ETV Bharat / entertainment

ಲಾಯರ್ ಪಾತ್ರದಲ್ಲಿ ಅಜಯ್ ರಾವ್.. ಯುದ್ಧಕಾಂಡ ಟೈಟಲ್​ ಟೀಸರ್​​ ರಿಲೀಸ್ - ajay rao Yuddhakaanda movie

ನಟ ಅಜಯ್​ ರಾವ್ ಅಭಿನಯದ ಯುದ್ಧಕಾಂಡ ಟೈಟಲ್ ಟೀಸರ್ ಬಿಡುಗಡೆ ಕಾರ್ಯಕ್ರಮ ಇಂದು ನಡೆಯಿತು.

Yuddhakaanda title teaser released
ಯುದ್ಧಕಾಂಡ ಟೈಟಲ್​ ಟೀಸರ್​​ ರಿಲೀಸ್
author img

By

Published : Nov 26, 2022, 7:21 PM IST

Updated : Nov 26, 2022, 7:43 PM IST

ಸ್ಯಾಂಡಲ್​​​ವುಡ್​​ನಲ್ಲಿ ತಾಜ್ ಮಹಲ್, ಕೃಷ್ಣ ಲೀಲಾ, ಕೃಷ್ಣ ರುಕ್ಮಿಣಿ ಚಿತ್ರಗಳ ಮೂಲಕ ತನ್ನದೇ ಐಡೆಂಟಿಟಿ ಕ್ರಿಯೇಟ್ ಮಾಡಿಕೊಂಡಿರುವ ನಟ ಅಜಯ್ ರಾವ್. ಇದೀಗ ಸ್ಯಾಂಡಲ್​ವುಡ್ ಯುವ ನಿರ್ದೇಶಕನೊಂದಿಗೆ ಹೊಸ ಸಿನಿಮಾ ಘೋಷಿಸಿದ್ದಾರೆ. ಚಿತ್ರಕ್ಕೆ ಯುದ್ಧಕಾಂಡ ಎಂದು ಶೀರ್ಷಿಕೆ ಇಡಲಾಗಿದ್ದು, ಇಂದು ಟೈಟಲ್ ಟೀಸರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಸಖತ್ ಇಂಟ್ರೆಸ್ಟಿಂಗ್ ಆಗಿರೋ ಯುದ್ಧಕಾಂಡ ಟೈಟಲ್ ಟೀಸರ್ ಸಿನಿರಸಿಕರ ಗಮನ ಸೆಳೆಯುತ್ತಿದೆ.

Yuddhakaanda title teaser released
ಯುದ್ಧಕಾಂಡ ಟೈಟಲ್​ ಟೀಸರ್​​ ರಿಲೀಸ್ ಕಾರ್ಯಕ್ರಮ

ಯುದ್ಧಕಾಂಡ ಚಿತ್ರವನ್ನು ಅಜಯ್ ರಾವ್ ತಮ್ಮದೇ ನಿರ್ಮಾಣ ಸಂಸ್ಥೆ 'ಶ್ರೀಕೃಷ್ಣ ಆರ್ಟ್ಸ್ ಆ್ಯಂಡ್ ಕ್ರಿಯೇಷನ್ಸ್' ಮತ್ತು 'ಅಜಯ್ ರಾವ್ ಪ್ರೊಡಕ್ಷನ್ಸ್' ನಡಿ ನಿರ್ಮಾಣ ಮಾಡುತ್ತಿದ್ದಾರೆ. ಈ ಮೂಲಕ ಕೃಷ್ಣ ಲೀಲಾ ಸಿನಿಮಾ ನಂತರ ಮತ್ತೊಮ್ಮೆ ನಿರ್ಮಾಣ ಸಾಹಸಕ್ಕೆ ಮುಂದಾಗಿದ್ದಾರೆ. ಚಿತ್ರದಲ್ಲಿ ವಕೀಲರಾಗಿ ಕಾಣಿಸಿಕೊಳ್ಳುತ್ತಿರುವ ಅಜಯ್ ರಾವ್ ಸಿನಿಮಾವನ್ನು ವಕೀಲರಿಂದಲೇ ಲಾಂಚ್ ಮಾಡಿಸಿದ್ದು ವಿಶೇಷವಾಗಿತ್ತು.

ಈ ಸಿನಿಮಾ ಬಗ್ಗೆ ಮೊದಲು ಮಾತು ಶುರು ಮಾಡಿದ ಅಜಯ್ ರಾವ್, ಯುದ್ಧಕಾಂಡ ಸಿನಿಮಾ ಎಂದಾಗ ಎಲ್ಲರಿಗೂ ನೆನಪಾಗೋದು ಲೆಜೆಂಡರಿ ರವಿ ಸರ್ ಚಿತ್ರ. ಆ ಸಿನಿಮಾದ ನಿರ್ದೇಶಕರಾದ ಕೆ.ವಿ ರಾಜು ಸರ್ ಜೊತೆ ನಾನು ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದೇನೆ.

ಅದು ನನ್ನ ಅದೃಷ್ಟ. ಈ ಸಿನಿಮಾ ಲಾಂಚ್ ಮಾಡೋವಾಗ ಮೊದಲು ರವಿ ಸರ್ ಭೇಟಿ ಮಾಡಿ ಆಶೀರ್ವಾದ ತೆಗೆದುಕೊಂಡು ಬಂದೆ. ಒಳ್ಳೆಯದಾಗ್ಲಿ ಎಂದು ಆಶೀರ್ವಾದ ಮಾಡಿದ್ರು. ಆದ್ರೆ ಆಗ ಬಂದ ಯುದ್ಧಕಾಂಡ ಚಿತ್ರಕ್ಕೂ ಈ ಸಿನಿಮಾಗೂ ಯಾವುದೇ ಸಂಬಂಧ ಇಲ್ಲ. ಇದು ರಿಮೇಕ್ ಸಿನಿಮಾ ಕೂಡ ಅಲ್ಲ ಎಂದು ಮಾಹಿತಿ ಹಂಚಿಕೊಂಡ್ರು.

  • " class="align-text-top noRightClick twitterSection" data="">

ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು 20 ವರ್ಷ ಆಯಿತು. ನಟನಾಗಿ ಸೋಲು-ಗೆಲುವು ಎರಡನ್ನು ನೋಡಿದ್ದೇನೆ. ಕೇವಲ ನಟನಾಗಿ ಉಳಿಯದೇ ಸಿನಿಮಾದ ಎಲ್ಲಾ ಕ್ಷೇತ್ರದಲ್ಲಿ ಪ್ರಯೋಗ ಮಾಡಬೇಕು ಎಂದುಕೊಂಡು ಬೆಂಗಳೂರಿಗೆ ಬಂದವನು ನಾನು. ಹೀರೋ ಆಗಿದ್ದವನು ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿಯೂ ಕೆಲಸ ಮಾಡಿದ್ದೇನೆ.

ಕೃಷ್ಣ ಲೀಲಾ ಸಿನಿಮಾ ಮೂಲಕ ನಿರ್ಮಾಪಕನೂ ಆಗಿದ್ದೇನೆ. ಇದೀಗ ಏಳು ವರ್ಷದ ನಂತರ ಎರಡನೇ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದೇನೆ ಎಂದು ಚಿತ್ರರಂಗದ ಜರ್ನಿಯನ್ನು ಮೆಲುಕು ಹಾಕಿದ್ರು ಅಜಯ್ ರಾವ್.

ಇದನ್ನೂ ಓದಿ: ಹಸೆಮಣೆ ಏರಲು ಸಜ್ಜಾದ ಅದಿತಿ ಪ್ರಭುದೇವ.. ಅರಿಶಿಣ ಶಾಸ್ತ್ರ ಫೋಟೋಗಳು ಇಲ್ಲಿವೆ

ಯುದ್ಧಕಾಂಡ ಸಿನಿಮಾವನ್ನು ಕಟಿಂಗ್ ಶಾಪ್ ಸಿನಿಮಾ ಖ್ಯಾತಿಯ ಪವನ್ ಭಟ್ ನಿರ್ದೇಶಿಸುತ್ತಿದ್ದಾರೆ. ಕಾರ್ತಿಕ್ ಶರ್ಮಾ ಕ್ಯಾಮರಾ ವರ್ಕ್, ಕೆ.ಬಿ.ಪ್ರವೀಣ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಸದ್ಯದಲ್ಲೇ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಿದೆ 'ಯುದ್ಧಕಾಂಡ' ಚಿತ್ರತಂಡ.

Last Updated : Nov 26, 2022, 7:43 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.