ಬಲಗೈಯವರ ಪ್ರಾಬಲ್ಯವಿರುವ ಜಗತ್ತಿನಲ್ಲಿ ಪ್ರತಿ ಆಗಸ್ಟ್ 13 ರಂದು ಅಂತಾರಾಷ್ಟ್ರೀಯ ಎಡಗೈಯವರ ದಿನವನ್ನು ಆಚರಿಸಲಾಗುತ್ತದೆ. ಎಡಗೈ ಬಳಸುವವರ ಸುತ್ತ ಕಥೆ ಹೆಣೆದು ಕನ್ನಡದಲ್ಲಿ ಸಿನಿಮಾ ನಿರ್ಮಾಣವಾಗುತ್ತಿರುವುದು ನಿಮಗೆ ಗೊತ್ತೇ ಇದೆ. ಅದೇ 'ಎಡಗೈಯೇ ಅಪಘಾತಕ್ಕೆ ಕಾರಣ' ಶೀರ್ಷಿಕೆಯ ಸಿನಿಮಾ.
ಸಿನಿಮಾಗೆ ವೆಗಾ ಹೆಲ್ಮೆಟ್ ಕಂಪನಿ ಸಾಥ್: ಬಹು ಸಮಯದಿಂದ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ದೂದ್ ಪೇಡಾ ದಿಗಂತ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ಕಾನ್ಸೆಪ್ಟ್ 'ವೆಗಾ ಹೆಲ್ಮೆಟ್ ಕಂಪನಿ'ಯವರಿಗೆ ಇಷ್ಟವಾಗಿದೆ. ಹೀಗಾಗಿ 'ಎಡಗೈಯೇ ಅಪಘಾತಕ್ಕೆ ಕಾರಣ' ಸಿನಿಮಾಗೆ ವೆಗಾ ಹೆಲ್ಮೆಟ್ ಕಂಪನಿ ಸಾಥ್ ಕೊಟ್ಟಿದೆ.
ಎಡಗೈ ಬಳಸುವವರರಿಗೆ ಹೆಲ್ಮೆಟ್: ಸಿನಿಮಾಗೂ ಹೆಲ್ಮೆಟ್ ಕಂಪನಿಗೂ ಏನ್ ಸಂಬಂಧ? ಅಂತೀರಾ. ಇದೇ ಆಗಸ್ಟ್ 13 ರಂದು ಆಚರಿಸಲ್ಪಡುವ ಅಂತಾರಾಷ್ಟ್ರೀಯ ಎಡಗೈಯವರ ದಿನದಂದು ವೆಗಾ ಹೆಲ್ಮೆಟ್ ಕಂಪನಿ ಎಡಗೈ ಬಳಸುವವರರಿಗಾಗಿ ಹೊಸ ಹೆಲ್ಮೆಟ್ ಲಾಂಚ್ ಮಾಡುತ್ತಿದೆ. ಇದೇ ಅಲ್ವಾ ಒಂದು ಸಿನಿಮಾದ ಸೋಷಿಯಲ್ ಇಂಪ್ಯಾಕ್ಟ್ ಅಂದ್ರೆ?.
ಗಡಿ ದಾಟಿ ಪ್ರೇಕ್ಷಕರನ್ನು ಸೆಳೆಯುತ್ತಿರುವ ಕನ್ನಡ ಸಿನಿಮಾ: ಕನ್ನಡ ಸಿನಿಮಾಗಳ ಮಾರುಕಟ್ಟೆ ಈಗ ವಿಸ್ತರಿಸಿದೆ. ಗಡಿ ದಾಟಿ ಪ್ರೇಕ್ಷಕರನ್ನು ಆಕರ್ಷಿಸುತ್ತಿದೆ. ವಿಭಿನ್ನ ಬಗೆಯ ಕಥಾಹಂದರದ ಕನ್ನಡ ಚಿತ್ರಗಳು ಈಗ ವಿಶ್ವಮಟ್ಟದಲ್ಲಿ ಸದ್ದಾಗುತ್ತಿವೆ. ಅದರಂತೆ ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾದ ಐಡಿಯಾ, ಕಾನ್ಸೆಪ್ಟ್ ವೆಗಾ ಹೆಲ್ಮೆಟ್ ಕಂಪನಿಯರನ್ನು ತಲುಪಿದೆ ಅಂದ್ರೆ ಕೇವಲ ಚಿತ್ರತಂಡ ಮಾತ್ರವಲ್ಲ, ಇಡೀ ಕನ್ನಡ ಸಿನಿಮಾ ಇಂಡಸ್ಟ್ರಿಯೇ ಖುಷಿಪಡಬೇಕಾದ ವಿಚಾರ.
ಸಮರ್ಥ್ ಬಿ ಕಡಕೊಳ್ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಚಿತ್ರ. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಕಥಾಹಂದರ ಈ ಚಿತ್ರದಲ್ಲಿದೆ. ಹೆಸರೇ ಹೇಳುವಂತೆ ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಹೆಣೆದ ಚಿತ್ರವಿದು.
ಇದನ್ನೂ ಓದಿ: ಜಿಂದಾ ಬಂದಾ ಮೇಕಿಂಗ್ ವಿಡಿಯೋ: ಎಸ್ಆರ್ಕೆ ಅಪ್ಪಿಕೊಂಡ ಅಟ್ಲೀ - ಸೌತ್, ಬಾಲಿವುಡ್ ಕಾಂಬೋದಲ್ಲಿ 'ಜವಾನ್' ರೆಡಿ
ಚಿತ್ರದಲ್ಲಿ ದಿಗಂತ್ ಜೋಡಿಯಾಗಿ ನವನಟಿ ಧನು ಹರ್ಷ ನಟಿಸುತ್ತಿದ್ದು, ರಾಧಿಕಾ ನಾರಾಯಣ್, ನಿಧಿ ಸುಬ್ಬಯ್ಯ ಕೂಡ ಚಿತ್ರದ ಮುಖ್ಯ ಭೂಮಿಕೆಯಲ್ಲಿದ್ದಾರೆ. ಹೈಫನ್ ಪಿಕ್ಚರ್ಸ್ ಬ್ಯಾನರ್ ಅಡಿ ಗುರುದತ್ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ.ಕಡಕೊಳ್ ಚಿತ್ರವನ್ನು ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಚಿತ್ರದ ತಾರಾಗಣದಲ್ಲಿದ್ದಾರೆ. ಅಭಿಮನ್ಯು ಸದಾನಂದ್ ಕ್ಯಾಮರಾ ವರ್ಕ್, ರಾಹುಲ್ ವಿ.ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಅವರ ಸಂಭಾಷಣೆ ಸಿನಿಮಾಗಿದೆ.
ಇದನ್ನೂ ಓದಿ: Adipurush: ನೀವಿದ್ದಲ್ಲೇ ನೋಡಿ 'ಆದಿಪುರುಷ್' ಸಿನಿಮಾ: ಈ OTT ವೇದಿಕೆಗಳಲ್ಲಿ ಲಭ್ಯ!