೈಕ್ ಮೆಕಾನಿಕ್ ಆಗಿ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ಸಿನಿಮಾಗಳಲ್ಲಿ ಕೆಲಸ ಮಾಡಲು ಪ್ರಾರಂಭಿಸಿದರು. ಆರಂಭದಲ್ಲಿ ಬೈಕ್ ಚೇಸಿಂಗ್ ದೃಶ್ಯಗಳಲ್ಲಿ ಡ್ಯೂಪ್ ಆಗಿ ಕೆಲಸ ಮಾಡಿದ್ದರು. ಸಾಹಸ ಕಲಾವಿದನಾಗಿ, ಸಾಹಸ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದರು.

ನಿನಗಾಗಿ ಕಾದಿರುವೆ ಚಿತ್ರದ ಮೂಲಕ ನಿರ್ದೇಶಕನಾಗಿಯೂ ಗುರುತಿಸಿಕೊಂಡಿದ್ರು. ಒಂದು ಕಾಲದಲ್ಲಿ ಅತಿಹೆಚ್ಚು ಸಂಭಾವನೆ ಪಡೆಯೋ ಸಾಹಸ ನಿರ್ದೇಶಕ ಎಂಬ ಹೆಗ್ಗಳಿಕೆಗೆಕೆ ಜಾಲಿ ಬಾಸ್ಟಿನ್ ಪಾತ್ರರಾಗಿದ್ದರು. ಕನ್ನಡ, ತಮಿಳು, ಮಲಯಾಳಂ ಚಿತ್ರಗಳಲ್ಲಿ ಸಾಹಸ ನಿರ್ದೇಶಕನಾಗಿ ಹೆಸರು ಮಾಡಿದ್ದ ಜಾಲಿ ಬಾಸ್ಟಿನ್ ಪ್ರೇಮಲೋಕ ಚಿತ್ರದಿಂದ ಸಿನಿ ಜರ್ನಿ ಆರಂಭಿಸಿದರು.

ಕೇವಲ 17ನೇ ವಯಸ್ಸಿನಲ್ಲಿಯೇ ಸ್ಯಾಂಡಲ್​ವುಡ್​​ನ ಖ್ಯಾತ ನಟ ರವಿಚಂದ್ರನ್ ಅವರಿಗೆ ಡ್ಯೂಪ್ ಆಗಿ ಕೆಲಸ ಮಾಡಿದ್ದರು. ಅಲ್ಲದೇ, ಪ್ರೇಮಲೋಕ, ಪುಟ್ನಂಜ, ಅಣ್ಣಯ್ಯ, ಶಾಂತಿಕ್ರಾಂತಿ, ಸೇರಿದಂತೆ ರವಿಚಂದ್ರನ್ ನಟನೆಯ ಹಲವು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ರಿಸ್ಕಿ ಸ್ಟಂಟ್ ಮಾಡೋ ವೇಳೆ ಸಾಕಷ್ಟು ಬಾರಿ ಪೆಟ್ಟು ಮಾಡಿಕೊಂಡಿದ್ದರೂ ಕೂಡ. ಆದ್ರೀಗ ಹೃದಯಘಾತದಿಂದ ಇಹಲೋಕ ತ್ಯಜಿಸಿದ್ದು, ಅಭಿಮಾನಿಗಳು ಸೇರಿದಂತೆ ಚಿತ್ರರಂಗದವರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: 'ಸಲಾರ್'​ ಗಳಿಕೆಯಲ್ಲಿ ಇಳಿಕೆ: ಪ್ರಶಾಂತ್​ ನೀಲ್​ ಸಿನಿಮಾ ಗಳಿಸಿದ್ದಿಷ್ಟು!

ಚಿತ್ರರಂಗಕ್ಕೆ ಕೊಡುಗೆ ನೀಡಿದ ಕೆಲವರು ಹೃದಯಾಘಾತಕ್ಕೆ ಬಲಿಯಾಗಿದ್ದು ಮಾತ್ರ ದುರಂತ. ಕಳೆದ ತಿಂಗಳಷ್ಟೇ ನಿರ್ದೇಶಕ ಸಂಜಯ್ ಗಧ್ವಿ ಕೂಡ ಹೃದಯಾಘಾತದಿಂದ ಕೊನೆಯುಸಿರೆಳೆದರು. ಬಾಲಿವುಡ್ ನಿರ್ದೇಶಕರಿಗೆ 56 ವರ್ಷ ವಯಸ್ಸಾಗಿತ್ತು. ಧೂಮ್, ಮೇರೆ ಯಾರ್ ಕಿ ಶಾದಿ ಹೈ ಕೆಲ ಚಿತ್ರಗಳಿಗೆ ಹೆಸರುವಾಸಿಯಾಗಿದ್ದರು. ಕಳೆದ ತಿಂಗಳೇ ಮಲಯಾಳಂ ಕಿರುತೆರೆ ನಟಿ ಡಾ. ಪ್ರಿಯಾ ಕೂಡ ಹೃದಯಾಘಾತದಿಂದ ನಿಧನರಾದರು. ನಟಿಗೆ ಕೇವಲ 35 ವರ್ಷ ವಯಸ್ಸಾಗಿತ್ತು. ಇನ್ನೂ ಈ ತಿಂಗಳ ಮಧ್ಯದಲ್ಲಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಬಾಲಿವುಡ್​ ನಟ ಶ್ರೇಯಸ್ ತಲ್ಪಾಡೆ ಕೂಡ ಹೃದಯಾಘಾತಕ್ಕೊಳಗಾಗಿದ್ದರು. ಅದೃಷ್ಟವಶಾತ್​ ಅವರ ಆರೋಗ್ಯ ಚೇತರಿಸಿದೆ.

ಇದನ್ನೂ ಓದಿ: ಬಿಗ್​ ಬಾಸ್​ಗೆ ಅಮ್ಮ ಬಂದ್ರೂ ಮಾತುಕತೆಯಿಲ್ಲ; ಬಿಕ್ಕಿ ಬಿಕ್ಕಿ ಅತ್ತ ಕಾರ್ತಿಕ್!

Last Updated : Dec 27, 2023, 2:26 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.