ETV Bharat / entertainment

ಬಹುಕಾಲದ ಗೆಳತಿ ಬೃಂದಾ ವಿಕ್ರಮ್ ಜೊತೆ ಹಸೆಮಣೆ ಏರಿದ ವಾಸುಕಿ ವೈಭವ್ - Vasuki Vaibhav Marriage

Vasuki Vaibhav wedding: ಸಂಗೀತ ನಿರ್ದೇಶಕ ವಾಸುಕಿ ವೈಭವ್ ಅವರಿಂದು ತಮ್ಮ ಬಹುಕಾಲದ ಗೆಳತಿ ಬೃಂದಾ ವಿಕ್ರಮ್ ಅವರ ಕೈ ಹಿಡಿದಿದ್ದಾರೆ.

Vasuki Vaibhav Brinda Vikram Marriage
ವಾಸುಕಿ ವೈಭವ್ ಬೃಂದಾ ವಿಕ್ರಮ್ ಮದುವೆ
author img

By ETV Bharat Karnataka Team

Published : Nov 16, 2023, 2:46 PM IST

'ರಾಮಾ ರಾಮಾ ರೇ' ಸಿನಿಮಾ ಮೂಲಕ ಸಂಗೀತ ನಿರ್ದೇಶಕನಾಗಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ವಾಸುಕಿ ವೈಭವ್ ತಮ್ಮ ಬಹುಕಾಲದ ಗೆಳತಿ ಬೃಂದಾ ವಿಕ್ರಮ್ ಜೊತೆ ಹಸೆಮಣೆ ಏರಿದ್ದಾರೆ. ರಾಮಾ ರಾಮಾ ರೇ ಸಿನಿಮಾದ ಸಕ್ಸಸ್ ಜೊತೆ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಐಡೆಂಟಿಟಿ ಕ್ರಿಯೇಟ್ ಮಾಡಿಕೊಂಡ ವಾಸುಕಿ ವೈಭವ್ ಅವರೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರು ಹಿರಿಯರ ಸಮ್ಮುಖದಲ್ಲಿ ಬೃಂದಾ ವಿಕ್ರಮ್ ಜೊತೆ ವಾಸುಕಿ ವೈಭವ್ ಅವರ ಕಲ್ಯಾಣ ಜರುಗಿದೆ. ಬಹುಕಾಲದ ಗೆಳತಿ ಜೊತೆ ಬಹಳ ಸರಳವಾಗಿ ಹಿಂದೂ ಸಂಪ್ರದಾಯದ ಪ್ರಕಾರ ವಾಸುಕಿ ವೈಭವ್​ ಮದುವೆ ಆಗಿದ್ದಾರೆ.

ಹಲವು ವರ್ಷಗಳ ಪ್ರೀತಿಗೆ ಮದುವೆ ಮುದ್ರೆ: ವಾಸುಕಿ ವೈಭವ್​ ಹಾಗೂ ಬೃಂದಾ ವಿಕ್ರಮ್​ ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದರು. ಬೃಂದಾ ವಿಕ್ರಮ್​ ಅವರು ರಂಗಭೂಮಿ ಹಿನ್ನೆಲೆ ಹೊಂದಿದ್ದಾರೆ. ಶಿಕ್ಷಕಿ ಆಗಿಯೂ ಅವರು ಕೆಲಸ ಮಾಡುತ್ತಿದ್ದಾರೆ. ಹೆಚ್ಚಾಗಿ ವಾಸುಕಿ ಜೊತೆ ಬೃಂದಾ‌ ಕಾಣಿಸಿಕೊಳ್ಳುತ್ತಿದ್ದರು‌. ಅದರೆ ವಾಸುಕಿ ಮತ್ತು ಬೃಂದಾ ಅವರು ತಮ್ಮ ಪ್ರೀತಿಯ ಬಗ್ಗೆ ಸಾರ್ವಜನಿಕವಾಗಿ ಹೆಚ್ಚೇನೂ ಹೇಳಿಕೊಂಡಿರಲಿಲ್ಲ. ಇದೀಗ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಅಭಿಮಾನಿಗಳು ನವಜೋಡಿಗೆ ಶುಭಾಶಯ ಕೋರಿದ್ದಾರೆ.

Vasuki Vaibhav Brinda Vikram Marriage
ವಾಸುಕಿ ವೈಭವ್ ಬೃಂದಾ ವಿಕ್ರಮ್ ಮದುವೆ

''ಹೊಸ ಪಯಣ ಆರಂಭ ಆಗಿದೆ. ನಿಮ್ಮೆಲ್ಲರ ಆಶೀರ್ವಾದ ಮತ್ತು ಹಾರೈಕೆ ಬೇಕು'' ಎಂದು ವಾಸುಕಿ ವೈಭವ್​ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇಷ್ಟು ದಿನಗಳ ಕಾಲ ವಾಸುಕಿ ವೈಭವ್​ ಅವರು ಮದುವೆ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. ಕಳೆದ ವಾರ ವಾಸುಕಿ ವೈಭವ್​ ಅವರ ಕುಟುಂಬದಲ್ಲಿ ಚಪ್ಪರ ಪೂಜೆ ಆರಂಭ ಆಗಿತ್ತು.

ಇದನ್ನೂ ಓದಿ: ಶೀಘ್ರದಲ್ಲೇ ತಮನ್ನಾ ವಿಜಯ್ ಮದುವೆ? ಅಧಿಕೃತ ಘೋಷಣೆ ನಿರೀಕ್ಷೆ

ವಾಸುಕಿ ವೈಭವ್ ಸದ್ಯ ಕನ್ನಡ ಚಿತ್ರರಂಗದ ಬೇಡಿಕೆಯ ಸಂಗೀತ ನಿರ್ದೇಶಕರಲ್ಲೊಬ್ಬರು. 2016ರಲ್ಲಿ ತೆರೆಕಂಡ 'ರಾಮಾ ರಾಮಾ ರೇ' ಸಿನಿಮಾದ ಮೂಲಕ ಸಂಗೀತ ನಿರ್ದೇಶಕರಾಗಿ ಅವರು ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು‌. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು, ಒಂದಲ್ಲಾ ಎರಡಲ್ಲಾ, ಬಡವ ರಾಸ್ಕಲ್‌, ಹರಿಕಥೆ ಅಲ್ಲ ಗಿರಿಕಥೆ, ಟಗರು ಪಲ್ಯ, ತತ್ಸಮ ತದ್ಭವ ಸೇರಿದಂತೆ ಸಾಕಷ್ಟು ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್ ಪ್ರೋಮೋ: ಸಂಗೀತಾ, ಕಾರ್ತಿಕ್, ತನಿಷಾ ಸ್ನೇಹದಲ್ಲಿ ಬಿರುಕು?

ಇತ್ತೀಚೆಗೆ ಬಿಡುಗಡೆ ಆಗಿರುವ ಟಗರು ಪಲ್ಯ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುವುದರ ಜೊತೆಗೆ ಒಂದು ಮುಖ್ಯ ಪಾತ್ರದಲ್ಲಿ ಅಭಿನಯಿಸುವ ಮೂಲಕವೂ ಗಮನ ಸೆಳೆದಿದ್ದಾರೆ. ಇದೀಗ ದಾಂಪತ್ಯ ಜೀವನ ಶುರು ಮಾಡಿದ್ದಾರೆ. ನವದಂಪತಿಗೆ ಕನ್ನಡ ಚಿತ್ರರಂಗದ ಗೆಳೆಯರು ಶುಭಾಶಯ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.