ETV Bharat / entertainment

ತ್ರಿಕೋನ ಪ್ರೇಮಕಥೆಯ ಓ ಮನಸೇ ಚಿತ್ರದಲ್ಲಿ ವಿಜಯ ರಾಘವೇಂದ್ರ - ಧರ್ಮ ಕೀರ್ತಿ ಆ್ಯಕ್ಟಿಂಗ್​

ಓ ಮನಸೇ ಸಿನಿಮಾ ಶಿಕ್ಷಣಕ್ಕೆ ಸಂಬಂಧಿಸಿದ ಕಥೆಯಾಗಿದೆ. ಈ ಸಿನಿಮಾದಲ್ಲಿ ನನ್ನ ಪಾತ್ರ ವಿಭಿನ್ನವಾಗಿದೆ ಎಂದು ನಟ ವಿಜಯರಾಘವೇಂದ್ರ ಅವರು ಹೇಳಿದ್ದಾರೆ.

ಓ ಮನಸೇ ಚಿತ್ರತಂಡ
ಓ ಮನಸೇ ಚಿತ್ರತಂಡ
author img

By

Published : Jul 11, 2023, 4:23 PM IST

ಚಂದನವನದಲ್ಲಿ ಟ್ರೈಲರ್​ನಿಂದಲೇ ಸದ್ದು ಮಾಡುತ್ತಿರುವ ಚಿತ್ರ ಓ ಮನಸೇ. ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್, ಸಂಚಿತಾ ಪಡುಕೋಣೆ ಪ್ರಮುಖ ಪಾತ್ರದಲ್ಲಿ ನಟಿಸಿರುವ ಓ ಮನಸೇ ಚಿತ್ರ ಶೂಟಿಂಗ್ ಮುಗಿಸಿ ಬಿಡುಗಡೆಗೆ ಸಜ್ಜಾಗಿದೆ. ಈ ಬಗ್ಗೆ ಚಿತ್ರತಂಡ ಈ ಚಿತ್ರದ ಕೆಲವೊಂದು ವಿಷಯಗಳನ್ನ ಹಂಚಿಕೊಂಡಿದೆ.

ನಟ ವಿಜಯರಾಘವೇಂದ್ರ ಮಾತನಾಡಿ, ಈ ಸಿನಿಮಾ ಶಿಕ್ಷಣಕ್ಕೆ ಸಂಬಂಧಿಸಿದ ಕಥೆ ಹೊಂದಿದೆ. ಈ‌ ಚಿತ್ರದಲ್ಲಿ ನನ್ನ ಪಾತ್ರ ವಿಭಿನ್ನವಾಗಿದೆ.‌ ನನ್ನ ಜೊತೆ ಧರ್ಮಕೀರ್ತೀರಾಜ್, ಸಂಚಿತಾ ಪಡುಕೋಣೆ ಸ್ಕ್ರೀನ್ ಹಂಚಿಕೊಂಡಿದ್ದಾರೆ‌ ಎಂದರು.

ನಾನು ವಿಜಯ್ ರಾಘವೇಂದ್ರ ಅವರ ಜೊತೆ ಅಭಿನಯಿಸುತ್ತಿರುವ ಮೊದಲ ಸಿನಿಮಾವಿದು ಎಂದಿರುವ ನಟ ಧರ್ಮ ಕೀರ್ತಿರಾಜ್, ಈ ಚಿತ್ರದ ನಿರ್ಮಾಪಕರು ಯಾವುದೇ ಕೊರತೆಯಿಲ್ಲದೇ ಅದ್ದೂರಿಯಾಗಿ ಚಿತ್ರ ನಿರ್ಮಾಣ ಮಾಡಿದ್ದಾರೆ. ನಾವು ದುಡುಕಿ ತೆಗೆದುಕೊಳ್ಳುವ ನಿರ್ಧಾರಗಳಿಂದ ಏನೆಲ್ಲಾ ಅನುಭವಿಸಬೇಕಾಗುತ್ತದೆ ಎಂಬುದು ಈ ಚಿತ್ರದ ಒಂದೆಳೆ ಕಥೆಯಾಗಿದೆ ಎಂದರು.

ಇದನ್ನೂ ಓದಿ: ರಾಘವೇಂದ್ರ ರಾಜ್​ಕುಮಾರ್​ ನಟನೆಯ '13' ಸಿನಿಮಾದ ಸಿಂಗಲ್​ ಸೇವಂತಿ ಐಟಂ ಸಾಂಗ್​ ರಿಲೀಸ್​

ಸಂಭಾಷಣೆ ಬರೆದಿರುವ ಸಾಯಿಕೃಷ್ಣ ಕಥೆ ಹೇಳಿದರು. ಕಥೆ ಕೇಳಿದ ಮೇಲೆ ಈ ಪಾತ್ರಕ್ಕೆ ವಿಜಯ ರಾಘವೇಂದ್ರ ಸೂಕ್ತ ಎನಿಸಿತು. ಶಿಕ್ಷಣಕ್ಕೆ ಸಂಬಂಧ ಪಟ್ಟ ಕಥೆ ನಾನು ಈ ಚಿತ್ರದ ನಿರ್ದೇಶನಕ್ಕೆ ಒಪ್ಪಿಕೊಳ್ಳಬೇಕಾಯಿತು ಎಂದು ನಿರ್ದೇಶಕ ಉಮೇಶ್ ಗೌಡ ಹೇಳಿದ್ದಾರೆ. ಇದು ಶಿಕ್ಷಣಕ್ಕೆ ಮಹತ್ವ ಕೊಡುವ ಕಥಾಹಂದರ ಹೊಂದಿದೆ. ಲವ್, ಸಸ್ಪೆನ್ಸ್ ಕೂಡ ಇದೆ‌. ನಾನು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಈ ಚಿತ್ರ ಚೆನ್ನಾಗಿ ಬಂದಿದೆ. ಪ್ರೇಕ್ಷಕರಿಗೆ ಇಷ್ಟ ಆಗುತ್ತೆ ಎಂದರು ನಿರ್ದೇಶಕರು.

ನಾವು ಐದು ಜನ ಸ್ನೇಹಿತರು ಸೇರಿ ಈ ಚಿತ್ರ ನಿರ್ಮಾಣ ಮಾಡಿದ್ದೇವೆ. ನಿರ್ದೇಶಕ ಉಮೇಶ್ ಗೌಡ ಅವರು ಒಳ್ಳೆಯ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ನಟಿಸಿರುವ ಕಲಾವಿದರ ಅಭಿನಯ ಹಾಗೂ ತಂತ್ರಜ್ಞರ ಕಾರ್ಯವೈಖರಿ ಚೆನ್ನಾಗಿದೆ. ಚಿತ್ರ ಪ್ರೇಕ್ಷಕರ ಮನ ಗೆಲ್ಲುವ ಭರವಸೆ ಇದೆ ಎಂದು ನಿರ್ಮಾಪಕರಲ್ಲೊಬ್ಬರಾದ ಯುವರಾಜ್ ತಿಳಿಸಿದರು.

ಇದನ್ನೂ ಓದಿ: ಹಿರಿಯ ನಟಿ ಡಾ.ಲೀಲಾವತಿ ನಿವಾಸಕ್ಕೆ ಉಮಾಶ್ರೀ, ಪದ್ಮಾವಾಸಂತಿ ಭೇಟಿ: ಆರೋಗ್ಯ ವಿಚಾರಣೆ

ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್, ಸಂಚಿತಾ ಪಡುಕೋಣೆ ಅಲ್ಲದೇ ಹರೀಶ್ ರಾಯ್, ಸಾಧುಕೋಕಿಲ, ಶೋಭ್ ರಾಜ್, ಕಿಲ್ಲರ್ ವೆಂಕಟೇಶ್, ವಾಣಿಶ್ರೀ, ಜಯರಾಮ್, ರುಶಿಕಾ(ಟಗರು ಸರೋಜ) ಮುಂತಾದವರು ಈ ಚಿತ್ರದ ತಾರಾ ಬಳಗದಲ್ಲಿದ್ದಾರೆ. ಚಿತ್ರದ ಮಾರ್ಗದರ್ಶಕರಾದ ಹಿರಿಯ ನಿರ್ಮಾಪಕ ಅಣಜಿ ನಾಗರಾಜ್, ಸಾಯಿಕೃಷ್ಣ ಈ ಸಿನಿಮಾಗೆ ಸಂಭಾಷಣೆ ಬರೆದಿದ್ದಾರೆ. ‌ರಮೇಶ್ ಅದರಂಗಿ ಕಥೆ ಬರೆದಿರುವ ಈ ಚಿತ್ರಕ್ಕೆ ಎಂ. ಆರ್ ಸೀನು ಛಾಯಾಗ್ರಹಣ, ಶ್ರೀನಿವಾಸ್ ಪಿ‌ ಬಾಬು ಸಂಕಲನ ಹಾಗೂ ಥ್ರಿಲ್ಲರ್ ಮಂಜು, ಡಿಫರೆಂಟ್ ಡ್ಯಾನಿ, ಬಂಡೆ ಚಂದ್ರು ಅವರ ಸಾಹಸ‌ ನಿರ್ದೇಶನವಿದೆ. ಇದೇ ಜುಲೈ 14 ರಂದು ರಾಜ್ಯಾದ್ಯಂತ ಓ ಮನಸೇ ಸಿನಿಮಾ ‌ಬಿಡುಗಡೆಯಾಗುತ್ತಿದೆ.

ಇದನ್ನೂ ಓದಿ: ಆಡು ಸ್ವಾಮಿಯ ಮಹಿಮೆ ಸಾರುವ 'ಆಡೇ ನಮ್​ God' ಅಂತಿದ್ದಾರೆ ಹಿರಿಯ ನಿರ್ದೇಶಕ ಪಿ.ಎಚ್ ವಿಶ್ವನಾಥ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.