ETV Bharat / entertainment

'ಸ್ವಾತಿ ಮುತ್ತಿನ ಮಳೆ ಹನಿಯೇ' ಕಥೆ ಹುಟ್ಟಿದ್ದು ಹೇಗೆ?: ರಾಜ್​.ಬಿ ಶೆಟ್ಟಿ ಕೊಟ್ರು ಉತ್ತರ.. - ಈಟಿವಿ ಭಾರತ ಕನ್ನಡ

SMMH trailer: ರಾಜ್​.ಬಿ ಶೆಟ್ಟಿ ನಿರ್ದೇಶಿಸಿ, ನಟಿಸಿರುವ 'ಸ್ವಾತಿ ಮುತ್ತಿನ ಮಳೆ ಹನಿಯೇ' ಚಿತ್ರದ ಟ್ರೇಲರ್​ ಇತ್ತೀಚೆಗೆ ಬಿಡುಗಡೆಯಾಗಿದೆ.

Swathi muttina male haniye trailer released
'ಸ್ವಾತಿ ಮುತ್ತಿನ ಮಳೆ ಹನಿಯೇ'
author img

By ETV Bharat Karnataka Team

Published : Nov 18, 2023, 10:34 PM IST

'ಸ್ವಾತಿ ಮುತ್ತಿನ ಮಳೆ ಹನಿಯೇ' ಕನ್ನಡ ಚಿತ್ರರಂಗದಲ್ಲೀಗ ಗಮನ ಸೆಳೆಯುತ್ತಿರುವ ಹೊಸ ಸಿನಿಮಾ. ರಾಜ್​.ಬಿ.ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ನಟಿಸಿರುವ ಈ ಚಿತ್ರದ ಟ್ರೇಲರ್​ ಇತ್ತೀಚೆಗೆ ಆನಂದ್​ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಟ್ರೇಲರ್​ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆ ಆಗುತ್ತಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಇತ್ತೀಚೆಗೆ ನಡೆದ ಟ್ರೇಲರ್​ ಬಿಡುಗಡೆ ಕಾರ್ಯಕ್ರಮದ ವೇಳೆ ಚಿತ್ರತಂಡ ಸಿನಿಮಾ ಬಗ್ಗೆ ಹಲವು ವಿಚಾರಗಳನ್ನು ಹಂಚಿಕೊಂಡಿದೆ.

  • " class="align-text-top noRightClick twitterSection" data="">

ಮೊದಲಿಗೆ ಮಾತನಾಡಿದ ನಟ ಹಾಗೂ ನಿರ್ದೇಶಕ ರಾಜ್​.ಬಿ ಶೆಟ್ಟಿ, "ನಾನೊಬ್ಬ ಬ್ಯಾಚುಲರ್ ಆಫ್ ಸೋಶಿಯಲ್ ವರ್ಕ್ ವಿದ್ಯಾರ್ಥಿ. ನಾನು ಜನರ ಕಷ್ಟಗಳನ್ನು ಹತ್ತಿರದಿಂದ ನೋಡಿದ್ದೇನೆ. ಸಾವಿನಂಚಿನಲ್ಲಿರುವ ರೋಗಿಗಳನ್ನು ಶುಶ್ರೂಷೆ ಮಾಡುವ ಕೇಂದ್ರಕ್ಕೆ ಭೇಟಿ ನೀಡಿದಾಗ ಈ ಕಥೆ ಮಾಡಬೇಕೆನಿಸಿತು. ಇನ್ನು ಸ್ವಾತಿ ಮಳೆಯ ನೀರು ಆರೋಗ್ಯಕರ ಎಂದು ಆಯುರ್ವೇದ ಹೇಳುತ್ತದೆ. ಈ ಮಳೆಯ ನೀರು ಕಪ್ಪೆಚಿಪ್ಪಿನ ಜೊತೆ ಸೇರಿ ಮುತ್ತಾಗುತ್ತದೆ. ಹಾಗಾಗಿ ನಮ್ಮ ಚಿತ್ರದ ಕಥೆಗೆ ಈ ಶೀರ್ಷಿಕೆ ಸರಿ ಹೊಂದುವುದರಿಂದ 'ಸ್ವಾತಿ ಮುತ್ತಿನ ಮಳೆ ಹನಿಯೇ' ಎಂದು ಇಟ್ಟಿದ್ದೇವೆ. ಅನಿಕೇತ್ ನನ್ನ ಪಾತ್ರದ ಹೆಸರು. ಮಿಥುನ್ ಮುಕುಂದನ್ ಸುಮಧುರ ಸಂಗೀತದಲ್ಲಿ ಚಿತ್ರದ ಹಾಡುಗಳು ಇಂಪಾಗಿ ಮೂಡಿ ಬಂದಿದೆ. ಚಿತ್ರತಂಡದ ಸಹಕಾರದಿಂದ ಚಿತ್ರ ಕೂಡ ಚೆನ್ನಾಗಿ ಬಂದಿದೆ" ಎಂದು ತಿಳಿಸಿದರು.

Swathi muttina male haniye trailer released
'ಸ್ವಾತಿ ಮುತ್ತಿನ ಮಳೆ ಹನಿಯೇ'

ಇದನ್ನೂ ಓದಿ: ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ 'ಮೆಲ್ಲಗೆ' ರೊಮ್ಯಾಂಟಿಕ್‌ ಹಾಡು ಬಿಡುಗಡೆ

ಬಳಿಕ ನಾಯಕಿ ಸಿರಿ ರವಿಕುಮಾರ್ ಮಾತನಾಡಿ, "ನನ್ನ ಪಾತ್ರದ ಹೆಸರು ಪ್ರೇರಣ. ಹಾಸ್ಪಿಟಲ್​​ವೊಂದರಲ್ಲಿ ಕೌನ್ಸಿಲರ್ ಆಗಿ ಕಾರ್ಯ ನಿರ್ವಹಿಸುತ್ತಿರುತ್ತೇನೆ. ಸಾವಿನಂಚಿನಲ್ಲಿರುವವರಿಗೆ ಸಾವಿನ ಬಗ್ಗೆ ಧೈರ್ಯ ತುಂಬುವ ಪಾತ್ರ ಎನ್ನಬಹುದು" ಎಂದು ತಮ್ಮ ಪಾತ್ರದ ಬಗ್ಗೆ ಹಂಚಿಕೊಂಡರು.

ಇನ್ನೂ ಚಿತ್ರಕ್ಕೆ ಮಿಥುನ್‍ ಮುಕುಂದನ್‍ ಸಂಗೀತ ನೀಡಿದ್ದು, ಗಾಯಕಿ ಮಾಧುರಿ ಶೇಷಾದ್ರಿ ಹಾಡಿರುವ 'ಮೆಲ್ಲಗೆ' ಹಾಡು ಸೂಪರ್ ಹಿಟ್ ಆಗಿದೆ‌. ಚಿತ್ರದಲ್ಲಿ ರಾಜ್‍ ಮತ್ತು ಸಿರಿ ಜೊತೆಗೆ ಬಾಲಾಜಿ ಮನೋಹರ್, ಸೂರ್ಯ ವಸಿಷ್ಠ, ರೇಖಾ ಕೂಡ್ಲಿಗಿ, ಜೆ.ಪಿ.ತುಮ್ಮಿನಾಡು, ಸ್ನೇಹ ಶರ್ಮಾ ಸೇರಿದಂತೆ ಹಲವರು ಅಭಿನಯಿಸಿದ್ದಾರೆ.

ಪ್ರವೀಣ್‍ ಶ್ರೀಯಾನ್‍ ಚಿತ್ರದ ಛಾಯಾಗ್ರಹಣದ ಜೊತೆಗೆ, ರಾಜ್‍ ಅವರೊಂದಿಗೆ ಸಂಕಲನದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ಲೈಟರ್ ಬುದ್ಧ ಫಿಲಂಸ್‍ ಸಹಯೋಗದೊಂದಿಗೆ ನಿರ್ಮಾಣವಾಗಿರುವ ಚಿತ್ರವನ್ನು ನವೆಂಬರ್ 24ರಂದು ಕೆ.ಆರ್.ಜಿ. ಸ್ಟುಡಿಯೋಸ್‍ ಸಂಸ್ಥೆಯು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದೆ. ರಾಜ್​ ಬಿ.ಶೆಟ್ಟಿ ಕೊನೆಯದಾಗಿ ಟೋಬಿ ಚಿತ್ರದಲ್ಲಿ ನಟಿಸಿದ್ದರು. ಕಥಾಹಂದರ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ಸು ಕಂಡಿತ್ತು. ಹಾಗಾಗಿ ಮುಂದಿನ ಸಿನಿಮಾ ಮೇಲೂ ಸಾಕಷ್ಟು ನಿರೀಕ್ಷೆಗಳಿವೆ.

ಇದನ್ನೂ ಓದಿ: 'ಸ್ವಾತಿ ಮುತ್ತಿನ ಮಳೆ'ಯಲ್ಲಿ ದೊಡ್ಡ ಗುಡುಗು: ಸಿನಿಮಾದಿಂದ ಹೊರಗುಳಿದ ಬಗ್ಗೆ ರಮ್ಯಾ ಹೇಳಿದ್ದೇನು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.