ETV Bharat / entertainment

ವೀರ ಕಂಬಳ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ನಟನೆ - Veerendra Heggade acting

ವೀರ ಕಂಬಳ ಶೂಟಿಂಗ್​ ಜೋರು - ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಅಭಿನಯ - ಅತಿಥಿ ಪಾತ್ರದಲ್ಲಿ ನಟಿಸುತ್ತಿರುವ ಡಾ. ಡಿ ವೀರೇಂದ್ರ ಹೆಗ್ಗಡೆ.

Veerendra Heggade acting
ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ನಟನೆ
author img

By

Published : Jan 3, 2023, 3:19 PM IST

Updated : Jan 3, 2023, 6:24 PM IST

ಧರ್ಮಸ್ಥಳ (ದಕ್ಷಿಣ ಕನ್ನಡ): ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ‌ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಧರ್ಮಸ್ಥಳದ ಧರ್ಮಾಧಿಕಾರಿ ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ. ಎಸ್.ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ 'ವೀರ ಕಂಬಳ' ಎಂಬ ಸಿನಿಮಾದಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಅತಿಥಿ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಅವರು ಚಿತ್ರಕ್ಕೆ ಬಣ್ಣ ಹಚ್ಚುತ್ತಿರುವ ಫೋಟೋ ಫುಲ್ ವೈರಲ್ ಆಗಿದೆ.

ವೀರ ಕಂಬಳ ಸಿನಿಮಾ: ಸುಮಾರು 7 ವರ್ಷಗಳ ಕಾಲ ಸಂಶೋಧನೆ ನಡೆಸಿ ನಿರ್ಮಿಸಲಾಗುತ್ತಿರುವ ವೀರ ಕಂಬಳ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದ್ದು, ಕಂಬಳವನ್ನೇ ಕೇಂದ್ರವನ್ನಾಗಿಟ್ಟುಕೊಂಡು ಸಿನಿಮಾ ತಯಾರಾಗುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು, ಹಿಂದಿ ಹಾಗೂ ತುಳು ಭಾಷೆಗಳಲ್ಲಿಯೂ ತೆರೆಗೆ ಬರಲಿದೆ. ತುಳು ಭಾಷೆಯಲ್ಲಿ 'ಬಿರ್ದ್‌ದ ಕಂಬಳ' ಹೆಸರಿನಲ್ಲಿ ಚಿತ್ರ ಮೂಡಿ ಬರಲಿದೆ.

ಇದನ್ನೂ ಓದಿ: ಸ್ಯಾಂಡಲ್​ವುಡ್ ಅಧ್ಯಕ್ಷನ 'ಛೂ ಮಂತರ್' ಮೋಷನ್ ಪೋಸ್ಟರ್ ರಿಲೀಸ್​​

ಚಿತ್ರತಂಡ: ವೀರ ಕಂಬಳ ಅರುಣ್ ರೈ ತೋಡಾರ್ ನಿರ್ಮಾಣದಲ್ಲಿ ಮೂಡಿಬರಲಿರುವ ಸಿನಿಮಾ. ಕಂಬಳದ ಕೋಣ ಓಡಿಸುವುದರಲ್ಲಿ ಪರಿಣಿತರಾಗಿರುವ, ಶ್ರೀನಿವಾಸ್ ಗೌಡ ಹಾಗೂ ರಂಗಭೂಮಿ ಕಲಾವಿದ ಸ್ವರಾಜ್ ಶೆಟ್ಟಿ ಕಂಬಳದ ದೃಶ್ಯಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ತುಳುನಾಡಿನ ಪ್ರಸಿದ್ಧ ರಂಗಭೂಮಿ ಕಲಾವಿದರ ಜೊತೆಗೆ ಪ್ರಕಾಶ್ ರಾಜ್, ಆರ್ಮುಗ ರವಿಶಂಕರ್ ಮುಖ್ಯ ಪಾತ್ರದಲ್ಲಿ‌ ನಟಿಸುತ್ತಿದ್ದಾರೆ.

ಇದನ್ನೂ ಓದಿ: ಮುಂದಿನ ದಿನಗಳಲ್ಲಿ 3 ಸಾವಿರ ಕೋಟಿ ರೂ. ಹೂಡಿಕೆಗೆ ಮುಂದಾದ ಹೊಂಬಾಳೆ ಫಿಲಂಸ್! ಮನರಂಜನಾ ಕ್ಷೇತ್ರದ ಇತಿಹಾಸ

Last Updated : Jan 3, 2023, 6:24 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.