ETV Bharat / entertainment

'ದಿ ವೆಕೆಂಟ್ ಹೌಸ್' ಹಾರರ್​ ಸಿನಿಮಾವಲ್ಲ; ಖಾಲಿ ಮನೆ ಸುತ್ತ ನಡೆಯೋ​ ಕಥೆ - ಎಸ್ತರ್ ನರೋನ್ಹಾ

author img

By ETV Bharat Karnataka Team

Published : Nov 7, 2023, 4:19 PM IST

The Vacant house: ಎಸ್ತರ್ ನರೋನ್ಹಾ ಚೊಚ್ಚಲ ನಿರ್ದೇಶನದ 'ದಿ ವೆಕೆಂಟ್ ಹೌಸ್' ಸಿನಿಮಾ ನವೆಂಬರ್​ 10ರಂದು ತೆರೆ ಕಾಣಲಿದೆ.

The Vacant house movie will be release on november 10
'ದಿ ವೆಕೆಂಟ್ ಹೌಸ್' ಹಾರರ್​ ಸಿನಿಮಾವಲ್ಲ; ಖಾಲಿ ಮನೆ ಸುತ್ತ ನಡೆಯೋ ಡಿಫರೆಂಟ್​ ಕಥೆಯಿದು...

ಸೌತ್​ ಸಿನಿಮಾ ಇಂಡಸ್ಟ್ರಿಯಲ್ಲಿ ಗ್ಲಾಮರ್​ ಪಾತ್ರಗಳ ಮೂಲಕ ಫೇಮಸ್ ಆಗಿರುವ ನಟಿ ಎಸ್ತರ್ ನರೋನ್ಹಾ ನಿರ್ದೇಶಕಿಯಾಗಿ ಬಡ್ತಿ ಪಡೆದಿರುವುದು ಗೊತ್ತೇ ಇದೆ. ನಾವಿಕ, ಅತಿರಥ, ನುಗ್ಗೇಕಾಯಿ, ಲೋಕಲ್ ಟ್ರೈನ್, ಲಂಕೆ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ಮಿಂಚಿರುವ ಬ್ಯೂಟಿ, 'ದಿ ವೆಕೆಂಟ್ ಹೌಸ್' ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ನಿರ್ದೇಶನದ ಜೊತೆ ಜೊತೆಗೆ ನಿರ್ಮಾಣ, ಸಂಗೀತ ನಿರ್ದೇಶನ, ನಟನೆ ಜವಾಬ್ದಾರಿಯನ್ನು ಕೂಡ ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ನರೋನ್ಹಾ ಹೊಸ ಕನಸೊಂದು ಬೆಳ್ಳಿತೆರೆಗೆ ಬರಲು ಸಜ್ಜಾಗಿದೆ. ಈ ಬಗ್ಗೆ ಚಿತ್ರತಂಡ ಕೆಲ ಮಾಹಿತಿಗಳನ್ನು ಹಂಚಿಕೊಂಡಿದೆ.

ಮೊದಲಿಗೆ ಮಾತನಾಡಿದ ನಟಿ ಕಮ್​ ನಿರ್ದೇಶಕಿ ಎಸ್ತರ್ ನರೋನ್ಹಾ, "ದಿ ವೆಕೆಂಟ್ ಹೌಸ್' ಹಾರರ್​ ಸಿನಿಮಾವಲ್ಲ. ಇದೊಂದು ಖಾಲಿ ಮನೆ ಸುತ್ತ ಸಾಗುವ ಕಥೆ. ಈಗಿನ ಯೂತ್​ಗೆ ಬಹಳ ಕನೆಕ್ಟ್​ ಆಗುವ ಸಿನಿಮಾವಿದು. ಪ್ರೀತಿ ಮತ್ತು ಎಮೋಷನ್​ ಎರಡನ್ನು ಸೇರಿಸಿ ಹೆಣೆದ ಕಥೆ. ಡೈರೆಕ್ಷನ್​ ಮಾಡಿದ್ದು ಖುಷಿ ಅನಿಸಿತು. ನನ್ನ ವಿಷನ್​ ಅನ್ನು ನಾನು ಓಪನ್​ ಆಗಿ ಹೇಳುವ ಸ್ವಾತಂತ್ರ್ಯ ನನ್ನ ಸಿನಿಮಾದಲ್ಲಿ ಸಿಕ್ಕಿದೆ. ನಾನು ಎಂಟು ವರ್ಷದಿಂದ ಸಿಂಗರ್​. ನಾನು ರಂಗಭೂಮಿಗೆ ಬಂದಿದ್ದು ಸಿಂಗರ್​ ಆಗಿಯೇ. ಹೀಗಾಗಿ ಈ ಚಿತ್ರದಲ್ಲಿ ನಾನೇ ಸಂಗೀತ ನಿರ್ದೇಶಕಿಯಾಗಿಯೂ ಜವಾಬ್ದಾರಿ ನಿಭಾಯಿಸಿದ್ದೇನೆ. ಇದು ನೈಜ ಘಟನೆಯಾಧಾರಿತ ಚಿತ್ರವಲ್ಲ. ಸಿನಿಮಾ 1 ಗಂಟೆ 40 ನಿಮಿಷ ಮಾತ್ರ ಇದೆ. ಎಲ್ಲಿಯೂ ಬೋರ್​ ಹೊಡೆಸಲ್ಲ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

The Vacant house movie will be release on november 10
ಎಸ್ತರ್ ನರೋನ್ಹಾ

ಇನ್ನು, 'ದಿ ವೆಕೆಂಟ್ ಹೌಸ್' ಸಿನಿಮಾದ ಸ್ಯಾಂಪಲ್ಸ್ ಈಗಾಗಲೇ ಭಾರಿ ಸದ್ದು ಮಾಡುತ್ತಿವೆ. ಹಾಡುಗಳು, ಟೀಸರ್ ಗಮನ ಸೆಳೆಯುತ್ತಿದೆ. ಕನ್ನಡ ಹಾಗೂ ಕೊಂಕಣಿ ಭಾಷೆಯಲ್ಲಿ ಮೂಡಿಬಂದಿರುವ ಚಿತ್ರಕ್ಕೆ ನರೇಂದ್ರ ಗೌಡ ಛಾಯಾಗ್ರಹಣ, ವಿಜಯ್ ರಾಜ್ ಸಂಕಲನವಿದೆ. 'ದಿ ವೆಕೆಂಟ್ ಹೌಸ್' ಸಿನಿಮಾವನ್ನು ಬಹುತೇಕ ಮಂಗಳೂರಿನಲ್ಲಿ ಚಿತ್ರೀಕರಣ ಮಾಡಲಾಗಿದೆ. ಖಾಲಿ ಮನೆಯ ಸುತ್ತ ನಡೆಯುವ ಘಟನೆ ಆಧಾರಿತ ಸಿನಿಮಾವಿದು.

ಎಸ್ತರ್ ನರೋನ್ಹಾ ಅವರು ಮಂಗಳೂರಿನವರು. ಆದರೆ ಬೆಳೆದಿದ್ದೆಲ್ಲಾ ಮುಂಬೈನಲ್ಲಿ. ಕನ್ನಡದ 'ಉಸಿರಿಗಿಂತ ನೀನೇ ಹತ್ತಿರ' ಎಂಬ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಿದ್ದಾರೆ. ಬಾಲಿವುಡ್‌ನ ಖ್ಯಾತ ನಟ ಅನುಪಮ್ ಖೇರ್ ನಟನಾ ಶಾಲೆಯಲ್ಲಿ ತರಬೇತಿ ಪಡೆದು ಹಿಂದಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಅವರು ಬಳಿಕ, ತೆಲುಗು, ತುಳು ಸಿನಿಮಾಗಳಲ್ಲೂ ನಟಿಸಿದ್ದಾರೆ.

'ದಿ ವೆಕೆಂಟ್ ಹೌಸ್' ತಂಡ

ಸಂದೇಶ್ ಶೆಟ್ಟಿ ಆಜ್ರಿ ನಿರ್ದೇಶನದ ಇನಾಮ್ದಾರ್ ಸಿನಿಮಾದ ಸಿಲ್ಕು ಮಿಲ್ಕು ಹಾಡಿಗೆ ಬೊಂಬಾಟ್ ಆಗಿ ಹೆಜ್ಜೆ ಹಾಕಿರುವ ಎಸ್ತಾರ್ ಗ್ಲಾಮರ್ ನಂಬರ್​ಗೆ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದಾರೆ. ರಾಜ್ಯಾದ್ಯಂತ ರಿಲೀಸ್ ಆಗಿರುವ ಇನಾಮ್ದಾರ್ ಚಿತ್ರಕ್ಕೆ ಮೆಚ್ಚುಗೆ ಸಿಗುತ್ತದೆ. ನರೋನ್ಹಾ ಕುಣಿದು ಕುಪ್ಪಳಿಸಿರುವ ಸಿಲ್ಕು ಸಖತ್ ಹಿಟ್ ಆಗಿದೆ. ಈ ಖುಷಿ ಬೆನ್ನಲ್ಲೇ ಎಸ್ತರ್ ಚೊಚ್ಚಲ ಕನಸು 'ದಿ ವೆಕೆಂಟ್ ಹೌಸ್' ಚಿತ್ರ ನವೆಂಬರ್ 10ರಂದು ರಾಜ್ಯಾದ್ಯಂತ ಬಿಡುಗಡೆಗೆ ಸಜ್ಜಾಗಿದೆ.

ಇದನ್ನೂ ಓದಿ: ಎಸ್ತರ್ ನರೋನ್ಹಾ ಚೊಚ್ಚಲ ನಿರ್ದೇಶನದ 'ದಿ ವೆಕೆಂಟ್ ಹೌಸ್' ಸಿನಿಮಾ ನವೆಂಬರ್​ 10ರಂದು ಬಿಡುಗಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.