ETV Bharat / entertainment

ಕನಸುಗಾರ ರವಿಚಂದ್ರನ್ ಸುಪುತ್ರನ ಸಿನಿಮಾ ಶೀರ್ಷಿಕೆ ಅನಾವರಣ: ಕ್ಯಾಚಿ ಟೈಟಲ್​ನೊಂದಿಗೆ ಬಂದ ವಿಕ್ರಮ್ - ravichandran

ನಟ ವಿಕ್ರಮ್ ರವಿಚಂದ್ರನ್ ಅವರ ಮುಂದಿನ ಸಿನಿಮಾ ಟೈಟಲ್​ ಅನಾವರಣಗೊಂಡಿದೆ.

vikram ravichandran
ವಿಕ್ರಮ್ ರವಿಚಂದ್ರನ್ ಮುಧೋಳ್ ಸಿನಿಮಾ
author img

By

Published : Apr 26, 2023, 6:13 PM IST

Updated : Apr 26, 2023, 10:33 PM IST

ಕನ್ನಡ ಚಿತ್ರರಂಗದ ಕನಸುಗಾರ ರವಿಚಂದ್ರನ್ ದ್ವಿತೀಯ ಪುತ್ರ ವಿಕ್ರಮ್ ರವಿಚಂದ್ರನ್ ಅವರ ಮುಂದಿನ ಸಿನಿಮಾ ಕುರಿತು ಹಲವು ಪ್ರಶ್ನೆಗಳು ಅಭಿಮಾನಿಗಳಲ್ಲಿದ್ದವು. 'ತ್ರಿವಿಕ್ರಮ' ಸಿನಿಮಾ ಆದ ಬಳಿಕ ವಿಕ್ರಮ್ ರವಿಚಂದ್ರನ್ ಏನು ಮಾಡುತ್ತಿದ್ದಾರೆ ಅನ್ನೋ ಪ್ರಶ್ನೆ ಅವರ ಅಭಿಮಾನಿಗಳು ಹಾಗೂ ಗಾಂಧಿನಗರದಲ್ಲಿ ಎದ್ದಿದೆ. ಇದೀಗ ಆ ಪ್ರಶ್ನೆಗೆ ಮರಿ ರಣಧೀರ ಉತ್ತರ ಕೊಟ್ಟಿದ್ದಾರೆ.

ನಟ ವಿಕ್ರಮ್ ಅವರ ಎರಡನೇ ಸಿನಿಮಾ ಅನೌನ್ಸ್​ ಆಗಿದೆ. 'ಮಧೋಳ್' ಎಂಬ ಕ್ಯಾಚಿ ಟೈಟಲ್​ ಮೂಲಕ ಗಮನ ಸೆಳೆಯುತ್ತಿದ್ದಾರೆ. ಬೆಂಗಳೂರಿನ ನವರಂಗ ಚಿತ್ರಮಂದಿರದಲ್ಲಿ ಅಭಿಮಾನಿಗಳ ನಡುವೆ ವಿಕ್ರಮ್ ಮತ್ತು ಚಿತ್ರತಂಡ​​ ತಮ್ಮ ಹೊಸ ಚಿತ್ರದ ಶೀರ್ಷಿಕೆ ಬಿಡುಗಡೆಗೊಳಿಸಿದರು.

ಟೈಟಲ್ ಟೀಸರ್ ಮೂಲಕ ಎಂಟ್ರಿ ಕೊಟ್ಟ ವಿಕ್ರಮ್ ರವಿಚಂದ್ರನ್ ಕಂಪ್ಲೀಟ್ ಗ್ಯಾಂಗ್​ಸ್ಟರ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಪುತ್ರನ ಚಿತ್ರಕ್ಕೆ 'ಮುಧೋಳ್' ಎಂಬ ಟೈಟಲ್ ಕೊಟ್ಟಿದ್ದೇ ಕ್ರೇಜಿಸ್ಟಾರ್ ರವಿಚಂದ್ರನ್. ತ್ರಿವಿಕ್ರಮ ಸಿನಿಮಾ ಮೂಲಕ ಸ್ಯಾಂಡಲ್​​ವುಡ್​​ಗೆ ಎಂಟ್ರಿ ಕೊಟ್ಟಿರುವ ವಿಕ್ರಮ್​​ ಈ ಬಾರಿ ಗ್ಯಾಂಗ್​​ಸ್ಟರ್ ಸಬ್ಜೆಕ್ಟ್ ಮೂಲಕ ಸಿನಿರಸಿಕರನ್ನು ರಂಜಿಸಲು ರೆಡಿಯಾಗಿದ್ದಾರೆ.

ತಮ್ಮ ಚಿತ್ರದ ಬಗ್ಗೆ ಮಾತು ಶುರು ಮಾಡಿದ ವಿಕ್ರಮ್ ರವಿಚಂದ್ರನ್, ತ್ರಿವಿಕ್ರಮ ರಿಲೀಸ್ ಆಗಿದ್ದು 2022ರ ಜೂನ್ 24. ಏಪ್ರಿಲ್ 26 ಅಂದ್ರೆ ಇಂದು ನನ್ನ ಎರಡನೇ ಸಿನಿಮಾದ ಟೈಟಲ್ ಲಾಂಚ್ ಮಾಡುತ್ತಿದ್ದೇವೆ. ಬಹಳ ಮಂದಿ ವಿಕೆಆರ್ ಅಂದ್ರೇನು ಅಂತಾ ಕೇಳುತ್ತಿದ್ರು. ವಿಕೆಆರ್ ವಿಕ್ರಮ್ ರವಿಚಂದ್ರನ್ ಅನ್ನೋದು ಕೆಲವರಿಗೆ ಗೊತ್ತಿದೆ. ಸಿನಿ ರಂಗದಲ್ಲಿ ವಿಕೆಆರ್​ಕೆ ಬ್ರ್ಯಾಂಡ್, ವಿಕೆಆರ್​ಕೆ ಅನ್ನು ಜನಪ್ರಿಯಗೊಳಿಸಬೇಕು ಅನ್ನೋ ಮನಸ್ಸಿದೆ. ವಿಕೆಆರ್ = ವಿಕ್ರಮ್ ರವಿಚಂದ್ರನ್, ಕೆ = ಕನ್ನಡ. ಪ್ರಯತ್ನ ಅನ್ನೋದು ನಿರಂತರ. ಪ್ರಯತ್ನ ಮಾಡಿ ಜೀವನವನ್ನೇ ಗೆಲ್ಲಬಹುದು. ಆ ರೀತಿ ಒಂದು ತಂಡ ನಿಮ್ಮ ಮುಂದೆ ಇದೆ ಎಂದರು.

  • " class="align-text-top noRightClick twitterSection" data="">

ನಿರ್ದೇಶಕ ಕಾರ್ತಿಕ್ ರಾಜನ್ ಮಾತನಾಡಿ, ಮುಧೋಳ್​ಗಾಗಿ ಬಹಳ ಕಡೆ ಹುಡುಕಾಡಿದೆವು. ನಮ್ಮ ಮ್ಯಾನೇಜರ್ ಹತ್ತಿರ ಹೇಳಿದೆ. ಶ್ವಾನ ಸಿಕ್ಕಿದೆ. ತ್ಯಾಗರಾಜ್ ಎಂಬುವರು ಆ ಶ್ವಾನವನ್ನು ಟ್ರೈನ್ ಮಾಡಿದ್ದಾರೆ. ಟೈಟಲ್ ಟೀಸರ್​ನಲ್ಲಿ ಶ್ವಾನ ಚಾಕು ಕಚ್ಚಿಕೊಂಡು ಬರುವ ದೃಶ್ಯಕ್ಕಾಗಿ 23 ಟೇಕ್ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.

ಸಂಭಾಷಣೆಗಾರ ಮಾಸ್ತಿ ಮಾತನಾಡಿ, ಈಶ್ವರಿ ಕಂಬೈನ್ಸ್ ಅನ್ನೋದು ಪರಂಪರೆ. ನಟಿಯರು ರವಿಚಂದ್ರನ್ ಸರ್ ಜೊತೆ ಕೆಲಸ ಮಾಡಬೇಕು ಎಂದುಕೊಳ್ತಿದ್ರು. ಅದೇ ರೀತಿ ರೈಟರ್ಸ್ ಆ ಸಂಸ್ಥೆ ಜೊತೆ ಕೆಲಸ ಮಾಡಬೇಕು ಎಂದುಕೊಳ್ತಿದ್ರು. ಇದೀಗ ವಿಕ್ರಮ್ ಸರ್ ಜೊತೆ ಕೆಲಸ ಮಾಡುತ್ತಿರುವುದು ಖುಷಿ ಕೊಟ್ಟಿದೆ ಎಂದರು.

ಇದನ್ನೂ ಓದಿ: ಸೀರೆಗಿಲ್ಲ ಸಾಟಿ: ಸಾಮಾಜಿಕ ಜಾಲತಾಣದಲ್ಲಿ 'ಚಂದನ'ದ ಗೊಂಬೆ ನಿವೇದಿತಾ ಗೌಡ ಅಂದ ಚೆಂದ ಪ್ರದರ್ಶನ

ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ನಿರ್ದೇಶಕನಾಗಿ, ಸಿನಿಮಾ ಬರಹಗಾರನಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ರಾಜನ್ 'ಮುಧೋಳ್' ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇದು ಇವರ ಚೊಚ್ಚಲ ಹೆಜ್ಜೆ. ಎಸ್. ತಮನ್ ಜೊತೆ ಕೆಲಸ ಮಾಡಿ ಅನುಭವ ಇರುವ ಯುವರಾಜ್ ಚಂದ್ರನ್ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದು, ಟಗರು, ಸಲಗ ಸಿನಿಮಾ ಖ್ಯಾತಿಯ ಮಾಸ್ತಿ ಸಂಭಾಷಣೆ, ಸಂದೀಪ್ ವಲ್ಲೂರಿ ಛಾಯಾಗ್ರಹಣ, ಡಾ. ಕೆ. ರವಿವರ್ಮಾ ಆ್ಯಕ್ಷನ್ ಚಿತ್ರಕ್ಕಿದೆ. ತಂಡವ್ ಸ್ಟುಡಿಯೋಸ್ ಬ್ಯಾನರ್ ಅಡಿ ರಕ್ಷಾ ವಿಜಯಕುಮಾರ್ ಹಾಗೂ ಸಿಲ್ಜು ಕಣ್ಣನ್ ನಿರ್ಮಾಣ ಮಾಡ್ತಿರುವ ಮಧೋಳ್ ಚಿತ್ರದಲ್ಲಿ ಲವ್ ಮಾಕ್ಟೇಲ್ ಖ್ಯಾತಿಯ ಅಭಿಲಾಶ್, ರಘು ಮ್ಯೂಟಂಟ್ ಸೇರಿದಂತೆ ಹಲವರು ನಟಿಸುತ್ತಿದ್ದಾರೆ. ಈಗಾಗ್ಲೇ 30 ದಿನ ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಚಿತ್ರತಂಡ ಮತ್ತಷ್ಟು ಕಲಾವಿದರ ಬಗ್ಗೆ ಸದ್ಯದಲ್ಲೇ ಮಾಹಿತಿ ನೀಡಲಿದೆ.

ಇದನ್ನೂ ಓದಿ: ರೆಸ್ಟೋರೆಂಟ್​ ಪ್ರವೇಶಿಸಲು ಉರ್ಫಿ ಜಾವೇದ್​ಗೆ ನಿರಾಕರಣೆ: ಪಬ್ಲಿಸಿಟಿ ಗಿಮಿಕ್​ ಎಂದ ನೆಟ್ಟಿಗರು!

Last Updated : Apr 26, 2023, 10:33 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.