ETV Bharat / entertainment

ರಾಘು ಶಿವಮೊಗ್ಗ ಸಾರಥ್ಯದ 'ತುಕ್ರ ತನಿಯ' ಸಿನಿಮಾಗೆ ನಟ ದುನಿಯಾ ವಿಜಯ್​ ಸಾಥ್​ - ಈಟಿವಿ ಭಾರತ ಕನ್ನಡ

Tukra Taniya movie: ರಾಘು ಶಿವಮೊಗ್ಗ ನಿರ್ದೇಶನದ ಹೊಸ ಸಿನಿಮಾದ ಟೈಟಲ್ ಅನ್ನು ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

Raghu Shivamogga next movie
ರಾಘು ಶಿವಮೊಗ್ಗ ಸಾರಥ್ಯದ ಹೊಸ ಸಿನಿಮಾಗೆ ನಟ ದುನಿಯಾ ವಿಜಯ್​ ಸಾಥ್​
author img

By ETV Bharat Karnataka Team

Published : Aug 25, 2023, 8:00 PM IST

ರಾಘು ಶಿವಮೊಗ್ಗ ಸಾರಥ್ಯದ ಹೊಸ ಸಿನಿಮಾಗೆ ನಟ ದುನಿಯಾ ವಿಜಯ್​ ಸಾಥ್​

ಸ್ಯಾಂಡಲ್​ವುಡ್​ನಲ್ಲಿ ಚೂರಿಕಟ್ಟೆ, ಪೆಂಟಗನ್ ರೀತಿಯ ವಿಭಿನ್ನ ಕಥೆಗಳನ್ನು ನಿರ್ದೇಶಿಸಿ ಪ್ರೇಕ್ಷಕರಿಗೆ ಮನರಂಜನೆ ಉಣಬಡಿಸಿರುವ ನಿರ್ದೇಶಕ ಮತ್ತು ನಟ ರಾಘು ಶಿವಮೊಗ್ಗ ಅವರ ಮೂರನೇ ಕನಸು ಇಂದು ಅನಾವರಣಗೊಂಡಿದೆ. ರಾಘು ನಿರ್ದೇಶನದ ಹೊಸ ಸಿನಿಮಾದ ಟೈಟಲ್ ಅನ್ನು 'ಭೀಮ' ಸಿನಿಮಾದ ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ. ರಾಘು ಶಿವಮೊಗ್ಗ ನಿರ್ದೇಶಿಸುತ್ತಿರುವ ಮೂರನೇ ಸಿನಿಮಾಗೆ 'ತುಕ್ರ ತನಿಯ' ಎಂಬ ವಿಭಿನ್ನ ಬಗೆಯ ಶೀರ್ಷಿಕೆ ಇಡಲಾಗಿದೆ.

ತುಕ್ರ ಅಂದರೆ ಶುಕ್ರವಾರ ಹುಟ್ಟಿದವನು. ತನಿಯ ಅಂದರೆ ಶನಿವಾರ ಹುಟ್ಟಿದವನು. ಶುಕ್ರವಾರ ಮತ್ತು ಶನಿವಾರ ಹುಟ್ಟಿದ ಇಬ್ಬರ ನಡುವಿನ ಕಥೆ ಇದಾಗಿದೆ. ಪ್ರವೀಣ್ ತೇಜ್ ಹಾಗೂ ಅಚ್ಯುತ್ ಕುಮಾರ್ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ಈ ಚಿತ್ರವನ್ನು ಪದ್ಮಾ ಪಿಕ್ಚರ್ಸ್ ಹಾಗೂ ಗೌರಿ ಟಾಕೀಸ್ ಅಡಿ ನಿರ್ಮಾಣ ಮಾಡಲಾಗುತ್ತಿದೆ.

ರಾಘು ಶಿವಮೊಗ್ಗ ಬಗ್ಗೆ..: ನಿರ್ದೇಶಕನ ಕನಸು ಹೊತ್ತು ಚಿತ್ರೋದ್ಯಮಕ್ಕೆ ಬಂದಿದ್ದ ರಾಘು, ಮೊದಲು ಚೌಕಬಾರ ಹೆಸರಿನ ಕಿರುಚಿತ್ರ ಮಾಡಿದರು. ಆ ಸಿನಿಮಾವನ್ನು ಥಿಯೇಟರ್​ನಲ್ಲಿ ರಿಲೀಸ್ ಮಾಡಿ, ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದರು. ಆನಂತರ ಚೂರಿಕಟ್ಟೆ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದರು. ಈ ಸಿನಿಮಾ ವಿಮರ್ಶಕರ ಮೆಚ್ಚುಗೆಗೆ ಪಾತ್ರವಾಯಿತು. ಅವರಿಗೂ ಒಳ್ಳೆಯ ಹೆಸರು ಬಂತು. ನಂತರ ಆ್ಯಕ್ಟ್ 1978 ಸಿನಿಮಾ ಮೂಲಕ ನಟನಾಗಿ ಬಣ್ಣದ ಲೋಕದಲ್ಲಿ ಮಿಂಚಿದರು. ಈ ಸಿನಿಮಾದಲ್ಲಿನ ಪಾತ್ರ ಅವರನ್ನು ಬ್ಯುಸಿ ನಟನನ್ನಾಗಿ ಮಾಡಿತು. ಸಾಕಷ್ಟು ಸಿನಿಮಾಗಳಲ್ಲಿ ನಟನಾಗಿಯೇ ಬ್ಯುಸಿಯಾದರು. ಈಗ ಮತ್ತೆ ನಿರ್ದೇಶನದತ್ತ ಮುಖ ಮಾಡಿದ್ದಾರೆ.

tukra taniya movie directed by raghu shivamogga

ಇದನ್ನೂ ಓದಿ: ನಂದ ಕಿಶೋರ್​-ಮೋಹನ್ ​ಲಾಲ್​ ಕಾಂಬೋದಲ್ಲಿ 'ವೃಷಭ': ಮೈಸೂರಿನಲ್ಲಿ ಮೊದಲ ಹಂತದ ಶೂಟಿಂಗ್​ ಕಂಪ್ಲೀಟ್‌

ಡಿಸೆಂಬರ್​ನಿಂದ ಶೂಟಿಂಗ್​ ಶುರು: ಮಲೆನಾಡಿನ ಗ್ರಾಮೀಣ ಭಾಗದಲ್ಲಿ ಡಿಸೆಂಬರ್​ನಿಂದ 'ತುಕ್ರ ತನಿಯ' ಚಿತ್ರೀಕರಣ ನಡೆಸೋದಿಕ್ಕೆ ಚಿತ್ರತಂಡ ತಯಾರಿ ನಡೆಸಿದೆ. ತುಕ್ರ ತನಿಯ ಸಿನಿಮಾಗೆ ಶಾಂತಿ ಸಾಗರ್ ಛಾಯಾಗ್ರಹಣ, ಕದ್ರಿ ಮಣಿಕಾಂತ್ ಸಂಗೀತ, ಪ್ರಕಾಶ್ ಕಾರಿಂಜ ಸಂಕಲನವಿದೆ.

'ಭೀಮ'ನಾಗಿ ದುನಿಯಾ ವಿಜಯ್​: ದುನಿಯಾ ವಿಜಯ್​ ಕನ್ನಡ ಚಿತ್ರರಂಗದ ಬಹುಬೇಡಿಕೆ ನಟ ಮತ್ತು ನಿರ್ದೇಶಕ. ವಿಭಿನ್ನ ಪಾತ್ರ, ಉತ್ತಮ ನಟನೆ, ವಿಶಿಷ್ಠ ಮ್ಯಾನರಿಸಂ ಮೂಲಕ ತಮ್ಮದೇ ಆದ ವಿಭಿನ್ನ ಸ್ಟಾರ್​ ಡಮ್​ ಹೊಂದಿದ್ದಾರೆ. ಅವರ ಮುಂದಿನ ಸಿನಿಮಾ 'ಭೀಮ'. ಸಲಗ ಚಿತ್ರದ ಸಕ್ಸಸ್ ಬಳಿಕ ವಿಜಯ್ ಅಭಿನಯದ ಜೊತೆಗೆ ನಿರ್ದೇಶನ ಮಾಡುತ್ತಿರೋ ಸಿನಿಮಾವಿದು. ಭೀಮ ಸೈಲೆಂಟ್ ಆಗಿ ಚಿತ್ರೀಕರಣ ಮುಗಿಸಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ನವೆಂಬರ್ ತಿಂಗಳ ದೀಪಾವಳಿ ಸಂದರ್ಭ ಸಿನಿಮಾ‌ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ.

ಇದನ್ನೂ ಓದಿ: ದುನಿಯಾ ವಿಜಯ್ ಅಭಿಮಾನಿಗಳೇ ರೆಡಿಯಾಗಿ - 'ಭೀಮ'ನ ದರ್ಶನಕ್ಕೆ‌ ಮುಹೂರ್ತ ಫಿಕ್ಸ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.