ETV Bharat / entertainment

ಬಿಗ್‌ ಬಾಸ್: ಸ್ನೇಹಿತ್‌ ಹೀಗೂ ಮಾಡಬಹುದಾ! ಸ್ನೇಹದಲ್ಲಿ ಬಿರುಕು? - Bigg Boss kannada

ಕ್ಯಾಪ್ಟನ್ಸಿ ಟಾಸ್ಕ್​ನ ಪ್ರೋಮೋ ಅನಾವರಣಗೊಂಡಿದ್ದು, ಬಿಗ್​ ಬಾಸ್ ಸಂಪೂರ್ಣ ಸಂಚಿಕೆ ವೀಕ್ಷಿಸಲು ಪ್ರೇಕ್ಷಕರು ಕಾತರರಾಗಿದ್ದಾರೆ.

Kannada Bigg Boss
ಕನ್ನಡ ಬಿಗ್‌ ಬಾಸ್
author img

By ETV Bharat Karnataka Team

Published : Dec 8, 2023, 1:17 PM IST

ಕನ್ನಡ ಬಿಗ್‌ ಬಾಸ್ ಮನೆ ಈ ವಾರದಲ್ಲಿ ಹಲವು ಕೋಲಾಹಲಗಳಿಗೆ, ಕೋಪ ತಾಪಗಳಿಗೆ, ಜಗಳಗಳಿಗೆ, ರೋಷಾವೇಶಗಳಿಗೆ ಸಾಕ್ಷಿಯಾಗುತ್ತಿದೆ. ವಾರಾಂತ್ಯ ಸಮೀಪಿಸುತ್ತಿದ್ದಂತೆ ಮನೆಯೊಳಗಿನ ಲೆಕ್ಕಾಚಾರಗಳೂ ಬದಲಾಗುತ್ತಿವೆ. ಜಿಯೋ ಸಿನಿಮಾ ಬಿಡುಗಡೆ ಮಾಡಿರುವ ಪ್ರೋಮೋ ಇಂಥದ್ದೇ ಒಂದು ಅಚ್ಚರಿಯ ಲೆಕ್ಕಾಚಾರಕ್ಕೆ ಸಾಕ್ಷಿಯಾಗಿದೆ. ಕಲರ್ಸ್ ಕನ್ನಡ ಸೋಷಿಯಲ್​ ಮೀಡಿಯಾಗಳಲ್ಲಿ ಸ್ನೇಹದಲ್ಲಿ ಬಿರುಕು? ಎಂಬ ಶೀರ್ಷಿಕೆಯಡಿ ಪ್ರೋಮೋ ಅನಾವರಣಗೊಳಿಸಿದ್ದು, ಪ್ರೇಕ್ಷಕರ ಕುತೂಹಲ ಹೆಚ್ಚಾಗಿದೆ.

ಈ ವಾರ ಮನೆಯ ಕ್ಯಾಪ್ಟನ್ ಆಗಿರುವ ಸ್ನೇಹಿತ್‌ ವಿಶೇಷ ಅಧಿಕಾರವನ್ನು ಪಡೆದಿದ್ದರು. ಆ ಅಧಿಕಾರದ ಪ್ರಕಾರ, ಮನೆಯೊಳಗಿನ ಹಲವು ಸಂಗತಿಗಳ ಬಗ್ಗೆ ಅವರ ನಿರ್ಧಾರವೇ ಅಂತಿಮವಾಗಿತ್ತು. ಅಲ್ಲದೇ ಮನೆಯಲ್ಲಿ ತಂಡಗಳನ್ನು ರಚಿಸುವ, ವಾರವಿಡೀ ಬಿಗ್‌ ಬಾಸ್ ನೀಡುವ ಟಾಸ್ಕ್‌ಗಳ ಉಸ್ತುವಾರಿ ವಹಿಸುವ ಜವಾಬ್ದಾರಿಯನ್ನೂ ಸ್ನೇಹಿತ್‌ಗೆ ಒಪ್ಪಿಸಲಾಗಿತ್ತು. ತಂಡವನ್ನು ರಚಿಸುವ ಹಂತದಲ್ಲಿಯೇ ಉಸ್ತುವಾರಿ ವಿಚಾರದಲ್ಲಿ ಉಂಟಾದ ಭಿನ್ನಾಭಿಪ್ರಾಯ ವಾರವಿಡೀ ಮುಂದುವರಿಯಿತು. ಸಂಗೀತಾ ನಾಯಕತ್ವದ ತಂಡ ಹೇಳುವ ಪ್ರಕಾರ ಕ್ಯಾಪ್ಟನ್ ಸ್ನೇಹಿತ್‌, ವರ್ತೂರು ಅವರ ತಂಡದ ಪರವಾಗಿ ನಿರ್ಣಯಗಳನ್ನು ನೀಡುತ್ತಿದ್ದಾರೆ. ನಮ್ರತಾ ಮತ್ತು ವಿನಯ್ ಅವರಿಂದ ಪ್ರಭಾವಿತರಾಗಿ ತಮ್ಮ ನಿರ್ಧಾರಗಳನ್ನು ಬದಲಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಲೇ ಇದ್ದವು.

ಆದರೆ ವಾರಾಂತ್ಯದಲ್ಲಿ ಬಿಗ್‌ ಬಾಸ್‌, ಸ್ನೇಹಿತ್‌ಗೆ ಮತ್ತೊಂದು ಜವಾಬ್ದಾರಿ ವಹಿಸಿದ್ದಾರೆ. ಮನೆಯ ಸದಸ್ಯರ ಪೈಕಿ ಕ್ಯಾಪ್ಟನ್ ಪಟ್ಟಕ್ಕೆ ಸ್ಪರ್ಧಿಸಲು ಅನರ್ಹರಾದ ಸದಸ್ಯರನ್ನು ಸೂಚಿಸಿ ಎಂದು ಬಿಗ್‌ ಬಾಸ್ ಕೇಳಿದ್ದಾರೆ. ಇದಕ್ಕೆ ಎಲ್ಲರೂ ಅಚ್ಚರಿ ಪಡುವಂತೆ ಸ್ನೇಹಿತ್ ನಾಮಿನೇಟ್ ಮಾಡಿದ್ದಾರೆ. ಅವರು ನಮ್ರತಾ ಮತ್ತು ವಿನಯ್ ಅವರನ್ನು ನಾಮಿನೇಟ್​ ಮಾಡಿ ಮನೆಮಂದಿ ಮಾತ್ರವಲ್ಲದೇ ಪ್ರೇಕ್ಷಕರ ಅಚ್ಚರಿಗೂ ಕಾರಣರಾಗಿದ್ದಾರೆ.

ಇದನ್ನೂ ಓದಿ: ಹಿರಿಯ ನಟಿ ಲೀಲಾವತಿ ಅವರ ಆರೋಗ್ಯ ವಿಚಾರಿಸಿದ ರಕ್ಷಾ ರಾಮಯ್ಯ

ವಿನಯ್ ಮತ್ತು ನಮ್ರತಾ ಇಬ್ಬರೂ ಉಸ್ತುವಾರಿಯಾದ ನನ್ನ ಮಾತುಗಳನ್ನು ಮೀರಿದ್ದಾರೆ ಎಂದು ಸ್ನೇಹಿತ್​ ತಮ್ಮ ಕಾರಣಗಳನ್ನು ಕೊಟ್ಟಿದ್ದಾರೆ. ತಮ್ಮನ್ನು ಖಂಡಿತ ಕ್ಯಾಪ್ಟನ್ಸಿ ಟಾಸ್ಕ್‌ನಿಂದ ಹೊರಗಿಡುವುದಿಲ್ಲ ಎಂದೇ ನಂಬಿದ್ದ ವಿನಯ್‌ ಮತ್ತು ನಮ್ರತಾ ಇಬ್ಬರಿಗೂ ಸ್ನೇಹಿತ್‌ ಮಾತು ಕೇಳಿ ಆಘಾತವಾಗಿದೆ. ಇವ್ನೆಂತಾ ಫ್ರೆಂಡ್‌ ಎಂದು ನಮ್ರತಾ ಕಣ್ಣಲ್ಲಿ ನೀರು ತುಂಬಿದೆ.

ಇದನ್ನೂ ಓದಿ: Yash19: TOXIC ಸಿನಿಮಾದಲ್ಲಿ ರಾಕಿಂಗ್​ ಸ್ಟಾರ್ ಯಶ್​​

ಮತ್ತೆ ಯಾರನ್ನು ಸ್ನೇಹಿತ್ ಕ್ಯಾಪ್ಟನ್ಸಿ ಟಾಸ್ಕ್‌ನಿಂದ ಹೊರಗಿಟ್ಟಿದ್ದಾರೆ? ಕೊನೆಗೆ ಮನೆಯ ಕ್ಯಾಪ್ಟನ್ ಆಗುವುದು ಯಾರು? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಬಿಗ್‌ ಬಾಸ್ ಕನ್ನಡ 24 ಗಂಟೆಯ ನೇರಪ್ರಸಾರವನ್ನು ಜಿಯೋ ಸಿನಿಮಾದಲ್ಲಿ ಉಚಿತವಾಗಿ ನೋಡಬಹುದಾಗಿದೆ. ಪ್ರತಿದಿನದ ಎಪಿಸೋಡ್‌ಗಳನ್ನು ಕಲರ್ಸ್ ಕನ್ನಡದಲ್ಲಿ ರಾತ್ರಿ 9.30ಕ್ಕೆ ವೀಕ್ಷಿಸಬಹುದಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.