ETV Bharat / entertainment

ರಾಜ್ಯ ಪ್ರಶಸ್ತಿ ವಿಜೇತ ರಘು ಕೋವಿ ನಿರ್ದೇಶನದ ಚೊಚ್ಚಲ ಚಿತ್ರದಲ್ಲಿ ಬಹುಭಾಷಾ ನಟ ಬಾಬಿ ಸಿಂಹ

ರಾಜ್ಯ ಪ್ರಶಸ್ತಿ ವಿಜೇತ ರಘು ಕೋವಿ ನಿರ್ದೇಶನದ ಮೊದಲ ಚಿತ್ರದಲ್ಲಿ ಬಹುಭಾಷಾ ನಟ ಬಾಬಿ ಸಿಂಹ ಪ್ರಮುಖ ಪಾತ್ರ ಮಾಡಲಿದ್ದಾರೆ.

Tamil actor Bobby simha will appear in another kannada movie
ರಾಜ್ಯ ಪ್ರಶಸ್ತಿ ವಿಜೇತ ರಘು ಕೋವಿ ಚಿತ್ರದಲ್ಲಿ ಬಹುಭಾಷಾ ನಟ ಬಾಬಿ ಸಿಂಹ
author img

By ETV Bharat Karnataka Team

Published : Oct 23, 2023, 12:16 PM IST

ದಕ್ಷಿಣ ಭಾರತೀಯ ಚಿತ್ರರಂಗದ ಖ್ಯಾತ ನಟ ಬಾಬಿ ಸಿಂಹ ಮತ್ತೊಂದು ಕನ್ನಡ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. 'ಜಿಗರ್‌ಥಂಡ' ಸಿನಿಮಾದ ನಟನೆಗಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಈ ಪ್ರತಿಭಾವಂತ ನಟ ಕಿರಣ್​ ರಾಜ್​ ನಿರ್ದೇಶನದ, ಸಿಂಪಲ್​ ಸ್ಟಾರ್​ ರಕ್ಷಿತ್​ ಶೆಟ್ಟಿ ನಟನೆಯ '777 ಚಾರ್ಲಿ' ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದರು. ಇದೀಗ ಬಾಬಿ ಸಿಂಹ ಅವರು ರಘು ಕೋವಿ ನಿರ್ದೇಶನದಲ್ಲಿ ತಯಾರಾಗುತ್ತಿರುವ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ.

Tamil actor Bobby simha will appear in another kannada movie
ರಾಜ್ಯ ಪ್ರಶಸ್ತಿ ವಿಜೇತ ರಘು ಕೋವಿ ಚಿತ್ರದಲ್ಲಿ ಬಹುಭಾಷಾ ನಟ ಬಾಬಿ ಸಿಂಹ

ರಘು ಕೋವಿ ಮೊದಲ ನಿರ್ದೇಶನ: ಬರಹಗಾರರಾಗಿ ಖ್ಯಾತಿ ಪಡೆದಿರುವ ರಾಜ್ಯ ಪ್ರಶಸ್ತಿ ವಿಜೇತ ರಘು ಕೋವಿ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ‘ದಿಲ್ ಮಾರ್’ ಸಿನಿಮಾ ಮೂಲಕ ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿದಿರುವ ರಾಮ್​ಗೆ ರಘು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮೊದಲ ಚಿತ್ರ ಬಿಡುಗಡೆಗೂ ಮುನ್ನವೇ ರಾಮ್ ಅವರು ರಘು ಕೋವಿ ನಿರ್ದೇಶನದಲ್ಲಿ ನಟಿಸುತ್ತಿದ್ದು, ಸಹಜವಾಗಿ ನಿರೀಕ್ಷೆ ಹೆಚ್ಚಿಸಿದೆ.

'ಹಂಸಲೇಖ ಕಥಾ ಕಣಜ'ದಿಂದ ಸ್ಯಾಂಡಲ್​ವುಡ್​ಗೆ ಪರಿಚಿತರಾದ ರಘು ಕೋವಿ, 'ಕೃಷ್ಣಲೀಲಾ' ಅತ್ಯುತ್ತಮ ಬರವಣಿಗೆಗೆ ರಾಜ್ಯ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಈ ಮೊದಲು ರಾಜೇಂದ್ರ ಸಿಂಗ್ ಬಾಬು, ಎಸ್ ಎಸ್ ರಾಜಶೇಖರ್, ಕೆ ವಿ ರಾಜ್, ಶಶಾಂಕ್, ಉಪೇಂದ್ರ ಸಿನಿಮಾಗಳಲ್ಲಿ ಕೋ ಡೈರೆಕ್ಟರ್ ಆಗಿ ರಘು ಕೋವಿ ದುಡಿದಿದ್ದಾರೆ. ಇದೀಗ ಅವರು ಡೈರೆಕ್ಟರ್ ಕ್ಯಾಪ್ ತೊಟ್ಟು ಮೊದಲ ಬಾರಿಗೆ ನಿರ್ದೇಶನದ ಅಖಾಡಕ್ಕೆ ಇಳಿದಿದ್ದಾರೆ.

ಇದನ್ನೂ ಓದಿ: 'ಟಗರು ಪಲ್ಯ' ಸಿನಿಮಾ ವೀಕ್ಷಣೆಗೆ ಸಿಎಂ ಸಿದ್ದರಾಮಯ್ಯರನ್ನು ಆಹ್ವಾನಿಸಿದ ಡಾಲಿ ಧನಂಜಯ್​

ಪ್ಯಾನ್​ ಇಂಡಿಯಾ ಸಿನಿಮಾ: ಕನ್ನಡ, ತೆಲುಗು, ತಮಿಳು ಹಾಗೂ ಹಿಂದಿ ಭಾಷೆಯಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದಲ್ಲಿ ರಾಮ್ ಹೀರೋ ಆಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಬಾಬಿ ಸಿಂಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅವರ ಪಾತ್ರ ಏನು ಅನ್ನೋದನ್ನು‌ ಚಿತ್ರತಂಡ ಸಸ್ಪೆನ್ಸ್ ಆಗಿ ಇಟ್ಟಿದೆ. ಶೂಟಿಂಗ್ ಹಂತದಲ್ಲಿರುವ ಈ ಸಿನಿಮಾಗೆ ಓ ಮೈ ಗಾಡ್ 2 ನಿರ್ಮಾಪಕ ನಿಕುಲ್ ದೇಸಾಯಿ ಕನ್ನಡ ನಿರ್ಮಾಣ ಸಂಸ್ಥೆ ಜೊತೆ ಕೈ ಜೋಡಿಸಿ ಬಂಡವಾಳ ಹೂಡುತ್ತಿದ್ದಾರೆ.

ನೈಜ ಘಟನೆಯಾಧಾರಿತ ಕಥಾಹಂದರ ಹೊಂದಿರುವ ಸಿನಿಮಾಗೆ ಯುವರತ್ನ, ರಾಜಕುಮಾರ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಖ್ಯಾತಿಯ ಎ ವೆಂಕಟೇಶ್ ಅಂಗುರಾಜ್ ಛಾಯಾಗ್ರಹಣ ಇರಲಿದೆ. ಸದ್ಯ ಶೂಟಿಂಗ್​ನಲ್ಲಿ‌ ನಿರತರಾಗಿರುವ ಚಿತ್ರತಂಡ ಶೀಘ್ರದಲ್ಲಿಯೇ ಟೈಟಲ್ ರಿವೀಲ್ ಮಾಡಲಿದೆ. ಶೀರ್ಷಿಕೆ ಕೂಡ ಅಷ್ಟೇ ವಿಭಿನ್ನವಾಗಿರಲಿದೆ ಎನ್ನಲಾಗಿದೆ. ರಘು ಕೋವಿ ಮೊದಲ ಸಿನಿಮಾವನ್ನೇ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತರಲು ಸಿದ್ಧತೆ ನಡೆಸಿದ್ದಾರೆ.

ಇದನ್ನೂ ಓದಿ: 'ಉಪಾಧ್ಯಕ್ಷ' ಟೀಸರ್​ ರಿಲೀಸ್​: ನಾನು 'ಹೀರೋ' ಎಂದಾಗ ಜನ ಚುಚ್ಚುಮಾತಿನಿಂದ ನೋಯಿಸಿದ್ದಾರೆ - ಚಿಕ್ಕಣ್ಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.