ಹೈದರಾಬಾದ್ (ತೆಲಂಗಾಣ): ನಟ ವಿಜಯ್ ದೇವರಕೊಂಡ ಅವರ ಮುಂಬರುವ ಚಿತ್ರ ಲೈಗರ್ನ ಹೊಸ ಪೋಸ್ಟರ್ ಭಾರೀ ಸದ್ದು ಮಾಡುತ್ತಿದೆ. ಸಿನಿಮಾ ತಯಾರಕರು ಚಿತ್ರದ ಶನಿವಾರ ಪೋಸ್ಟರ್ ಬಿಡುಗಡೆ ಮಾಡಿದ್ದು, ಇದರಲ್ಲಿ ವಿಜಯ್ ದೇವರಕೊಂಡ ನಗ್ನವಾಗಿ ಕಾಣಿಸಿಕೊಂಡಿದ್ದಾರೆ.
ನಟ ವಿಜಯ್ ಕಟುಮಸ್ತಾದ ದೇಹದಲ್ಲಿ ನಗ್ನವಾಗಿದ್ದು, ಮರೆಮಾಡಲು ಹೂವಿನ ಗೊಂಚಲು ಹಿಡಿದಿದ್ದಾರೆ. 'ಇದು ಹತ್ತು ಪಟ್ಟು ಬಿಸಿಯಾಗಿಸುತ್ತದೆ. ಆಗಸ್ಟ್ 25 ರಂದು ತೆರೆಗೆ ಬರಲಿದೆ' ಎಂದು ಬರೆದಿರುವ ಪೋಸ್ಟ್ ಅನ್ನು ಧರ್ಮ ಪ್ರೊಡಕ್ಷನ್ಸ್ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದೆ.
- " class="align-text-top noRightClick twitterSection" data="
">
ಕೋವಿಡ್ ಸಾಂಕ್ರಾಮಿಕದಿಂದಾಗಿ ಸಿನಿಮಾ ಚಿತ್ರೀಕರಣ ವಿಳಂಬವಾಗಿತ್ತು. ಕಳೆದ ವರ್ಷ ಸೆಪ್ಟೆಂಬರ್ 9 ರಂದು ವಿಶ್ವಾದ್ಯಂತ ಬಿಡುಗಡೆ ಮಾಡಲು ಯೋಜಿಸಲಾಗಿತ್ತು.
ಪೂರಿ ಜಗನ್ನಾಥ್ ನಿರ್ದೇಶನದ ಈ ಚಿತ್ರದಲ್ಲಿ ರಮ್ಯಾ ಕೃಷ್ಣನ್, ರೋನಿತ್ ರಾಯ್, ವಿಶು ರೆಡ್ಡಿ ಮುಂತಾದವರು ನಟಿಸಲಿದ್ದಾರೆ. ಇದನ್ನು ಪುರಿ ಕನೆಕ್ಟ್ಸ್ ಸಂಸ್ಥೆ ಜೊತೆಗೆ ಚಾರ್ಮಿ ಕೌರ್ ಸಹ ನಿರ್ಮಾಪಕರಾಗಿದ್ದಾರೆ. ಸಿನಿಮಾ ಹಿಂದಿ, ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂನಲ್ಲಿ ವಿಶ್ವದಾದ್ಯಂತ ತೆರೆ ಕಾಣಲಿದೆ.
ಓದಿ: ಗಣಪತ್ ಸಿನಿಮಾ ಚಿತ್ರೀಕರಣದಲ್ಲಿ ಟೈಗರ್ ಶ್ರಾಫ್ಗೆ ಗಾಯ.. ವಿಡಿಯೋ ಹರಿಬಿಟ್ಟ ನಟ