ETV Bharat / entertainment

ಬಿಗ್​ ಬಾಸ್​: ಜಿಯೋ ಸಿನಿಮಾದ 'ಫನ್​ ಫ್ರೈಡೇ' ಟಾಸ್ಕ್​ನಲ್ಲಿ ಗೆದ್ದ ಸಂಗೀತಾ ಟೀಮ್​ - ಈಟಿವಿ ಭಾರತ ಕನ್ನಡ

Kannada Bigg Boss: ಶುಕ್ರವಾರ ಜಿಯೋ ಸಿನಿಮಾ ವತಿಯಿಂದ ನೀಡಲಾದ ಫನ್​ ಫ್ರೈಡೇ ಟಾಸ್ಕ್‌ನಲ್ಲಿ ಸಂಗೀತಾ ಟೀಮ್​ ಗೆದ್ದಿದೆ.

Kannada Bigg Boss
ಬಿಗ್​ ಬಾಸ್​: ಜಿಯೋ ಸಿನಿಮಾದ 'ಫನ್​ ಫ್ರೈಡೆ' ಟಾಸ್ಕ್​ನಲ್ಲಿ ಗೆದ್ದ ಸಂಗೀತಾ ಟೀಮ್​
author img

By ETV Bharat Karnataka Team

Published : Nov 4, 2023, 3:46 PM IST

ಕನ್ನಡ ಬಿಗ್​ ಬಾಸ್​ ಸೀಸನ್​ 10ರ ನಾಲ್ಕನೇ ವಾರ ಮನೆಯಲ್ಲಿ ಕಿಚ್ಚು ಹೊತ್ತಿಕೊಂಡಿದೆ. ಈ ವಾರದ ಟಾಸ್ಕ್‌ನಲ್ಲಿ ಸೋತು ಒಳಗೊಳಗೆ ಕುದಿಯುತ್ತಿರುವ ಸಂಗೀತಾ ತಂಡ, ಶುಕ್ರವಾರ ಜಿಯೋ ಸಿನಿಮಾ ವತಿಯಿಂದ ನೀಡಲಾದ ಫನ್​ ಫ್ರೈಡೇ (Fun Friday) ಟಾಸ್ಕ್‌ನಲ್ಲಿ ಗೆದ್ದು ಸಮಾಧಾನದ ನಿಟ್ಟುಸಿರು ಬಿಟ್ಟಿದೆ. ಈ ವಾರದ ಕ್ಯಾಪ್ಟನ್ ಆಗಿ ವಿನಯ್ ಆಯ್ಕೆಯಾಗಿದ್ದಾರೆ. ಅದು ಸಂಗೀತಾ ಗ್ಯಾಂಗ್‌ನ ತಳಮಳಕ್ಕೂ ಕಾರಣವಾಗಿದೆ.

ಟಾಸ್ಕ್‌ನ ನಂತರ ಮನೆಯವರೆಲ್ಲರ ಬಹುಮತದ ಅಭಿಪ್ರಾಯದ ಮೇರೆಗೆ ವಿನಯ್‌ ‘ಅತ್ಯುತ್ತಮ ಪ್ರದರ್ಶನ’ದ ಪದಕ ಕೊರಳಿಗೇರಿಸಿಕೊಂಡರೆ, ಸಂಗೀತ ಜೈಲಿನುಡುಗೆ ತೊಟ್ಟು ಬಂಧಿಯಾಗಿದ್ದಾರೆ. ಈ ನಡುವೆ ಜಿಯೋ ಸಿನಿಮಾ ಮನೆಯ ಸ್ಪರ್ಧಿಗಳಿಗೆ ‘ಏಳೋಂದ್ಲ ಏಳು’ ಎಂಬ ಟಾಸ್ಕ್‌ ನೀಡಿತ್ತು. ಅದರ ನಿರ್ವಹಣೆಯ ಜವಾಬ್ದಾರಿಯನ್ನು ಭಾಗ್ಯಶ್ರೀ ಅವರಿಗೆ ನೀಡಿತ್ತು. ತುಕಾಲಿ ಸಂತೋಷ್ ಅವರು ಸಂಗೀತಾ ಅವರ ತಂಡದಿಂದ ಆಡಿದರು.

ಆಟದ ನಿಯಮಗಳು: ‘ಏಳೊಂದ್ಲ ಏಳು’ ಇದು ಸಂಖ್ಯೆಗಳ ಆಟ. ಸಂಗೀತಾ ತಂಡದವರು ನೀಲಿ ಬಣ್ಣದ ಟೀ ಶರ್ಟ್‌ ಮತ್ತು ವಿನಯ್ ತಂಡದವರು ಕೆಂಪು ಬಣ್ಣದ ಟೀ ಶರ್ಟ್‌ ಧರಿಸಿದ್ದರು. ಅವರ ಟೀ ಶರ್ಟ್‌ ಮೇಲೆ ಒಂದೊಂದು ಅಂಕಿ ಬರೆಯಲಾಗಿತ್ತು. ಭಾಗ್ಯಶ್ರೀ ಒಮ್ಮೆ ಒಂದಿಷ್ಟು ಸಂಖ್ಯೆಗಳನ್ನು ಹೇಳುತ್ತಾರೆ. ತಂಡದ ಸದಸ್ಯರೆಲ್ಲ ತಮ್ಮ ಟೀ ಶರ್ಟ್‌ ಮೇಲಿನ ಅಂಕಿಗಳಿಗೆ ಅನುಗುಣವಾಗಿ ಭಾಗ್ಯಶ್ರೀ ಹೇಳಿದ ಸಂಖ್ಯೆಯಂತೆ ತಮ್ಮನ್ನು ತಾವು ಜೋಡಿಸಿಕೊಳ್ಳಬೇಕು.

ಇದನ್ನೂ ಓದಿ: ಬಿಗ್​ ಬಾಸ್​ ಸೀಸನ್​ 10: ಕುಸ್ತಿ ಅಖಾಡದಲ್ಲಿ ವಿನಯ್ - ತನಿಷಾ ಮಾತಿನ ಚಕಮಕಿ!

ತಂಡದ ಸದಸ್ಯರ ನಡುವಿನ ಹೊಂದಾಣಿಕೆಯನ್ನು ಬಿಂಬಿಸುವ ಈ ಆಟಕ್ಕೆ ಎರಡೂ ತಂಡದವರು ಸಾಕಷ್ಟು ಉತ್ಸಾಹದಿಂದಲೇ ಸಿದ್ಧರಾದರು. ಒಂದು ಕಡೆಯಲ್ಲಿ ವಿನಯ್, ಸಿರಿ, ನೀತು, ಸ್ನೇಹಿತ್, ಇಶಾನಿ, ರಕ್ಷಕ್, ನಮ್ರತಾ ನಿಂತಿದ್ದರೆ ಮತ್ತೊಂದು ಕಡೆಯಲ್ಲಿ ಸಂಗೀತಾ, ತನಿಷಾ, ವರ್ತೂರು ಸಂತೋಷ್, ತುಕಾಲಿ ಸಂತೋಷ್, ಮೈಕಲ್, ಡ್ರೋಣ್ ಪ್ರತಾಪ್‌, ಕಾರ್ತಿಕ್ ನಿಂತಿದ್ದರು.

ಭಾಗ್ಯಶ್ರೀ ಹೇಳಿದ ನಂಬರ್​ಗೆ ಅನುಗುಣವಾಗಿ ತಮ್ಮನ್ನು ತಾವು ಜೋಡಿಸಿಕೊಂಡು ನಿಲ್ಲುವಲ್ಲಿ ಮೊದಲು ಯಶಸ್ವಿಯಾಗಿದ್ದು ಸಂಗೀತಾ ತಂಡ. ಹಾಗಾಗಿ ಸಂಗೀತಾ ತಂಡದವರು ಈ ಆಟದಲ್ಲಿ ಗೆಲುವು ಸಾಧಿಸಿದರು. ಆದರೆ, ಅವರ ಗೆಲುವು ಸಂಭ್ರಮವಾಗಿ ಬದಲಾಗುವ ಸ್ಥಿತಿಯಲ್ಲಿ ಅವರಿರಲಿಲ್ಲ. ಯಾಕೆಂದರೆ ಇಡೀ ಮನೆಯ ಕ್ಯಾಪ್ಟನ್ ಆಗಿ ವಿನಯ್‌ ಆಯ್ಕೆಯಾಗಿದ್ದರು. ಹಾಗಾಗಿ ಆಗಲೇ ಸೋತುಹೋಗಿದ್ದ ಸಂಗೀತಾ ತಂಡಕ್ಕೆ ತಾತ್ಕಾಲಿಕ ನೆಮ್ಮದಿಯನ್ನಷ್ಟೇ ಈ ಗೆಲುವು ನೀಡಿತು. ಜಿಯೋ ಸಿನಿಮಾದಲ್ಲಿ ಉಚಿತವಾಗಿ ಬಿಗ್‌ ಬಾಸ್‌ ಕನ್ನಡವನ್ನು ನೋಡಬಹುದಾಗಿದೆ. ಪ್ರತಿದಿನದ ಎಪಿಸೋಡ್‌ಗಳನ್ನು ಕಲರ್ಸ್​​ ಕನ್ನಡದಲ್ಲಿ ರಾತ್ರಿ 9.30ಕ್ಕೆ ಪ್ರಸಾರವಾಗುತ್ತಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಕ್ಯಾಪ್ಟನ್​ ಸ್ಥಾನಕ್ಕೆ ವಿನಯ್: 'ಆನೆ'ಗೆ ಹೆದರಲ್ಲವೆಂದ ಸಂಗೀತಾ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.