ETV Bharat / entertainment

ನ್ಯೂಯಾರ್ಕ್ ಫಿಲ್ಮ್ ಫೆಸ್ಟಿವಲ್​ಗೆ ಕನ್ನಡದ 'ಮ್ಯಾನ್ ಆಫ್ ದಿ ಮ್ಯಾಚ್' ಚಿತ್ರ ಆಯ್ಕೆ

ಕನ್ನಡದ ಮ್ಯಾನ್ ಆಫ್ ದ ಮ್ಯಾಚ್ ಚಿತ್ರ ನ್ಯೂಯಾರ್ಕ್ ಫಿಲ್ಮ್ ಫೆಸ್ಟಿವಲ್​​ಗೆ ಆಯ್ಕೆಯಾಗಿದೆ. ಚಲನಚಿತ್ರವನ್ನು ನೋಡಿದ ವಿಮರ್ಶಕ, ಲಾರೆನ್ಸ್ ವೈಟ್ನರ್, ನಿರ್ದೇಶಕರನ್ನ ಅಭಿನಂದಿಸಿ ಟ್ವೀಟ್ ಮಾಡಿ ‘ನ್ಯೂಯಾರ್ಕ್ ಫಿಲ್ಮ್ ಫೆಸ್ಟಿವಲ್‍ಗಾಗಿ ನೋಡಿದ ಒಂದು ಅದ್ಭುತವಾದ ಭಾರತೀಯ ವ್ಯಂಗ್ಯಭರಿತ ಚಿತ್ರ. ನಾನು ಅದಕ್ಕೆ 10/10 ನೀಡಿದ್ದೇನೆ’ ಎಂದು ಹೇಳಿದ್ದಾರೆ..

Satya Prakash directed Man of the Match movie
ನ್ಯೂಯಾರ್ಕ್ ಫಿಲ್ಮ್ ಫೆಸ್ಟಿವಲ್​ಗೆ ಕನ್ನಡದ 'ಮ್ಯಾನ್ ಆಫ್ ದಿ ಮ್ಯಾಚ್' ಚಿತ್ರ ಆಯ್ಕೆ
author img

By

Published : May 14, 2022, 1:04 PM IST

ರಾಜ್ಯ ಮತ್ತು ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಡಿ. ಸತ್ಯಪ್ರಕಾಶ್ ನಿರ್ದೇಶನದ ಹೊಸ ಸಿನಿಮಾ 'ಮ್ಯಾನ್ ಆಫ್ ದಿ ಮ್ಯಾಚ್'. ಪುನೀತ್ ರಾಜ್‍ಕುಮಾರ್ ಅವರ ಪಿಆರ್​​ಕೆ ಬ್ಯಾನರ್​​ನಲ್ಲಿ ನಿರ್ಮಾಣವಾಗಿರುವ ಈ ಚಿತ್ರ ಮೇ 5ರಂದು ಅಮೆಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾಗಿದೆ. ಅಲ್ಲದೇ ಪ್ರೇಕ್ಷಕರ ಮೆಚ್ಚುಗೆಗೂ ಪಾತ್ರವಾಗಿದೆ. ಇದರ ಬೆನ್ನಲ್ಲೇ ಪ್ರತಿಷ್ಠಿತ ನ್ಯೂಯಾರ್ಕ್ ಇಂಡಿಪೆಂಡೆಂಟ್ ಫಿಲ್ಮ್ ಫೆಸ್ಟಿವಲ್‍ಗೆ ಆಯ್ಕೆಯಾಗಿದೆ.

ಫೆಸ್ಟಿವಲ್ ಆಫ್ ಸಿನಿಮಾ ತನ್ನ ಆರನೇ ವರ್ಷಕ್ಕೆ ಪ್ರವೇಶಿಸುತ್ತಿದ್ದು, 2022 ಆಗಸ್ಟ್ 5 ರಿಂದ 14ರವರೆಗೆ ನಡೆಯಲಿದೆ. ಕೋವಿಡ್​​ ನಂತರ ಮೊದಲ ಬಾರಿಗೆ, ಫಿಸಿಕಲ್ ಆಗಿ ನಡೆಯಲಿರುವ ಫೆಸ್ಟಿವಲ್, ನ್ಯೂಯಾರ್ಕ್‌ನ ಕ್ವೀನ್ಸ್‌ನಲ್ಲಿರುವ ರೀಗಲ್ ಯೂಎ ಮಿಡ್‌ವೇ ಥಿಯೇಟರ್​​ನಲ್ಲಿ ನಡೆಯಲಿದೆ. ಚಲನಚಿತ್ರವನ್ನು ನೋಡಿದ ವಿಮರ್ಶಕ, ಲಾರೆನ್ಸ್ ವೈಟ್ನರ್, ನಿರ್ದೇಶಕರನ್ನ ಅಭಿನಂದಿಸಿ ಟ್ವೀಟ್ ಮಾಡಿ 'ನ್ಯೂಯಾರ್ಕ್ ಫಿಲ್ಮ್ ಫೆಸ್ಟಿವಲ್‍ಗಾಗಿ ನೋಡಿದ ಒಂದು ಅದ್ಭುತವಾದ ಭಾರತೀಯ ವ್ಯಂಗ್ಯಭರಿತ ಚಿತ್ರ. ನಾನು ಅದಕ್ಕೆ 10/10 ನೀಡಿದ್ದೇನೆ' ಎಂದು ಹೇಳಿದ್ದಾರೆ.

  • Absolutely brilliant Indian comedy I reviewed for the NYC film festival. Tweeted its Director I gave it a 10. Its title is from Cricket meaning "to exceed well." pic.twitter.com/cRRuBjA4su

    — Lawrence Whitener (@LawrencWhitener) December 11, 2021 " class="align-text-top noRightClick twitterSection" data=" ">

ರಾಮಾರಾಮಾ ರೇ ಮತ್ತು ಒಂದಲ್ಲಾ ಎರಡಲ್ಲಾ ಸಿನಿಮಾಗಳ ಯಶಸ್ಸಿನ ನಂತರ ಸತ್ಯ ಪ್ರಕಾಶ್ ನಿರ್ದೇಶಿಸಿರುವ ಮೂರನೇ ಚಿತ್ರವೇ ಮ್ಯಾನ್ ಆಫ್ ದಿ ಮ್ಯಾಚ್. ಸತ್ಯ ಮತ್ತು ಮಯೂರ ಪಿಕ್ಚರ್ಸ್ ಸಹಯೋಗದಲ್ಲಿ ಪಿಆರ್‌ಕೆ ಪ್ರೊಡಕ್ಷನ್ಸ್ ಈ ಚಿತ್ರವನ್ನು ನಿರ್ಮಿಸಿದೆ.

ಆಡಿಷನ್‌ಗೆ ಕರೆದ ನಿರ್ದೇಶಕ, ಆಡಿಷನ್‌ಗೆ ಹಾಜರಾಗುವ ಕಲಾವಿದರ ನಡುವೆ ಘರ್ಷಣೆಯನ್ನು ಸೃಷ್ಟಿಸುವ ಮೂಲಕ ಚಲನಚಿತ್ರವನ್ನು ಮಾಡುತ್ತಾರೆ. ದೊಡ್ಡ ಪಾತ್ರ ವರ್ಗ ಹೊಂದಿರುವ ಮತ್ತು ಪ್ರಸ್ತುತ ಸಾಮಾಜಿಕ ಸಂಘರ್ಷಗಳನ್ನು ಹಾಸ್ಯಮಯ ಮತ್ತು ವಿಡಂಬನಾತ್ಮಕ ರೀತಿಯಲ್ಲಿ ಸ್ಪರ್ಶಿಸುವ ಚಿತ್ರವಾಗಿದೆ.

ನಟರಾಜ್ ಎಸ್.ಭಟ್ ಮತ್ತು ಧರ್ಮಣ್ಣ ಕಡೂರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಇಬ್ಬರೂ ರಾಮಾರಾಮಾ ರೇ ನಂತರ ಸತ್ಯಪ್ರಕಾಶ್ ಅವರೊಂದಿಗೆ ಒಟ್ಟಿಗೆ ಬರುತ್ತಿದ್ದಾರೆ. ಅಥರ್ವ ಪ್ರಕಾಶ್ ಮತ್ತು ಮಯೂರಿ ನಟರಾಜ್, ವೀಣಾ ಮತ್ತು ಸುಂದರ್ ಕೂಡ ಈ ಚಿತ್ರದಲ್ಲಿ ತಮ್ಮ ನಿಜ ಜೀವನದ ಪಾತ್ರವನ್ನು ನಿರ್ವಹಿಸಿದ್ದಾರೆ.

ವಾಸುಕಿ ವೈಭವ್ ಸಂಗೀತ ಸಂಯೋಜಿಸುವುದರ ಜತೆಗೆ, ಚಿತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಸದ್ಯ ಈ ಸಿನಿಮಾ ಒಟಿಟಿಯಲ್ಲಿ ಪ್ರದರ್ಶನ ಕಾಣುವ ಮೂಲಕ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ: ಅಪ್ಪುಗೆ ಸಿನಿಮಾ ಡೈರೆಕ್ಷನ್ ಮಾಡುವ ಕನಸು ಈಡೇರಲಿಲ್ಲ: ನಿರ್ದೇಶಕ ಸತ್ಯಪ್ರಕಾಶ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.