ಬಿಗ್ಬಾಸ್ ಖ್ಯಾತಿಯ ರಾಜೀವ್ ಉಸಿರೇ ಉಸಿರೇ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಉಸಿರೇ ಉಸಿರೇ ಚಿತ್ರೀಕರಣ ಕೊನೆಯ ಹಂತದಲ್ಲಿದ್ದು, ಪ್ರಮುಖ ಪಾತ್ರವೊಂದರಲ್ಲಿ ಕಿಚ್ಚ ಸುದೀಪ್ ಅಭಿನಯಿಸಲಿದ್ದಾರೆ. ಈಗಾಗಲೇ ಚಿತ್ರತಂಡ ಅಭಿನಯ ಚಕ್ರವರ್ತಿಯನ್ನು ಭೇಟಿಯಾಗಿದ್ದು, ಸುದೀಪ್ ಕೂಡಾ ನಟನೆಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ರಾಜೀವ್ ಜೋಡಿಯಾಗಿ ಶ್ರೀಜಿತ ಕಾಣಿಸಿಕೊಂಡಿದ್ದು, ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಆಲಿ, ಬ್ರಹ್ಮಾನಂದಮ್, ಸಾಧುಕೋಕಿಲ, ದೇವರಾಜ್, ಮಂಜು ಪಾವಗಡ, ಜಗಪ್ಪ, ಶಿವು, ಸುಶ್ಮಿತಾ ಹೀಗೆ ದೊಡ್ಡ ತಾರಗಣ ಈ ಚಿತ್ರದಲ್ಲಿದೆ.
ಸಿ.ಎಂ.ವಿಜಯ್ ನಿರ್ದೇಶನದ ಈ ಚಿತ್ರಕ್ಕೆ ಮನು ಛಾಯಾಗ್ರಹಣ, ಕೆ.ಎಂ ಪ್ರಕಾಶ್ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಹಾಗೂ ಮೋಹನ್ ಮತ್ತು ಹೈಟ್ ಮಂಜು ಅವರ ನೃತ್ಯ ನಿರ್ದೇಶನವಿದೆ. ವಿವೇಕ್ ಚಕ್ರವರ್ತಿ ಈ ಚಿತ್ರದ ಸಂಗೀತ ನಿರ್ದೇಶಕರು. ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಬಹುತೇಕ ಚಿತ್ರೀಕರಣ ಮುಗಿಸಿರೋ ಉಸಿರೇ ಉಸಿರೇ ಸಿನಿಮಾ ಸದ್ಯದಲ್ಲೇ ಟ್ರೈಲರ್ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಂಡಿದೆ.
ಇದನ್ನೂ ಓದಿ: ಬೆಂಗಳೂರು ವಿಶ್ವವಿದ್ಯಾಲಯ ಪಠ್ಯದಲ್ಲಿ ಪುನೀತ್ ರಾಜ್ಕುಮಾರ್ ವಿಷಯ