ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಕೇವಲ ನಟನಾಗಿ ಮಾತ್ರವಲ್ಲದೇ, ನಿರ್ಮಾಪಕನಾಗಿಯೂ ಗುರುತಿಸಿಕೊಳ್ಳುತ್ತಿದ್ದಾರೆ. ತಮ್ಮದೇ ಪರಂವಃ ಸ್ಟುಡಿಯೋಸ್ ಮೂಲಕ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ', 'ಬ್ಯಾಚುರಲ್ ಪಾರ್ಟಿ' ಸಿನಿಮಾಗಳನ್ನು ಇವರೇ ನಿರ್ಮಿಸಿದ್ದಾರೆ. ಇದೀಗ 'ಇಬ್ಬನಿ ತಬ್ಬಿದ ಇಳೆಯಲಿ' ಎಂಬ ಪ್ರೇಮಕಥೆಯನ್ನು ಪ್ರೇಕ್ಷಕರಿಗೆ ಉಣಬಡಿಸಲು ಸಜ್ಜಾಗಿದ್ದಾರೆ.
ಈ ಹಿಂದೆ ರಕ್ಷಿತ್ ಶೆಟ್ಟಿ ಅವರ ಸವೆನ್ ಆಡ್ಸ್ ಚಿತ್ರಕಥಾ ವಿಭಾಗದಲ್ಲಿ, 'ಕಿರಿಕ್ ಪಾರ್ಟಿ' ಮತ್ತು 'ಅವನೇ ಶ್ರೀಮನ್ನಾರಾಯಣ' ಚಿತ್ರಗಳ ಚಿತ್ರಕಥೆಯಲ್ಲಿ ತೊಡಗಿಸಿಕೊಂಡಿದ್ದ ಮತ್ತು 'ರೇನ್ಬೋ ಲ್ಯಾಂಡ್' ಕಿರುಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಜಿತ್ ಬೆಳ್ಳಿಯಪ್ಪ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಇವರ ಸುಮಧುರ ಪ್ರೇಮಕಾವ್ಯದಲ್ಲಿ ಖ್ಯಾತ ನಟಿ ಗಿರಿಜಾ ಶೆಟ್ಟರ್ ಅಭಿನಯಿಸಿದ್ದಾರೆ.
-
In a spectacular return to the silver screen after a 30-year hiatus, the immensely talented and captivating actress @GirijaShettar is set to grace PARAMVAH STUDIOS' upcoming movie, "Ibbani Tabbida Ileyali." pic.twitter.com/Roj87o0AOl
— Paramvah Studios (@ParamvahStudios) August 11, 2023 " class="align-text-top noRightClick twitterSection" data="
">In a spectacular return to the silver screen after a 30-year hiatus, the immensely talented and captivating actress @GirijaShettar is set to grace PARAMVAH STUDIOS' upcoming movie, "Ibbani Tabbida Ileyali." pic.twitter.com/Roj87o0AOl
— Paramvah Studios (@ParamvahStudios) August 11, 2023In a spectacular return to the silver screen after a 30-year hiatus, the immensely talented and captivating actress @GirijaShettar is set to grace PARAMVAH STUDIOS' upcoming movie, "Ibbani Tabbida Ileyali." pic.twitter.com/Roj87o0AOl
— Paramvah Studios (@ParamvahStudios) August 11, 2023
ತೆಲುಗಿನ 'ಗೀತಾಂಜಲಿ' ಚಿತ್ರ ಸೇರಿದಂತೆ ಅನೇಕ ಸುಪ್ರಸಿದ್ದ ಚಿತ್ರಗಳಲ್ಲಿ ನಟಿಸಿರುವ ಗಿರಿಜಾ ಶೆಟ್ಟರ್, ಈ ಚಿತ್ರದಲ್ಲೂ ನಟಿಸಿದ್ದಾರೆ. ಗಿರಿಜಾ ಶೆಟ್ಟರ್ ಅವರ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಅವರಿಗೆ ಸ್ವಾಗತ ಕೋರಿದೆ. 30 ವರ್ಷಗಳ ಬಳಿಕ ಗಿರಿಜಾ ಶೆಟ್ಟರ್ ಮತ್ತೆ ಬಣ್ಣ ಹಚ್ಚಿದ್ದಾರೆ.
ಚಂದ್ರಜಿತ್ ಬೆಳ್ಳಿಯಪ್ಪ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ 'ಇಬ್ಬನಿ ತಬ್ಬಿದ ಇಳೆಯಲಿ' ಚಿತ್ರದ ಶೂಟಿಂಗ್ ಮುಕ್ತಾಯ ಹಂತ ತಲುಪಿದ್ದು, ಚಿತ್ರತಂಡಕ್ಕೆ ಗಿರಿಜಾ ಶೆಟ್ಟರ್ ಸೇರ್ಪಡೆಯಾಗಿದ್ದಾರೆ. ಇದರಲ್ಲಿ ನಟಿಗೆ ಪ್ರಮುಖ ಪಾತ್ರವಿದ್ದು, ಅವರು ಚಿತ್ರೀಕರಣದಲ್ಲಿ ಈಗಾಗಲೇ ಭಾಗವಹಿಸಿದ್ದಾರೆ.
ಇದನ್ನೂ ಓದಿ: ಬ್ಯಾಚುಲರ್ ಪಾರ್ಟಿ ಜೊತೆಗೆ ಇಬ್ಬನಿ ತಬ್ಬಿದ ಇಳೆಯಲಿ ಚಿತ್ರ ನಿರ್ಮಿಸುತ್ತಿರುವ ರಕ್ಷಿತ್ ಶೆಟ್ಟಿ
ಚಿತ್ರಕಥೆ.. ಇದೊಂದು ಕಾವ್ಯಾತ್ಮಕ ಪ್ರೇಮಕಥೆಯಾಗಿದ್ದು, ಮೂರು ವಿಭಿನ್ನ ಕಾಲಘಟ್ಟದಲ್ಲಿ ನಡೆಯುವ ಚಿತ್ರವಾಗಿದೆ. ಪ್ರೀತಿ ಎಂದರೆ ಏನು?, ಹಳೆಯ ನೆನಪುಗಳಾ? ಅಥವಾ ನಾಳೆ ಜತೆಯಾಗಿರಬೇಕಾದ ಕನಸುಗಳಾ?. ಹಾಗೂ ದೂರವಾದ ನಂತರದ ಚಡಪಡಿಕೆಯಾ?, ಇದೆಲ್ಲದರ ಸಂಗಮವೇ 'ಇಬ್ಬನಿ ತಬ್ಬಿದ ಇಳೆಯಲಿ' ಸಿನಿಮಾ. ಕಾಲೇಜು ದಿನಗಳಲ್ಲಿ ಚಿಗರೊಡೆಯುವ ಪ್ರೇಮಕಥೆಯು ನಂತರದ ದಿನಗಳಲ್ಲಿ ಅಂತ್ಯವಾಗುತ್ತದೆ. ಹೀಗೆ ಒಂದು ದಶಕದ ವಿವಿಧ ಕಾಲಘಟ್ಟವನ್ನು ಈ ಸಿನಿಮಾದಲ್ಲಿ ಸೂಕ್ಷ್ಮವಾಗಿ ತೋರಿಸಲಾಗಿದೆ. ಇಲ್ಲಿ ಹಸಿರು ಎಷ್ಟು ಮುಖ್ಯವೋ, ಆಧುನಿಕ ನಗರ ದೃಶ್ಯಗಳು ಅಷ್ಟೇ ಪ್ರಮುಖ ಪಾತ್ರವಹಿಸುತ್ತವೆ. ಅಷ್ಟೇ ಅಲ್ಲದೆ, ಬೇಸಿಗೆಯ ಘಮ, ಚಳಿಗಾಲದ ಹಿತ ಮತ್ತು ಮಳೆಗಾಲದ ಮಾಧುರ್ಯವೂ ಈ ಚಿತ್ರದಲ್ಲಿ ಇರಲಿದೆ.
ವಿಹಾನ್ ಮತ್ತು ಅಂಕಿತಾ ಅಮರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರಕ್ಕೆ ಗಗನ್ ಬದೇರಿಯಾ ಸಂಗೀತ ಸಂಯೋಜಿಸುತ್ತಿದ್ದಾರೆ. ನ್ಯೂಯಾರ್ಕ್ ಫಿಲಂ ಅಕಾಡೆಮಿಯಲ್ಲಿ ಕಲಿತು ಬಂದಿರುವ ಶ್ರೀವತ್ಸನ್ ಸೆಲ್ವರಾಜನ್ ಈ ಚಿತ್ರಕ್ಕೆ ಛಾಯಾಗ್ರಾಹಕರಾಗಿದ್ದಾರೆ. ಈ ಹಿಂದೆ 'ಗಿರ್ಗಿಟ್ಲೆ' ಕಥೆಯನ್ನು ನಿರ್ದೇಶಿದ್ದ ಶಶಿಕುಮಾರ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಪರಂವಃ ಸ್ಟುಡಿಯೋಸ್ ಅಡಿಯಲ್ಲಿ ರಕ್ಷಿತ್ ಶೆಟ್ಟಿ ನಿರ್ಮಿಸಿರೋ ಈ ಚಿತ್ರ ಸದ್ಯದಲ್ಲೇ ಟೀಸರ್ ಬಿಡುಗಡೆಗೆ ಪ್ಲಾನ್ ಮಾಡಿದೆ.
ಇದನ್ನೂ ಓದಿ: Chandramukhi 2: ಬಹುನಿರೀಕ್ಷಿತ 'ಚಂದ್ರಮುಖಿ 2' ಚಿತ್ರದ 'ಸ್ವಾಗತಾಂಜಲಿ' ಹಾಡು ಬಿಡುಗಡೆ