ಇಡೀ ಭಾರತೀಯ ಚಿತ್ರರಂಗ ಕಾತುರದಿಂದ ಎದುರು ನೋಡುತ್ತಿರುವ ಬಹುನಿರೀಕ್ಷಿತ ಚಿತ್ರವೇ 'ಸಲಾರ್'. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಈ ಸಿನಿಮಾವನ್ನು 'ಕೆಜಿಎಫ್' ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶಿಸುತ್ತಿದ್ದಾರೆ. ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಚಿತ್ರದ ಮೇಲೆ ಮುಗಿಲೆತ್ತರದ ನಿರೀಕ್ಷೆಯಿದೆ. ಇದೀಗ ಸಿನಿಮಾಗೆ ಬಾಕ್ಸ್ ಆಫೀಸ್ನಲ್ಲಿ ಪೈಪೋಟಿ ನೀಡಲು ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ 'ದಿ ವ್ಯಾಕ್ಸಿನ್ ವಾರ್' ಸಜ್ಜಾಗಿದೆ.
ರಿಲೀಸ್ ಯಾವಾಗ?: 'ಕೆಜಿಎಫ್' ಮೂಲಕ ಇಡೀ ದೇಶವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ್ದ ಪ್ರಶಾಂತ್ ನೀಲ್, ಈ ಬಾರಿ 'ಸಲಾರ್' ಮೂಲಕ ಮತ್ತೊಂದು ಹೊಸ ಪ್ರಪಂಚವನ್ನೇ ಸೃಷ್ಟಿಸಲಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಈವರೆಗೂ ಕಂಡುಕೇಳರಿಯದಷ್ಟರ ಮಟ್ಟಿಗೆ ಚಿತ್ರ ನಿರ್ಮಾಣವಾಗಿದೆ. ಸೆಪ್ಟಂಬರ್ 28ರಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ ಗ್ಲಿಂಪ್ಸ್ ಮತ್ತು ಪೋಸ್ಟರ್ಗಳು ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ.
-
DATE ANNOUNCEMENT:
— Vivek Ranjan Agnihotri (@vivekagnihotri) August 15, 2023 " class="align-text-top noRightClick twitterSection" data="
Dear friends, your film #TheVaccineWar #ATrueStory will release worldwide on the auspicious day of 28th September 2023.
Please bless us. pic.twitter.com/qThKxTjPiw
">DATE ANNOUNCEMENT:
— Vivek Ranjan Agnihotri (@vivekagnihotri) August 15, 2023
Dear friends, your film #TheVaccineWar #ATrueStory will release worldwide on the auspicious day of 28th September 2023.
Please bless us. pic.twitter.com/qThKxTjPiwDATE ANNOUNCEMENT:
— Vivek Ranjan Agnihotri (@vivekagnihotri) August 15, 2023
Dear friends, your film #TheVaccineWar #ATrueStory will release worldwide on the auspicious day of 28th September 2023.
Please bless us. pic.twitter.com/qThKxTjPiw
ಆದರೆ, ಕೆಲವು ದಿನಗಳಿಂದ ಈ ಸಿನಿಮಾಗೆ ಬಾಕ್ಸ್ ಆಫೀಸ್ನಲ್ಲಿ ಪೈಪೋಟಿ ನೀಡಲು ವಿವೇಕ್ ಅಗ್ನಿಹೋತ್ರಿ ನಿರ್ದೇಶನದ 'ದಿ ವ್ಯಾಕ್ಸಿನ್ ವಾರ್' ತಯಾರಾಗಿದೆ ಎಂಬ ಮಾತು ಕೇಳಿ ಬರುತ್ತಿತ್ತು. ಇದೀಗ ಈ ವಿಚಾರ ನಿಜವಾಗಿದೆ. ಹೌದು, ಈ ಸಿನಿಮಾ ತಂಡ ಕೂಡ ಚಿತ್ರ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದೆ. ಸೆಪ್ಟಂಬರ್ 28ರಂದೇ 'ದಿ ವ್ಯಾಕ್ಸಿನ್ ವಾರ್' ಚಿತ್ರ ಕೂಡ ತೆರೆ ಕಾಣಲಿದೆ. ಈ ಮೂಲಕ ಪ್ರಶಾಂತ್ ನೀಲ್ ಮತ್ತು ವಿವೇಕ್ ಅಗ್ನಿಹೋತ್ರಿ ಸಿನಿಮಾಗಳು ಥಿಯೇಟರ್ಗಳಲ್ಲಿ ಘರ್ಷಿಸಲಿದೆ.
'ಸಲಾರ್' ಚಿತ್ರತಂಡ ಹೀಗಿದೆ...: ದೊಡ್ಡ ತಾರಾಗಣವಿರುವ ಚಿತ್ರದಲ್ಲಿ ಪ್ರಭಾಸ್ಗೆ ನಾಯಕಿಯಾಗಿ ಶ್ರುತಿ ಹಾಸನ್ ನಟಿಸಿದ್ದು, ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ಈಶ್ವರಿ ರಾವ್, ಶ್ರೀಯಾ ರೆಡ್ಡಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಕೆಜಿಎಫ್ ಚಿತ್ರಗಳಿಗೆ ಕೆಲಸ ಮಾಡಿದ ತಾಂತ್ರಿಕ ತಂಡವೇ ಈ ಚಿತ್ರಕ್ಕೂ ಕೆಲಸ ಮಾಡಿದ್ದು, ರವಿ ಬಸ್ರೂರು ಅವರ ಸಂಗೀತ, ಭುವನ್ ಗೌಡ ಛಾಯಾಗ್ರಹಣ, ಶಿವಕುಮಾರ್ ಅವರ ಕಲಾ ನಿರ್ದೇಶನ ಚಿತ್ರಕ್ಕಿದೆ. ಸೆ. 28ರಂದು ಪಂಚ ಭಾಷೆಗಳಲ್ಲಿ ಏಕಕಾಲಕ್ಕೆ ಜಗತ್ತಿನಾದ್ಯಂತ ಅದ್ಧೂರಿಯಾಗಿ ಸಿನಿಮಾ ಬಿಡುಗಡೆಯಾಗಲಿದೆ.
'ದಿ ವ್ಯಾಕ್ಸಿನ್ ವಾರ್' ಎಂದರೆ?: 'ದಿ ವ್ಯಾಕ್ಸಿನ್ ವಾರ್' ಸಿನಿಮಾದ ಮೇಲೆ ಜನರಿಗೆ ಸಾಕಷ್ಟು ನಿರೀಕ್ಷೆ ಇದೆ. ಕೋವಿಡ್ ಸಂದರ್ಭದಲ್ಲಿನ ನೈಜ ಘಟನೆಗಳನ್ನು ಆಧರಿಸಿ ಚಿತ್ರ ತಯಾರಾಗುತ್ತಿದೆ. ಜೊತೆಗೆ, ಭಾರತೀಯ ವಿಜ್ಞಾನಿಗಳ ಕಥೆಯಾಧರಿತವಾಗಿದೆ. ಈ ಚಿತ್ರದಲ್ಲಿ, ಖ್ಯಾತ ಬಾಲಿವುಡ್ ನಟ ಅನುಪಮ್ ಖೇರ್, ರೈಮಾ ಸೇನ್, ಸಪ್ತಮಿ ಗೌಡ, ನಾನಾ ಪಾಟೇಕರ್ ಮತ್ತು ಇತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಕಾಶ್ಮೀರಿ ಫೈಲ್ಸ್ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಅವರೇ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾ 11 ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಪ್ರಭಾಸ್ ಸಿನಿಮಾಗೆ ಭಾರೀ ಪೈಪೋಟಿ ನೀಡಲಿದೆ.
ಇದನ್ನೂ ಓದಿ: 'ಪ್ರಭಾಸ್ ಬಗ್ಗೆ ನನಗೆ ಅಪಾರ ಗೌರವವಿದೆ'.. ವದಂತಿಗಳಿಗೆ ತೆರೆ ಎಳೆದ ವಿವೇಕ್ ಅಗ್ನಿಹೋತ್ರಿ