ETV Bharat / entertainment

International Film Festivalನಲ್ಲಿ ಗಮನ ಸೆಳೆದ‌‌‌ "ವೇರ್ ಇಸ್​ ಪಿಂಕಿ" ಜೂನ್​ 2 ಕ್ಕೆ ಬಿಡುಗಡೆ - ಪಿಂಕಿ ಎಲ್ಲಿ

ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿದ್ದ ಪಿಂಕಿ ಎಲ್ಲಿ ಕನ್ನಡ ಸಿನಿಮಾ ಜೂನ್​ 2 ರಂದು ರಾಜ್ಯಾದ್ಯಂತ ತೆರೆ ಮೇಲೆ ಕಾಣಲಿದೆ.

Where is Pinky film team
ವೇರ್ ಇಸ್​ ಪಿಂಕಿ ಚಿತ್ರತಂಡ
author img

By

Published : May 27, 2023, 12:35 PM IST

ಬೆಂಗಳೂರು: ಪ್ರಪಂಚದಾದ್ಯಂತ ಪ್ರತಿಷ್ಠಿತ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು ಪ್ರಶಸ್ತಿ ಹಾಗೂ ಪ್ರಶಂಸೆ ಎರಡನ್ನು ಪಡೆದಿರುವ ಸಿನಿಮಾ‌ ವೇರ್​ ಇಸ್​ ಪಿಂಕಿ. ಅಕ್ಷತಾ ಪಾಂಡವಪುರ, ದೀಪಕ್ ಸುಬ್ರಹ್ಮಣ್ಯ ಮುಖ್ಯ ಭೂಮಿಕೆಯಲ್ಲಿರೋ ಪಿಂಕಿ ಚಿತ್ರ ಈಗ ಪ್ರೇಕ್ಷಕರಿಗಾಗಿ ತೆರೆ ಮೇಲೆ ಬರಲಿದೆ. ಈ ವಿಚಾರವನ್ನು ಪಿಂಕಿ ಚಿತ್ರತಂಡ ಹಂಚಿಕೊಂಡಿದೆ.

ಈ ಕುರಿತು ಮೊದಲು ಮಾತನಾಡಿದ ನಟಿ ಅಕ್ಷತಾ ಪಾಂಡವಪುರ, ನಿರ್ದೇಶಕರು ಕಥೆ ಹೇಳುವ ರೀತಿಯೇ ವಿಭಿನ್ನ. ನನಗೂ ಅವರು ಕಥೆ ಹೇಳುವ ರೀತಿ ಆಶ್ಚರ್ಯವಾಯಿತು. ಈ ಚಿತ್ರದಲ್ಲಿ ಮಗುವನ್ನು ಕಳೆದುಕೊಂಡಿರುವ ತಾಯಿಯ ಪಾತ್ರ ನನ್ನದು ಈಗಾಗಲೇ ಪಿಂಕಿ ಸಿನಿಮಾ‌ ಪ್ರಪಂಚದಾದ್ಯಂತ ಪ್ರತಿಷ್ಠಿತ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು ಮೆಚ್ಚುಗೆಗೆ‌ ಪಾತ್ರವಾಗಿದೆ.

ಇನ್ನು ನಿರ್ದೇಶಕ ಪೃಥ್ವಿ ಕೋಣನೂರು ಮಾತನಾಡಿ ಸುಮಾರು ಮೂರು ವರ್ಷಗಳ ಹಿಂದೆ ಪ್ರಾರಂಭವಾದ ಕಥೆಯಿದು. ಬೆಂಗಳೂರಿನಲ್ಲಿ ನಡೆದ ನೈಜ ಘಟನೆಯೂ ಹೌದು. ಮಗುವೊಂದು ಕಾಣೆಯಾಗಿರುತ್ತದೆ. ಆದರೆ ಈ ಕಥೆ ಮಗುವಿನ ಸುತ್ತ ಇರುವುದಿಲ್ಲ. ಮಗುವನ್ನು ಕಳೆದುಕೊಂಡವರ ಸುತ್ತ ಇರುತ್ತದೆ. ಕಥೆಯ ಒಂದೆಳೆ ಕೇಳಿ ಮೆಚ್ಚಿಕೊಂಡ ನಿರ್ಮಾಪಕ ಕೃಷ್ಣೇಗೌಡ ಅವರು ನಿರ್ಮಾಣಕ್ಕೆ ಮುಂದಾಗಿದ್ದರು. ಅಕ್ಷತಾ ಪಾಂಡವಪುರ, ದೀಪಕ್ ಸುಬ್ರಹ್ಮಣ್ಯ, ಪೃಥ್ವಿ, ಗುಂಜಲಮ್ಮ, ಸಂಗಮ್ಮ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ‌. ಅದರಲ್ಲೂ ಗುಂಜಲಮ್ಮ ಹಾಗೂ ಸಂಗಮ್ಮ ಇಬ್ಬರೂ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇವರಿಬ್ಬರೂ ಸ್ಲಂ ನಿವಾಸಿಗಳು. ನಟನೆ ಗೊತ್ತಿಲ್ಲದ ಇವರು ಸಹಜವಾಗಿ ಅಭಿನಯಿಸಿರುವುದು ಈ ಚಿತ್ರದ ವಿಶೇಷ ಎಂದರು.

ನಿರ್ಮಾಪಕ ಕೃಷ್ಣೇಗೌಡ ಮಾತನಾಡಿ ನಾನು ಕಥೆ ಕೇಳಲಿಲ್ಲ. ನಿರ್ದೇಶಕರು ಮಗು ಕಳೆದು ಹೋಗಿರುವ ಸುತ್ತಲ್ಲಿನ ಕಥೆ ಎಂದು ಕಥೆಯ ಒಂದೆಳೆ ಹೇಳಿದರು. ನಾನು ಆಗಲೇ ಚೆನ್ನಾಗಿದೆ. ನೀವು ಕೆಲಸ ಶುರು ಮಾಡಿಕೊಳ್ಳಿ ಎಂದು ಹೇಳಿದೆ. ಬೆಂಗಳೂರಿನಲ್ಲಿ ಮಗುವಿನ ಭವಿಷ್ಯಕ್ಕಾಗಿ ತಂದೆ - ತಾಯಿ ಕೆಲಸಕ್ಕಾಗಿ ಮಗುವನ್ನು ನೋಡಿಕೊಳ್ಳಲು ಬಿಟ್ಟು ಕೆಲಸಕ್ಕೆ ಹೋಗುತ್ತಾರೆ.

ಆದರೆ ಇಲ್ಲಿ ಆ ಮಗುವೆ ಇನ್ನೊಬ್ಬರ ಭವಿಷ್ಯಕ್ಕೆ ದಾರಿಯಾಗಿರುತ್ತದೆ. ಇಂತಹ ಅಪರೂಪದ ಕಥೆ ಈ ಚಿತ್ರದಲ್ಲಿದೆ. ಇನ್ನು ಅಕ್ಷತಾ ಪಾಂಡವಪುರ ಜೊತೆ ದೀಪಕ್ ಸುಬ್ರಹ್ಮಣ್ಯ, ಗುಂಜಲಮ್ಮ, ಸಂಗಮ್ಮ ಮುಂತಾದವರು ಅಭಿನಯಿಸಿದ್ದಾರೆ. ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ಅನೇಕ ಚಿತ್ರೋತ್ಸವಗಳಲ್ಲಿ ನಮ್ಮ ಚಿತ್ರ ಪ್ರದರ್ಶನಗೊಂಡಿರುವ ಪಿಂಕಿ ಚಿತ್ರ ಜೂನ್ 2 ರಂದು ಬಿಡುಗಡೆಯಾಗುತ್ತಿದೆ‌ ಎಂದು ತಿಳಿಸಿದ್ದಾರೆ.

ಅತ್ಯತ್ತಮ ನಟಿ ಪ್ರಶಸ್ತಿ ಪಡೆದ ಪಿಂಕಿ ಅಕ್ಷತಾ: ವೇರ್​ ಇಸ್​ ಪಿಂಕಿ ಮೂವಿಯ ನಟಿ ಅಕ್ಷತಾ ಪಾಂಡವಪುರ ಈ ಚಿತ್ರದಲ್ಲಿ ತಮ್ಮ ನಟನೆಗಾಗಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಒಟ್ಟಾರೆ ನ್ಯೂಯಾರ್ಕ್‌ನ ಇಂಡಿಯನ್ ಫಿಲಂ ಫೆಸ್ಟಿವಲ್‌ನಲ್ಲಿ ವೇರ್ ಈಸ್ ಪಿಂಕಿ ಚಿತ್ರಕ್ಕೆ ಎರಡು ಪ್ರಶಸ್ತಿ ಸಿಕ್ಕಿವೆ. ಅತ್ಯುತ್ತಮ ಚಿತ್ರಕಥೆ ಮತ್ತು ಅತ್ಯುತ್ತಮ ನಟಿ ವಿಭಾಗದಲ್ಲಿ ವಿಶೇಷ ಗಮನ ಸೆಳೆದಿದೆ.

ಇದನ್ನೂ ಓದಿ: ನ್ಯೂಯಾರ್ಕ್ Film festival: ಪಿಂಕಿ ಚಿತ್ರಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದ ಅಕ್ಷತಾ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.