ETV Bharat / entertainment

ರೆಡ್ ಕಾರ್ಪೆಟ್‍ ಗಾಲಾ ಪ್ರೀಮಿಯರ್​ನಲ್ಲಿ ವಿಜಯ ರಾಘವೇಂದ್ರ ಗ್ರೇ ಗೇಮ್ಸ್ ಪ್ರದರ್ಶನ - ಈಟಿವಿ ಭಾರತ ಕನ್ನಡ

ವಿಜಯ್​ ರಾಘವೇಂದ್ರ ಅಭಿನಯದ ಗ್ರೇ ಗೇಮ್ಸ್ ಚಿತ್ರ ರೆಡ್ ಕಾರ್ಪೆಟ್‍ ಗಾಲಾ ಪ್ರೀಮಿಯರ್ ವಿಭಾಗದಲ್ಲಿ ಪ್ರದರ್ಶನವಾಗಿದೆ.

ವಿಜಯರಾಘವೇಂದ್ರ ಗ್ರೇ ಗೇಮ್ಸ್ ಪ್ರದರ್ಶನ
ವಿಜಯರಾಘವೇಂದ್ರ ಗ್ರೇ ಗೇಮ್ಸ್ ಪ್ರದರ್ಶನ
author img

By ETV Bharat Karnataka Team

Published : Nov 30, 2023, 10:55 PM IST

ಗ್ರೇ ಗೇಮ್ಸ್ ಸ್ಯಾಂಡಲ್ ವುಡ್​ನಲ್ಲಿ ಟೈಟಲ್ ನಿಂದಲೇ ಗಮನ ಸೆಳೆಯುತ್ತಿರೋ ಚಿತ್ರ. ವಿಜಯ್‍ ರಾಘವೇಂದ್ರ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಗ್ರೇ ಗೇಮ್ಸ್ ಚಿತ್ರ ಶೂಟಿಂಗ್ ಮುಗಿಸಿ ಬಿಡುಗಡೆಗೆ ಸಜ್ಜಾಗಿದೆ. ಈ ಮಧ್ಯೆ ಇತ್ತೀಚೆಗಷ್ಟೇ ಮುಕ್ತಾಯವಾದ 54ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (IFFI) ರೆಡ್ ಕಾರ್ಪೆಟ್‍ ಗಾಲಾ ಪ್ರೀಮಿಯರ್ ವಿಭಾಗದಲ್ಲಿ ಗ್ರೇ ಗೇಮ್ಸ್ ಚಿತ್ರ ಪ್ರದರ್ಶನವಾಗಿದೆ. ರಾಜ್ಯ ಪ್ರಶಸ್ತಿ ವಿಜೇತ ನಿರ್ದೇಶಕ ಗಂಗಾಧರ್ ಸಾಲಿಮಠ್‍ ನಿರ್ದೇಶನದ ಈ ಚಿತ್ರಕ್ಕೆ ನೆರೆದಿದ್ದ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುವುದರ ಜೊತೆಗೆ ಒಳ್ಳೆಯ ವಿಮರ್ಶೆಗಳು ಸಿಕ್ಕಿವೆ.

ಮೆಟಾವರ್ಸ್ ಮತ್ತು ಆನ್‍ಲೈನ್‍ ಗೇಮಿಂಗ್‍ ವೈಷಮ್ಯದ ಹಿನ್ನೆಲೆಯಲ್ಲಿ ನಿರ್ಮಾಣವಾಗಿರುವ ‘ಗ್ರೇ ಗೇಮ್ಸ್’ ಚಿತ್ರದಲ್ಲಿ ವಿಜಯ್‍ ರಾಘವೇಂದ್ರ ಸೈಕಾಲಜಿಸ್ಟ್ ಪಾತ್ರದಲ್ಲಿ ಕಾಣಿಸಿಕೊಂಡರೆ, ಭಾವನಾ ರಾವ್ ಪೊಲೀಸ್‍ ಅಧಿಕಾರಿಯಾಗಿ ನಟಿಸಿದ್ದಾರೆ. ಶ್ರುತಿ ಪ್ರಕಾಶ್‍ ಈ ಚಿತ್ರದಲ್ಲಿ ಒಬ್ಬ ನಟಿಯಾಗಿ ಅಭಿನಯಿಸಿದ್ದು, ಈ ಚಿತ್ರದ ಮೂಲಕ ವಿಜಯ್‍ ರಾಘವೇಂದ್ರ ಅವರ ಅಕ್ಕನ ಮಗ ಜೈ, ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುವುದರ ಜೊತೆಗೆ, ಇಲ್ಲಿ ಒಬ್ಬ ಗೇಮರ್ ಆಗಿ ಕಾಣಿಸಿಕೊಂಡಿದ್ದಾರೆ.

ಗೋವಾ ಚಿತ್ರೋತ್ಸವದಲ್ಲಿ ಚಿತ್ರ ಪ್ರದರ್ಶನವಾಗಿದ್ದರ ಕುರಿತು ಸಂತೋಷ ವ್ಯಕ್ತಪಡಿಸಿರುವ ನಿರ್ದೇಶಕ ಗಂಗಾಧರ್ ಸಾಲಿಮಠ್‍, ‘ಚಿತ್ರೋತ್ಸವದಲ್ಲಿ ನಮ್ಮ ಚಿತ್ರಕ್ಕೆ ಸಿಕ್ಕ ಪ್ರೋತ್ಸಾಹ ಮತ್ತು ವಿಮರ್ಶೆಗಳಿಂದ ನಿಜಕ್ಕೂ ಹೃದಯ ತುಂಬಿ ಬಂದಿದೆ. ಇಂಥಹದ್ದೊಂದು ಪ್ರತಿಷ್ಠಿತ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ನಮ್ಮ ಚಿತ್ರವನ್ನು ಪ್ರದರ್ಶಿಸುವುದಕ್ಕೆ ಅವಕಾಶ ಸಿಕ್ಕಿದ್ದು, ಅತ್ಯಂತ ಗೌರವದ ವಿಷಯ. ಇದೊಂದು ಫ್ಯಾಮಿಲಿ ಸಸ್ಪೆನ್ಸ್ ಡ್ರಾಮಾ ಚಿತ್ರವಾಗಿದ್ದು, ವರ್ಚುಯಲ್​​ ಮತ್ತು ನೈಜತೆ ನಡುವೆ ಯಾವುದು ಸರಿ, ಯಾವುದು ತಪ್ಪು ಎಂಬ ನಮ್ಮ ದೃಷ್ಟಿಕೋನದ ಕುರಿತು ಸವಾಲು ಎಸೆಯುವಂತಿದೆ’ ಎನ್ನುತ್ತಾರೆ.

ನಿರ್ಮಾಪಕ ಆನಂದ್‍ ಎಚ್‍. ಮುಗುದ್‍ ಮಾತನಾಡಿ, ನಮ್ಮ ಚಿತ್ರವನ್ನು ನೋಡಿ ಅತ್ಯುತ್ತಮ ವಿಮರ್ಶೆಗಳನ್ನು ನೀಡಿದ ಪ್ರೇಕ್ಷಕರಿಗೆ ಧನ್ಯವಾದಗಳು. ಇದು ನಮ್ಮ ತಂಡದ ಶ್ರದ್ಧೆ ಮತ್ತು ಒಳ್ಳೆಯ ಚಿತ್ರ ನೀಡಬೇಕು ಎನ್ನುವ ಬದ್ಧತೆಗೆ ಸಿಕ್ಕ ಗೌರವ ಎಂದು ಹೇಳುತ್ತಾರೆ. ಗ್ರೇ ಗೇಮ್ಸ್ ಚಿತ್ರಕ್ಕೆ ಸರೀಶ್‍ ಗ್ರಾಮ ಪುರೋಹಿತ್‍, ಅರವಿಂದ್‍ ಜೋಷಿ ಮತ್ತು ಡೋಲೇಶ್ವರ್ ರಾಜ್‍ ಸುಂಕು ಸಹ ನಿರ್ಮಾಪಕರಾಗಿದ್ದು, ಚಿತ್ರವು ಫೆಬ್ರವರಿ 2024ಕ್ಕೆ ಬಿಡುಗಡೆ ಆಗಲಿದೆ. ವಿಭಿನ್ನ ಕಥಾಹಂದರ ಹೊಂದಿರುವ "ಗ್ರೇ ಗೇಮ್ಸ್" ಸಿನಿಮಾ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ

ಇದನ್ನೂ ಓದಿ: ನಾಳೆ ಸಲಾರ್​ ಟ್ರೇಲರ್ ರಿಲೀಸ್: ಪ್ರಶಾಂತ್ ನೀಲ್, ಪ್ರಭಾಸ್​ ಫೋಟೋಗೆ ಕ್ಯಾಪ್ಷನ್​ ಕೊಟ್ಟು ಫ್ರೀ ಟಿಕೆಟ್ ಪಡೆಯಿರಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.