ETV Bharat / entertainment

'ಯಾವ ಮೋಹನ ಮುರಳಿ ಕರೆಯಿತು‌' ಸಿನಿಮಾ ಶೀರ್ಷಿಕೆ ಗೀತೆ ಬಿಡುಗಡೆ - ​ ETV Bharat Karnataka

'ಯಾವ ಮೋಹನ ಮುರಳಿ ಕರೆಯಿತು‌' ಎಂಬ ಸಿನಿಮಾ ವಿಶೇಷಚೇತನ ಹುಡುಗಿ ಮತ್ತು ಶ್ವಾನದ ಕಥೆ ಆಧರಿಸಿದೆ ಎಂದು ಚಿತ್ರತಂಡ ಹೇಳಿದೆ.

ಯಾವ ಮೋಹನ ಮುರಳಿ ಕರೆಯಿತು‌
ಯಾವ ಮೋಹನ ಮುರಳಿ ಕರೆಯಿತು‌
author img

By ETV Bharat Karnataka Team

Published : Nov 6, 2023, 12:36 PM IST

ಕನ್ನಡದ ಪ್ರಸಿದ್ಧ ಕವಿ ಗೋಪಾಲಕೃಷ್ಣ ಅಡಿಗರು ಬರೆದಿರುವ, 'ಯಾವ ಮೋಹನ ಮುರಳಿ ಕರೆಯಿತು' ಎಂಬ ಹಾಡಿನ ಮೊದಲ ಸಾಲೇ ಚಿತ್ರದ ಶೀರ್ಷಿಕೆಯಾಗಿದೆ. ಇತ್ತೀಚೆಗೆ ಈ ಚಿತ್ರಕ್ಕಾಗಿ ಗೀತರಚನೆಕಾರ ವಿ.ನಾಗೇಂದ್ರ ಪ್ರಸಾದ್ ಬರೆದಿರುವ, 'ಯಾವ ಮೋಹನ ಮುರಳಿ ಕರೆಯಿತು' ಟೈಟಲ್ ಸಾಂಗ್ ಬಿಡುಗಡೆಯಾಯಿತು. ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ ಹಾಡು ರಿಲೀಸ್ ಮಾಡಿ, ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.

ಮುಖ್ಯಭೂಮಿಕೆಯಲ್ಲಿ ಬೇಬಿ ಪ್ರಕೃತಿ, ನಾಯಕ ಮಾಧವ, ನಾಯಕಿ ಸ್ವಪ್ನ ಶೆಟ್ಟಿಗಾರ್ ಅಭಿನಯಿಸಿರುವ ಚಿತ್ರವನ್ನು ವಿಶ್ವಾಸ್ ಕೃಷ್ಣ ನಿರ್ದೇಶಿಸಿದ್ದಾರೆ. ನಿರ್ದೇಶಕರು ಹೇಳುವಂತೆ, ವಿಶೇಷಚೇತನ ಹುಡುಗಿ ಹಾಗೂ ಶ್ವಾನದ ನಡುವಿನ ಪ್ರೀತಿಯ ಕುರಿತ ಚಿತ್ರವಿದು. ಕನ್ನಡದಲ್ಲಿ ಶ್ವಾನದ ಕುರಿತಾದ ಚಿತ್ರಗಳು ಬಂದಿವೆ. ಆದರೆ ಈ ಕಥೆ ವಿಭಿನ್ನ. ಅನಿಲ್ ಸಿ.ಜೆ ಸಂಗೀತ ನೀಡಿರುವ ಎಲ್ಲಾ ಹಾಡುಗಳೂ ಚೆನ್ನಾಗಿವೆ ಎಂದು ಚಿತ್ರತಂಡ ಹೇಳಿದೆ.

ನಾನು ಮೂಲತಃ ಉದ್ಯಮಿ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ. ಹಾಡು ಬಿಡುಗಡೆ ಮಾಡಿಕೊಟ್ಟ ಉಮಾಪತಿ ಅವರಿಗೆ ಧನ್ಯವಾದ ಎಂದು ನಿರ್ಮಾಪಕ ಶರಣಪ್ಪ ಗೌರಮ್ಮ ಹೇಳಿದರು. ಗೀತರಚನೆಕಾರ ಗೌಸ್ ಫಿರ್, ರಾಕಿ (ಶ್ವಾನ) ಮತ್ತು ಟ್ರೈನರ್ ಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಶ್ವಾನ ರಾಕಿ ಸಹ ವೇದಿಕೆ ಮೇಲೆ ಕುಳಿತು ಸಮಾರಂಭ ವೀಕ್ಷಿಸಿದ್ದು ವಿಶೇಷವಾಗಿತ್ತು.

ದಿಲ್ ಖುಷ್ ಟೀಸರ್ ಬಿಡುಗಡೆ: 'ದಿಲ್ ಖುಷ್' ಎಂಬ ಸಿನಿಮಾದ ಶೂಟಿಂಗ್ ಬಹುತೇಕ ಮುಗಿದಿದ್ದು, ತೆರೆಗೆ ಬರಲು ಸಜ್ಜಾಗಿದೆ. ಚಿತ್ರದ ಟೀಸರ್ ಅನ್ನು ಇತ್ತೀಚೆಗೆ ನಟ ಡಾರ್ಲಿಂಗ್ ಕೃಷ್ಣ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದ್ದರು. ರೊಮ್ಯಾಂಟಿಕ್ ಕಾಮಿಡಿ ಕಥಾಹಂದರದೊಂದಿಗೆ ನವೀರಾದ ಪ್ರೇಮಕಥೆಯ ಈ ಚಿತ್ರವನ್ನು ಪ್ರಮೋದ್ ಜಯ ನಿರ್ದೇಶನ ಮಾಡಿದ್ದಾರೆ. ಪ್ರಸಾದ್ ಕೆ.ಶೆಟ್ಟಿ ಸಂಗೀತ ನೀಡಿದ್ದು 5 ಹಾಡುಗಳಿವೆ. 'ದಿಲ್ ಖುಷ್' ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಕೊಡಗಿನ ಸೋಮವಾರಪೇಟೆ,‌ ಶನಿವಾರಸಂತೆ ಮುಂತಾದೆಡೆ ಚಿತ್ರೀಕರಣ ನಡೆದಿದೆ.

ಎಲ್ಲೆಡೆ ಟೀಸರ್ ವ್ಯಾಪಕವಾಗಿ ಮೆಚ್ಚುಗೆ ಗಳಿಸಿದೆ. ದಿಲ್ ಖುಷ್' ಎಂದರೆ ನಾಯಕ ಹಾಗೂ ನಾಯಕಿ ಹೆಸರು. ದಿಲ್ಮಯ ನಾಯಕಿಯ ಹೆಸರಾದರೆ, ಕುಷಾಲ್ ನಾಯಕನ ಹೆಸರು. ಮನೆಮಂದಿಯಲ್ಲಾ ಕುಳಿತು ನೋಡುವ ಕೌಟುಂಬಿಕ ಚಿತ್ರ ಇದು ಎಂದು ನಿರ್ದೇಶಕ ತಿಳಿಸಿದ್ದಾರೆ. ಯುವ ಪ್ರತಿಭೆ ರಂಜಿತ್ 'ದಿಲ್ ಖುಷ್' ಚಿತ್ರದ ನಾಯಕನಾಗಿ, ಸ್ಪಂದನ ಸೋಮಣ್ಣ ನಾಯಕಿಯಾಗಿದ್ದಾರೆ. ರಂಗಾಯಣ ರಘು, ಅರುಣಾ ಬಾಲರಾಜ್, ರಘು ರಾಮನಕೊಪ್ಪ, ರವಿ ಭಟ್, ಧರ್ಮಣ್ಣ ಕಡೂರು, ಸೂರ್ಯ ಪ್ರವೀಣ್ ಮುಂತಾದವರು ಪ್ರಮುಖಪಾತ್ರಗಳಿಗೆ ಜೀವ ತುಂಬಿದ್ದಾರೆ.

ಇದನ್ನೂ ಓದಿ: 'ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ' ಟ್ರೇಲರ್​ ರಿಲೀಸ್​; ಅಭಿಮಾನಿಗಳಲ್ಲಿ ಗರಿಗೆದರಿದ ಕುತೂಹಲ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.