ETV Bharat / entertainment

ತ್ರಿಕೋನ ಪ್ರೇಮಕಥೆ ಹೇಳಲು ಸಜ್ಜಾದ 'ಓ‌ ಮನಸೇ' - O manase movie songs released

ಓ‌ ಮನಸೇ ಚಿತ್ರದ ಹಾಡುಗಳು ಬಿಡುಗಡೆ ಆಗಿದ್ದು, ಶೀಘ್ರದಲ್ಲೇ ಸಿನಿಮಾ ಕೂಡ ರಿಲೀಸ್ ಆಗಲಿದೆ.

O manase movie
ಓ‌ ಮನಸೇ ಸಿನಿಮಾ
author img

By

Published : Jan 24, 2023, 7:56 PM IST

Updated : Jan 24, 2023, 8:06 PM IST

'ಓ‌ ಮನಸೇ' ಶೀರ್ಷಿಕೆಯಿಂದಲೇ ಚಂದನವನದಲ್ಲಿ ಸದ್ದು ಮಾಡುತ್ತಿರುವ ಚಿತ್ರ. ನಟ ವಿಜಯ್ ರಾಘವೇಂದ್ರ ಹಾಗು ನಟ ಧರ್ಮ ಕೀರ್ತಿರಾಜ್ ಮುಖ್ಯಭೂಮಿಕೆಯಲ್ಲಿರುವ ಓ ಮನಸೇ ಚಿತ್ರದ ಧ್ವನಿ ಸುರುಳಿಯನ್ನು ಬಿಡುಗಡೆ ಮಾಡಲಾಗಿದೆ. ಸದ್ಯ ಓ‌ ಮನಸೇ ಚಿತ್ರದ ಹಾಡುಗಳು ಯೂಟ್ಯೂಬ್​​ ಸೇರಿದಂತೆ ಸೋಶಿಯಲ್​ ಮೀಡಿಯಾದಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿವೆ. ಇತ್ತೀಚೆಗೆ ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮಾ ಹರೀಶ್, ಪೊಲೀಸ್ ಅಧಿಕಾರಿ ಬಿ.ಕೆ ಶಿವರಾಂ, ನಟಿ ಶಾನ್ವಿ ಶ್ರೀವಾತ್ಸವ್, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ಅಣಜಿ ನಾಗರಾಜ್, ಪುಟ್ಟಣ್ಣ ಸಮ್ಮುಖದಲ್ಲಿ ಈ ಚಿತ್ರದ ಹಾಡುಗಳನ್ನು ಅನಾವರಣ ಮಾಡಲಾಗಿದೆ.

  • " class="align-text-top noRightClick twitterSection" data="">

ಪೊಲೀಸ್ ಪಾತ್ರದಲ್ಲಿ ವಿಜಯ ರಾಘವೇಂದ್ರ: ಮೊದಲು ಮಾತನಾಡಿದ ನಟ ವಿಜಯ ರಾಘವೇಂದ್ರ, ಸಿನಿಮಾ ಪ್ರಮೋಷನ್‌ನಲ್ಲಿ ಆಡಿಯೋ ಬಿಡುಗಡೆ ಎಂಬುದು ಮುಖ್ಯವಾದ ಹಂತ. ಸಿನಿಮಾ ಮಾಡೋದು ಮಾತ್ರ ಮುಖ್ಯವಲ್ಲ, ಜನರಿಗೆ ಅದನ್ನು ತಲುಪಿಸುವುದು ಬಹಳ ಮುಖ್ಯ. ನಿರ್ಮಾಪಕರು ಒಳ್ಳೆ ಪ್ರಯತ್ನ ಮಾಡಿದ್ದಾರೆ. ಇದರಲ್ಲಿ ನಾನು ಪೊಲೀಸ್ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಚಿತ್ರದಲ್ಲಿ ಕಾಮಿಡಿ, ಆ್ಯಕ್ಷನ್, ಲವ್ ಹೀಗೆ ಎಲ್ಲಾ ಅಂಶಗಳಿವೆ. ಇದು ನನಗೆ ಬಹಳ ಸ್ಪೆಷಲ್ ಸಿನಿಮಾ ಎನ್ನಬಹುದು ಎಂದು ತಿಳಿಸಿದರು.

O manase movie
ಧರ್ಮ ಕೀರ್ತಿರಾಜ್ ಜೊತೆ ವಿಜಯ ರಾಘವೇಂದ್ರ

ತ್ರಿಕೋನ ಪ್ರೇಮ ಕಥೆ: ಕೋವಿಡ್​ ಸಮಯದಲ್ಲಿ ನನಗೆ ಈ ಸಿನಿಮಾ ಸಿಕ್ಕಿದ್ದು, ಕಮ್ ಬ್ಯಾಕ್ ಜರ್ನಿ ಎನ್ನಬಹುದು. ನಾನು ಈ ಚಿತ್ರದಲ್ಲಿ ಲವರ್ ಬಾಯ್ ಹಾಗೂ ನೆಗಟಿವ್ ಸೈಡ್ ಪಾತ್ರ ಮಾಡಿದ್ದೇನೆ ಎಂದು ನಾಯಕ ಧರ್ಮ ಕೀರ್ತಿರಾಜ್ ತಿಳಿಸಿದರು. ಇನ್ನು, ಇದು ತ್ರಿಕೋನ ಪ್ರೇಮ ಕಥೆ ಒಳಗೊಂಡ ಸಿನಿಮಾ. ಈ ಚಿತ್ರದಲ್ಲಿ ನಟಿಸಿರುವ ಖುಷಿಯಿದೆ ಎಂದರು ನಾಯಕಿ ಸಂಚಿತಾ ಪಡುಕೋಣೆ.

ನೈಜಘಟನೆ ಆಧಾರಿತ ಸಿನಿಮಾ: ಈ‌ ಹಿಂದೆ 'ನವರಂಗಿ' ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದ ಉಮೇಶ್ ಗೌಡ ಈಗ ಮೂರನೇ ಪ್ರಯತ್ನವಾಗಿ 'ಓ ಮನಸೇ' ನಿರ್ದೇಶನ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ಚಿತ್ರದ ಟ್ರೈಲರ್​​ಗೆ ಪ್ರೇಕ್ಷಕರಿಂದ ಒಳ್ಳೆ ಪ್ರತಿಕ್ರಿಯೆ ಸಿಕ್ಕಿದ್ದು, ಈಗ ಹಾಡುಗಳಿಗೂ ಒಳ್ಳೆ ರೆಸ್ಪಾನ್ಸ್ ಬರುತ್ತಿದೆ. ಇದೊಂದು ನೈಜ ಘಟನೆ ಆಧಾರಿತ ಸಿನಿಮಾ ಎಂಬುದು ವಿಶೇಷ ಎಂದು ಹೇಳಿದರು.

O manase movie
ಓ‌ ಮನಸೇ ಚಿತ್ರದ ಹಾಡುಗಳು ಬಿಡುಗಡೆ

ನಿರ್ಮಾಪಕ ಎಂ.ಎನ್ ಭೈರೆಗೌಡ ಮಾತನಾಡಿ, ಸೇಹಿತರ ಜೊತೆಗೂಡಿ ಈ ಸಿನಿಮಾವನ್ನು ನಿರ್ಮಾಣ ಮಾಡಿದೆವು. ಇದು ನಮ್ಮ ಬ್ಯಾನರ್​ನಲ್ಲಿ ನಿರ್ಮಿಸಿರುವ ಮೊದಲ ಸಿನಿಮಾ. ಮುಂದೆಯೂ ಜನರಿಗೆ ಸದಭಿರುಚಿ ಸಿನಿಮಾ ಕೊಡುವ ಉದ್ದೇಶದಿಂದ ಈ ಸಿನಿಮಾ ಮಾಡಲಾಗಿದೆ. ಒಂದು ಒಳ್ಳೆ ಸಿನಿಮಾ ಮಾಡಿದ ಖುಷಿ ನಮಗೆಲ್ಲಾ ಇದೆ. ವಿಜಯ​​ ರಾಘವೇಂದ್ರ, ಧರ್ಮ ಕೀರ್ತಿರಾಜ್ ಜೊತೆ ನಾಯಕಿಯಾಗಿ ಸಂಚಿತ ಪಡುಕೋಣೆ ಅದ್ಭುತವಾಗಿ ನಟಿಸಿದ್ದಾರೆ. ಟ್ರೈಲರ್​ಗೆ ಯೂಟ್ಯೂಬ್‌ನಲ್ಲಿ ಒಳ್ಳೆ ರೆಸ್ಪಾನ್ಸ್ ಬಂದಿದೆ. ಈಗ ಹಾಡುಗಳು ಬಿಡುಗಡೆ ಆಗಿದೆ. ನಮ್ಮ ಬ್ಯಾನರ್​ನಿಂದ ಇನ್ನೂ ಹತ್ತಾರು ಸಿನಿಮಾ ಮಾಡುವ ಯೋಜನೆ ಇದೆ ಎಂದರು.

ಇದನ್ನೂ ಓದಿ: ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ನಟಿ ಅಮೂಲ್ಯ ದಂಪತಿ ಭೇಟಿ, ವಿಶೇಷ ಪೂಜೆ

ಗೀತರಚನೆಕಾರದ ಕವಿರಾಜ್, ಡಾ.ವಿ ನಾಗೇಂದ್ರ ಪ್ರಸಾದ್ ಹಾಡುಗಳನ್ನು ಬರೆದಿದ್ದು, ಜೆಸ್ಸಿ ಗಿಫ್ಟ್ ಸಂಗೀತ ಸಂಯೋಜಿಸಿದ್ದಾರೆ. ವಿಶೇಷವಾಗಿ ಎರಡು ಗೀತೆಗಳನ್ನು ಥೈಲ್ಯಾಂಡ್‌ನ ಸುಂದರ ಪರಿಸರದಲ್ಲಿ ಚಿತ್ರೀಕರಣ ಮಾಡಲಾಗಿದೆ. ಚಿತ್ರದಲ್ಲಿ ಒಟ್ಟು ಮೂರು ಹಾಡುಗಳಿವೆ. ಬಂಡೆ ಚಂದ್ರು, ಥ್ರಿಲ್ಲರ್ ಮಂಜು, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಮಾಡಿದ್ದಾರೆ. ಉಳಿದಂತೆ ಚಿತ್ರಕ್ಕೆ ಎಂ.ಆರ್ ಸೀನು ಛಾಯಾಗ್ರಹಣ, ಶ್ರೀನಿವಾಸ್ ಬಾಬು ಸಂಕಲನ ಹಾಗೂ ಧನಂಜಯ ಅವರ ನೃತ್ಯ ನಿರ್ದೇಶನವಿದೆ.

ಇದನ್ನೂ ಓದಿ: ಜೂಲಿಯೆಟ್ 2 ಟೀಸರ್ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್

ಶ್ರೀ ಫ್ರೆಂಡ್ಸ್ ಮೂವಿ ಮೆಕರ್ಸ್ ಲಾಂಛನದಲ್ಲಿ ಎಂ.ಎನ್ ಭೈರೆಗೌಡ, ಕೆ.ಹೆಚ್. ಧನಂಜಯ, ಕೆ.ವೆಂಕಟೇಶ್, ಸು.ಕಾ ರಾಮು, ಯುವರಾಜ್ ಕೆ.ಎ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಸದ್ಯದಲ್ಲೇ ಓ‌‌ ಮನಸೇ ಸಿನಿಮಾವನ್ನ ಪ್ರೇಕ್ಷಕರ ಮುಂದೆ ತರುವ ಸಿದ್ಧತೆಯಲ್ಲಿ ಚಿತ್ರತಂಡ ಇದೆ.

Last Updated : Jan 24, 2023, 8:06 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.