'ಮನೆಯೇ ಮೊದಲ ಪಾಠಶಾಲೆ' ಎಂಬ ಮಾತು ಬಿಗ್ ಬಾಸ್ ಮನೆಯಲ್ಲಿ ಅಕ್ಷರಶಃ ಸತ್ಯವಾಗುತ್ತಿದೆ. ದೊಡ್ಮನೆಯಲ್ಲಿ ‘ಪ್ರಾಥಮಿಕ ಶಾಲೆ’ ಪ್ರಾರಂಭವಾಗಿದೆ. ಹಾಗಾದರೆ ವಿದ್ಯಾರ್ಥಿಗಳು ಯಾರು? ಕಳೆದ ವಾರ ರಕ್ಕಸರ ಹಾಗೆ ಕಿತ್ತಾಡಿದವರೇ ಈ ವಾರ ಪುಟ್ಟ ಮಕ್ಕಳಾಗಿ ಶಾಲೆಗೆ ಸೇರಿಕೊಂಡಿದ್ದಾರೆ. ಒಬ್ಬರ ಕೈಗೆ ಇನ್ನೊಬ್ಬರು ಕಚ್ಚುತ್ತಾ, ಒಬ್ಬರ ಬಗ್ಗೆ ಇನ್ನೊಬ್ಬರು ದೂರು ಹೇಳುತ್ತಾ, ಎಲ್ಲರು ಸೇರಿ ಒಟ್ಟಿಗೆ ಪ್ರಾರ್ಥನೆ ಮಾಡುತ್ತಾ ಕೋಲಾಹಲವೆದ್ದಿದ್ದ ಮನೆಯಲ್ಲಿ ಕಲರವ ಉಂಟು ಮಾಡುತ್ತಿದ್ದಾರೆ.
-
ಶಾಲೆಗೆ ಯಾರೂ ಚಕ್ಕರ್ ಹಾಕೋ ಹಾಗಿಲ್ಲ!
— Colors Kannada (@ColorsKannada) December 12, 2023 " class="align-text-top noRightClick twitterSection" data="
ಬಿಗ್ ಬಾಸ್ | ಸೋಮ-ಶುಕ್ರ ರಾತ್ರಿ 9.30 | ಶನಿ-ಭಾನು ರಾತ್ರಿ 9#BBK10 #HappyBiggBoss #KichchaSudeep #ColorsKannada #ಬಣ್ಣಹೊಸದಾಗಿದೆ #ಬಂಧಬಿಗಿಯಾಗಿದೆ pic.twitter.com/WN7TTyJeXs
">ಶಾಲೆಗೆ ಯಾರೂ ಚಕ್ಕರ್ ಹಾಕೋ ಹಾಗಿಲ್ಲ!
— Colors Kannada (@ColorsKannada) December 12, 2023
ಬಿಗ್ ಬಾಸ್ | ಸೋಮ-ಶುಕ್ರ ರಾತ್ರಿ 9.30 | ಶನಿ-ಭಾನು ರಾತ್ರಿ 9#BBK10 #HappyBiggBoss #KichchaSudeep #ColorsKannada #ಬಣ್ಣಹೊಸದಾಗಿದೆ #ಬಂಧಬಿಗಿಯಾಗಿದೆ pic.twitter.com/WN7TTyJeXsಶಾಲೆಗೆ ಯಾರೂ ಚಕ್ಕರ್ ಹಾಕೋ ಹಾಗಿಲ್ಲ!
— Colors Kannada (@ColorsKannada) December 12, 2023
ಬಿಗ್ ಬಾಸ್ | ಸೋಮ-ಶುಕ್ರ ರಾತ್ರಿ 9.30 | ಶನಿ-ಭಾನು ರಾತ್ರಿ 9#BBK10 #HappyBiggBoss #KichchaSudeep #ColorsKannada #ಬಣ್ಣಹೊಸದಾಗಿದೆ #ಬಂಧಬಿಗಿಯಾಗಿದೆ pic.twitter.com/WN7TTyJeXs
ಕ್ರೌರ್ಯ ಮೆರೆದಾಡಿದ್ದ ಜಾಗದಲ್ಲಿ ಮುಗ್ಧತೆ ಅರಳುತ್ತಿದೆ. ಈ ಸ್ಪೆಷಲ್ ಟಾಸ್ಕ್‌ನ ಮಜಾ ಹೇಗಿರುತ್ತದೆ ಎಂಬುದು ಇಂದು ಜಿಯೋ ಸಿನಿಮಾ ಬಿಡುಗಡೆ ಮಾಡಿರುವ ಎರಡು ಪ್ರೋಮೊಗಳಲ್ಲಿ ಸ್ಪಷ್ಟವಾಗಿ ತಿಳಿಯುವಂತಿದೆ. ಈ ವಾರದ ಟಾಸ್ಕ್‌ನಲ್ಲಿ ಬಿಗ್ ಬಾಸ್ ಮನೆಯ ಎಲ್ಲ ಸದಸ್ಯರನ್ನು ಬಾಲ್ಯಕ್ಕೆ ಕರೆದೊಯ್ಯುತ್ತಿದ್ದಾರೆ. ಸ್ಪರ್ಧಿಗಳು ಪ್ರಾಥಮಿಕ ಶಾಲೆಯ ಸಮವಸ್ತ್ರ ತೊಟ್ಟು ಅಕ್ಷರಶಃ ಮಕ್ಕಳೇ ಆಗಿಬಿಟ್ಟಿದ್ದಾರೆ. ಒಬ್ಬೊಬ್ಬರು ಇನ್ನೊಬ್ಬರ ಚೇಷ್ಟೆಗಳನ್ನು ನೋಡಿ ಹೊಟ್ಟೆ ಹುಣ್ಣಾಗುವಂತೆ ನಗುತ್ತಿದ್ದಾರೆ. ಈ ವಾರವಿಡೀ ಮಕ್ಕಳಾಟದ ಮನರಂಜನೆ ಭರಪೂರ ಸಿಗಲಿದೆ.
ಪ್ರಾಥಮಿಕ ಶಾಲೆಯಲ್ಲಿ ಮಕ್ಕಳೇನೋ ಭರ್ತಿಯಾಗಿಯಾಯ್ತು. ಹಾಗಾದ್ರೆ ಅವರಿಗೆ ಪಾಠ ಮಾಡುವ ಗುರುಗಳು ಯಾರು? ಮೊದಲ ತರಗತಿಯಲ್ಲಿ 'ವ್ಯಕ್ತಿತ್ವ ವಿಕಸನ'ದ ಬಗ್ಗೆ ಪಾಠ ಮಾಡಲು ಬಂದವರು, ತನಿಷಾ ಟೀಚರ್. ಅಷ್ಟು ಸುಂದರ ಟೀಚರ್ ಪಾಠ ಮಾಡಲು ಬಂದರೆ ಹಾಜರಿಗೇನು ಕಮ್ಮಿ? ಅದರಲ್ಲಿಯೂ ಲಾಸ್ಟ್ ಬೆಂಚ್ ಹುಡುಗ ವರ್ತೂರು ಸಂತೋಷ್ ಅಂತೂ, 'ನೀವು ಚೆನ್ನಾಗಿ ಕಾಣಿಸ್ತಾ ಇದೀರಾ ಮಿಸ್' ಎಂದು ನಿಂತಲ್ಲೇ ಕೈ ಬೀಸಿದ್ದಾರೆ.
-
ಕನ್ನಡ ಪಂಡಿತರಾದರು ಮೈಕಲ್!
— Colors Kannada (@ColorsKannada) December 12, 2023 " class="align-text-top noRightClick twitterSection" data="
ಬಿಗ್ ಬಾಸ್ | ಸೋಮ-ಶುಕ್ರ ರಾತ್ರಿ 9.30 | ಶನಿ-ಭಾನು ರಾತ್ರಿ 9#BBK10 #HappyBiggBoss #KichchaSudeep #ColorsKannada #ಬಣ್ಣಹೊಸದಾಗಿದೆ #ಬಂಧಬಿಗಿಯಾಗಿದೆ pic.twitter.com/2A6rgonPLA
">ಕನ್ನಡ ಪಂಡಿತರಾದರು ಮೈಕಲ್!
— Colors Kannada (@ColorsKannada) December 12, 2023
ಬಿಗ್ ಬಾಸ್ | ಸೋಮ-ಶುಕ್ರ ರಾತ್ರಿ 9.30 | ಶನಿ-ಭಾನು ರಾತ್ರಿ 9#BBK10 #HappyBiggBoss #KichchaSudeep #ColorsKannada #ಬಣ್ಣಹೊಸದಾಗಿದೆ #ಬಂಧಬಿಗಿಯಾಗಿದೆ pic.twitter.com/2A6rgonPLAಕನ್ನಡ ಪಂಡಿತರಾದರು ಮೈಕಲ್!
— Colors Kannada (@ColorsKannada) December 12, 2023
ಬಿಗ್ ಬಾಸ್ | ಸೋಮ-ಶುಕ್ರ ರಾತ್ರಿ 9.30 | ಶನಿ-ಭಾನು ರಾತ್ರಿ 9#BBK10 #HappyBiggBoss #KichchaSudeep #ColorsKannada #ಬಣ್ಣಹೊಸದಾಗಿದೆ #ಬಂಧಬಿಗಿಯಾಗಿದೆ pic.twitter.com/2A6rgonPLA
ಅದಕ್ಕೆ ತನಿಷಾ ಮಿಸ್ ನಾಚಿಕೊಂಡಿದ್ದಂತೂ ನೋಡಿ ಕಲಿಯಬೇಕು ಎನ್ನುವ ಹಾಗೇ ಇತ್ತು. ಆದರೆ ನಾಚಿಕೆಯನ್ನು ಮುಚ್ಚಿಟ್ಟುಕೊಂಡ ಮಿಸ್, ವರ್ತೂರ್ಗೆ ಬೆಂಚ್ ಮೇಲೆ ನಿಂತುಕೊಳ್ಳುವ ಶಿಕ್ಷೆ ಕೊಟ್ಟಿದ್ದಾರೆ. ಅಲ್ಲದೇ ಸ್ಲೇಟಿನ ಮೇಲೆ, 'ಐ ಲವ್ ಯೂ' ಎಂದು ಬರೆದು ಓದುವಂತೆ ಕೇಳುತ್ತಿದ್ದಾರೆ.
ವ್ಯಕ್ತಿತ್ವ ವಿಕಸದ ಪಾಠಗಳನ್ನು ಕೇಳಿದ ಮೇಲೆ ಭಾಷೆಯ ಪಾಠವೂ ಬೇಕಲ್ಲವೇ? ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಪಾಠ ಮಾಡಿಲ್ಲವೆಂದರೆ ಹೇಗೆ? ಕನ್ನಡ ಕಲಿಸಲು ಬಂದ ಮೇಷ್ಟ್ರು ಯಾರು ಗೊತ್ತೆ? ವಿದೇಶದಿಂದ ಬಂದಿರುವ ಮೈಕಲ್, ಕೋಟು ತೊಟ್ಟು 'ಕನ್ನಡ ತರಗತಿ' ಮಾಡಲು ಸಜ್ಜಾಗಿದ್ದಾರೆ. 'ವಿದೇಶದಿಂದ ಬಂದಿದೀನಿ. ಕನ್ನಡ ಭಾಷೆಯ ಮೇಲೆ ನನಗೆ ಪ್ರೀತಿ ಆಯ್ತು. ಈಗ ಪಂಡಿತ ಆಗಲು ಯತ್ನಿಸುತ್ತಿದ್ದೇನೆ' ಎಂದಿದ್ದಾರೆ. ಅಷ್ಟೇ ಅಲ್ಲ, ಪುಂಡ ಹುಡುಗ ಕಾರ್ತಿಕ್‌ಗೆ, 'ಆಂಗ್ಲ ಭಾಷೆ ಬಳಕೆ ಮಾಡಿದರೆ ಶಿಕ್ಷೆ ಕೊಡ್ತೀನಿ' ಎಂದು ಎಚ್ಚರಿಕೆ ಬೇರೆ ನೀಡಿದ್ದಾರೆ.
'ಎಲ್ಲಾದರೂ ಇರು ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು' ಎಂದು ಮೈಕಲ್ ಹೇಳುತ್ತಿದ್ದರೆ ವಿದ್ಯಾರ್ಥಿಗಳ ಬಾಯಲ್ಲಿ 'ಕನ್ನಡ… ರೋಮಾಂಚನವೀ ಕನ್ನಡ' ಎಂಬ ಹಾಡು ತಂತಾನೆಯೇ ಹೊಮ್ಮಿದೆ. ಈ ಕನ್ನಡ ಕ್ಲಾಸ್ ಅನ್ನು ನೋಡಿದ ಎಲ್ಲರಿಗೂ ರೋಮಾಂಚನ ಹುಟ್ಟಿಸುವುದಂತೂ ಖಂಡಿತ. ಬಿಗ್ ಬಾಸ್ ಕನ್ನಡ 24 ಗಂಟೆಯ ನೇರಪ್ರಸಾರವನ್ನು ಜಿಯೋ ಸಿನಿಮಾದಲ್ಲಿ ಉಚಿತವಾಗಿ ನೋಡಬಹುದಾಗಿದೆ. ಪ್ರತಿದಿನದ ಎಪಿಸೋಡ್‌ಗಳು ರಾತ್ರಿ 9.30ಕ್ಕೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದೆ.
ಇದನ್ನೂ ಓದಿ: ಬಿಗ್ ಬಾಸ್: ನಾಮಿನೇಷನ್ ತೂಗುಗತ್ತಿ ಯಾರ ತಲೆ ಮೇಲೆ?