ETV Bharat / entertainment

ನಾಳೆಯಿಂದ ಕೆಜಿಎಫ್ ಚಾಪ್ಟರ್ 2 ಸಿನಿಮಾದ ಟಿಕೆಟ್ ಬುಕ್ಕಿಂಗ್ ಶುರು - ಏಪ್ರಿಲ್ 7ರಿಂದ ಕೇರಳ, ತಮಿಳುನಾಡು ಹಾಗೂ ಹಿಂದಿಯಲ್ಲಿ ಟಿಕೆಟ್ ಬುಕ್ಕಿಂಗ್ ಶುರು

ಕೆಜಿಎಫ್ ಚಾಪ್ಟರ್- 2 ರಾಕಿಂಗ್ ಸ್ಟಾರ್ ಯಶ್ ಅಭಿನಯದ ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ ಹೈ ವೋಲ್ಟೇಜ್ ಸಿನಿಮಾವಾಗಿದೆ. ಇದೇ ಏಪ್ರಿಲ್ 14ರಂದು ವಿಶ್ವಾದ್ಯಂತ ತೆರೆ ಕಾಣಲು ಸಜ್ಜಾಗಿರೋ ಸಿನಿಮಾದ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್​ಗೆ ಇದೀಗ ಕೌಂಟ್‌ಡೌನ್ ಶುರುವಾಗಿದೆ.

ಕೆಜಿಎಫ್ ಚಾಪ್ಟರ್ 2 ಸಿನಿಮಾದ ಟಿಕೆಟ್ ಬುಕ್ಕಿಂಗ್ ಶುರು

author img

By

Published : Apr 6, 2022, 9:56 PM IST

ಕೆಜಿಎಫ್ ಚಾಪ್ಟರ್- 2 ಸಿನಿಮಾದ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ನಾಳೆಯಿಂದ ಆರಂಭವಾಗಲಿದೆ. ಈಗಾಗಲೇ ಈ ಚಿತ್ರದ ಭರ್ಜರಿ ಪ್ರಮೋಷನ್‌ ಮಾಡ್ತಾ ಇರೋ ಯಶ್, ಸಂಜಯ್ ದತ್, ನಟಿ ಶ್ರೀನಿಧಿ ಶೆಟ್ಟಿ ಹಾಗೂ ಬಾಲಿವುಡ್ ನಟಿ ರವೀನಾ ಟೆಂಡನ್ ಸದ್ಯ ಮುಂಬೈನಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ಈ ನಡುವೆ ಚಿತ್ರದ ರಿಲೀಸ್ ಬಗ್ಗೆ ಪ್ರತಿದಿನವೂ ಹೊಸ ಅಪ್ಡೇಟ್​ ಬರ್ತಾನೆ ಇದೆ. ಇದೀಗ ಭಾರತದ ಹಲವು ಭಾಗಗಳಲ್ಲಿ ಮುಂಗಡವಾಗಿ ಟಿಕೆಟ್ ಬುಕ್ಕಿಂಗ್​ ಮಾಡುವ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಕರ್ನಾಟಕದಲ್ಲಿ ಕೆಜಿಎಫ್ ಚಾಪ್ಟರ್ 2 ಸಿನಿಮಾದ ಅಡ್ವಾನ್ಸ್ ಬುಕ್ಕಿಂಗ್ ಏಪ್ರಿಲ್ 10ರಿಂದ ಶುರು

ಅಡ್ವಾನ್ಸ್​​ ಟಿಕೆಟ್​ ಬುಕ್ಕಿಂಗ್​ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದೆ. ಏಪ್ರಿಲ್ 7ರಿಂದ ಕೇರಳ, ತಮಿಳುನಾಡು ಹಾಗೂ ಹಿಂದಿಯಲ್ಲಿ ಸಿನಿಮಾದ ಅಡ್ವಾನ್ಸ್ ಬುಕ್ಕಿಂಗ್ ಆರಂಭಿಸಲಾಗುವುದು ಎಂದು ಘೋಷಿಸಿದೆ. ಇನ್ನು ಅಡ್ವಾನ್ಸ್ ಬುಕ್ಕಿಂಗ್ ಫೋಸ್ಟರ್​​ ಅನ್ನು ನಟ ಯಶ್, ಸಂಜಯ್ ದತ್, ನಿರ್ದೇಶಕ ಪ್ರಶಾಂತ್ ನೀಲ್, ನಟಿಯರಾದ ರವೀನಾ ಟೆಂಡನ್, ಶ್ರೀನಿಧಿ ಶೆಟ್ಟಿ ಹಾಗೂ ಕಾರ್ಯಕಾರಿ ನಿರ್ಮಾಪಕ ಕಾರ್ತೀಕ್‌ ಸಮ್ಮುಖದಲ್ಲಿ ಮುಂಬೈನಲ್ಲಿ‌ ಅನಾವರಣ ಮಾಡಲಾಗಿದೆ.

ಮುಂಬೈನಲ್ಲಿ ಕೆಜಿಎಫ್ ಚಾಪ್ಟರ್ 2, ಸಿನಿಮಾದ ಭರ್ಜರಿ ಪ್ರಚಾರ

ಬುಕ್​ಮೈಶೋ ಹಾಗೂ ಪೇಟಿಎಂ ಮೂಲಕ ನಾಳೆಯಿಂದ ಕೆಜಿಎಫ್ ಚಾಪ್ಟರ್ 2 ಸಿನಿಮಾದ ಅಡ್ವಾನ್ಸ್​ ಬುಕ್ಕಿಂಗ್​ಗೆ ಓಪನ್ ಆಗಲಿದೆ ಅಂತಾ ಹೊಂಬಾಳೆ ಫಿಲ್ಮ್ಸ್ ತಮ್ಮ ಟ್ವೀಟ್​ನಲ್ಲಿ ತಿಳಿಸಿದೆ. ಇನ್ನು ಕರ್ನಾಟಕದಲ್ಲಿ ಕೆಜಿಎಫ್ ಚಾಪ್ಟರ್ 2 ಸಿನಿಮಾದ ಅಡ್ವಾನ್ಸ್ ಬುಕ್ಕಿಂಗ್ ಏಪ್ರಿಲ್ 10ರಿಂದ ಶುರುವಾಗಲಿದೆ ಅಂತಾ ಹೊಂಬಾಳೆ‌ ಫಿಲ್ಮ್ ಸಂಸ್ಥೆ ತಿಳಿಸಿದೆ. ಇನ್ನು ಅಮೆರಿಕದ ಐಮ್ಯಾಕ್ಸ್‌ನಲ್ಲಿ ಬಿಡುಗಡೆ ಆಗುತ್ತಿರುವ ಮೊದಲ‌ ಕನ್ನಡ ಸಿಮಿಮಾ ಇದಾಗಿದೆ.ಈ ಹಿನ್ನೆಲೆಯಲ್ಲಿ ಏಪ್ರಿಲ್ 13ರಂದು ಅಮೆರಿಕದ ಹಲವು ಕಡೆ ಪ್ರಿಮಿಯರ್ ಶೋ ಮಾಡಲಾಗುತ್ತಿದೆ. ಇದರ ಜೊತೆಗೆ 5000 ಟಿಕೆಟ್​ಗಳು ಮಾರಾಟ ಆಗಿವೆ.

ಈ ಚಿತ್ರದಲ್ಲಿ ಯಶ್, ಬಾಲಿವುಡ್​ನ ಖ್ಯಾತ ನಟ ಸಂಜಯ್ ದತ್​ ಅಧೀರನಾಗಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ವಿಶೇಷ ಪಾತ್ರದಲ್ಲಿ ಬಾಲಿವುಡ್ ನಟಿ ರವೀನಾ ಟಂಡನ್​, ನಟಿ‌ ಶ್ರೀನಿಧಿ ಶೆಟ್ಟಿ, ಬಹುಭಾಷಾ ನಟ ಪ್ರಕಾಶ್ ರೈ ಸೇರಿದಂತೆ ದೊಡ್ಡ ತಾರಾ ಬಳಗವಿದೆ. ಪ್ರಶಾಂತ್ ನೀಲ್ ನಿರ್ದೇಶನದ, ರವಿ ಬಸ್ರೂರು ಸಂಗೀತ ನೀಡಿದ್ದು, ಭುವನ್ ಗೌಡ ಛಾಯಾಗ್ರಹಣ ಈ ಚಿತ್ರಕ್ಕಿದೆ. ಬಹುಕೋಟಿ ವೆಚ್ಚದಲ್ಲಿ ನಿರ್ಮಾಪಕ ವಿಜಯ್ ಕಿರಂಗದೂರ್ ನಿರ್ಮಾಣ ಮಾಡಿದ್ದಾರೆ.

ಕೆಜಿಎಫ್ ಚಾಪ್ಟರ್ 2 ಸಿನಿಮಾದ ಟಿಕೆಟ್ ಬುಕ್ಕಿಂಗ್ ಶುರು
ಕೆಜಿಎಫ್ ಚಾಪ್ಟರ್ 2 ಸಿನಿಮಾದ ಟಿಕೆಟ್ ಬುಕ್ಕಿಂಗ್ ಶುರು

ಇದನ್ನೂ ಓದಿ: ನಾನು ಹಾಗಂದಿಲ್ಲ, ವದಂತಿ ನಿಲ್ಲಿಸಿ.. ಅಪಪ್ರಚಾರದ ಕುರಿತು ಮೌನ ಮುರಿದ ಬಹುಭಾಷಾ ನಟಿ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.