ETV Bharat / entertainment

ಕಲಾಂ ಅವರ ಮಾತೇ ಸ್ಫೂರ್ತಿ : ಆಗ ಬಿಎಂಟಿಸಿ ಕಂಡಕ್ಟರ್ ಈಗ ಸಿನಿಮಾ ಡೈರೆಕ್ಟರ್ - ಓರಿಯೋ ಸಿನಿಮಾ

ನಾವು ಎಚ್ಚರ ತಪ್ಪಿದರೆ, ಮುಂದೊಂದು ದಿನ ಹೀಗೂ ಆಗಬಹುದು ಎಂಬ ಎಚ್ಚರಿಕೆಯ ಸಂದೇಶವನ್ನು ಇಡೀ ವಿಶ್ವಕ್ಕೆ ನೀಡುವಂಥ ವಿಭಿನ್ನ ಕಥಾ ಹಂದರ ಈ ಚಿತ್ರದಲ್ಲಿದೆ. ಈಗ ಪೋಸ್ಟರಿನಲ್ಲಿ ತೋರಿಸಿರುವ 5 ಹೆಡೆಯ ಹಾವಿಗೂ ಚಿತ್ರಕಥೆಗೂ ಸಂಬಂಧವಿದೆ ಎಂದು ನಂದನ್ ಪ್ರಭು ಹೇಳಿದರು..

Oriyo Movie team
ಓರಿಯೋ ಚಿತ್ರ ತಂಡ
author img

By

Published : May 14, 2022, 2:32 PM IST

ಸಿನಿಮಾ ಮೇಲಿನ ವ್ಯಾಮೋಹ ಎಂತಹವರನ್ನು ಕೂಡ, ನಟ ಹಾಗೂ ನಿರ್ದೇಶಕರನ್ನಾಗಿ ಮಾಡುತ್ತದೆ. ಈ ಮಾತಿಗೆ ಪೂರಕವಾಗಿ ಬಿಎಂಟಿಸಿ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದ ನಂದನ್ ಪ್ರಭು ಎಂಬುವರು ಸಿನಿಮಾಕ್ಕಾಗಿ ತಮ್ಮ ವೃತ್ತಿಯನ್ನ ತೊರೆದಿದ್ದಾರೆ. 'ಪ್ರೀತಿಯ ಲೋಕ' ಹಾಗೂ 'ಲವ್ ಈಸ್ ಪಾಯ್ಸನ್' ಎಂಬ ಚಿತ್ರಗಳನ್ನು ನಿರ್ದೇಶನ ಮಾಡುವ ಮೂಲಕ ಡೈರೆಕ್ಟರ್ ಆಗಿದ್ದಾರೆ. ಇದೀಗ ಏಳು ವರ್ಷಗಳ ಬಳಿಕ ನಂದನ್ ಪ್ರಭು 'ಓರಿಯೋ' ಎಂಬ ಹೊಸ ಚಿತ್ರವನ್ನು ನಿರ್ದೇಶಿಸಿ ತೆರೆಗೆ ತರುತ್ತಿದ್ದಾರೆ.

Oriyo Movie poster
ಓರಿಯೋ ಚಿತ್ರದ ಪೋಸ್ಟರ್​​

ಯುವ ಪ್ರತಿಭೆಗಳಾದ ನಿತಿನ್‌ಗೌಡ ಹಾಗೂ ಶುಭಿ ಮುಖ್ಯ ಭೂಮಿಕೆಯಲ್ಲಿರುವ 'ಓರಿಯೋ ಸಿನಿಮಾ' ಹಾರರ್ ಜತೆಗೆ ಪರಿಸರ ಕಾಳಜಿಯ ಬಗ್ಗೆ ಕಥೆಯನ್ನ ಒಳಗೊಂಡಿದೆ. ಈ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ನಂದನ್ ಪ್ರಭು, ಓರಿಯೋ ಪದಕ್ಕೆ ಒಂದೊಂದು ದೇಶದಲ್ಲಿ ಒಂದೊಂದು ಅರ್ಥವಿದೆ. ನಮ್ಮ ಚಿತ್ರಕ್ಕೆ ಇದೇ ಶೀರ್ಷಿಕೆ ಇಟ್ಟಿರುವ ಕಾರಣವೇನು? ಎಂದು ಚಿತ್ರ ನೋಡಿದಾಗ ಖಂಡಿತಾ ಗೊತ್ತಾಗುತ್ತದೆ ಎಂದಿದ್ದಾರೆ.

ಕಳೆದ ನವೆಂಬರ್‌ನಲ್ಲಿ ಶೂಟಿಂಗ್ ಆರಂಭಿಸಿ ಸಕಲೇಶಪುರ, ಮಡಿಕೇರಿ, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಮಾಡಿದ್ದೇವೆ. ಈಗಾಗಲೇ 2 ಹಾಡು ಹಾಗೂ 2 ಸಾಹಸ ದೃಶ್ಯ ಶೂಟಿಂಗ್ ಮುಗಿಸಿದ್ದೇವೆ. ಒಂದು ಹಾಡಿನ ಚಿತ್ರೀಕರಣ ಮಾತ್ರವೇ ಬಾಕಿಯಿದೆ. 'ತುಂಬಾ ಹಿಂದೆ ನಾನು, ಎಪಿಜೆ ಅಬ್ದುಲ್ ಕಲಾಂ (ರಾಷ್ಟಪತಿ ಆಗುವುದಕ್ಕಿಂತ ಮುಂಚೆ) ಅವರ ಕಾರು ಚಾಲಕನಾಗಿದ್ದೆ. ಅವರು ನನ್ನೊಂದಿಗೆ ಮಾತಾಡುವಾಗ ಒಂದಷ್ಟು ವಿಷಯಗಳನ್ನು ಹೇಳುತ್ತಿದ್ದರು. ಆ ಮಾತುಗಳೇ ನಾನು ಈ ಚಿತ್ರ ಮಾಡಲು ಸ್ಪೂರ್ತಿ' ಎಂದರು.

Oriyo Movie team
ಓರಿಯೋ ಚಿತ್ರ ತಂಡ

ನಾವು ಎಚ್ಚರ ತಪ್ಪಿದರೆ, ಮುಂದೊಂದು ದಿನ ಹೀಗೂ ಆಗಬಹುದು ಎಂಬ ಎಚ್ಚರಿಕೆಯ ಸಂದೇಶವನ್ನು ಇಡೀ ವಿಶ್ವಕ್ಕೆ ನೀಡುವಂಥ ವಿಭಿನ್ನ ಕಥಾ ಹಂದರ ಈ ಚಿತ್ರದಲ್ಲಿದೆ. ಈಗ ಪೋಸ್ಟರಿನಲ್ಲಿ ತೋರಿಸಿರುವ 5 ಹೆಡೆಯ ಹಾವಿಗೂ ಚಿತ್ರಕಥೆಗೂ ಸಂಬಂಧವಿದೆ ಎಂದು ನಂದನ್ ಪ್ರಭು ಹೇಳಿದರು.

ಚಿತ್ರದ ಮತ್ತೊಬ್ಬ ನಾಯಕ ಸುಚಿತ್ ಮಂಜುನಾಥ್ ಮಾತನಾಡಿ, ರಥಾವರ, ವೈರ ಹಾಗೂ ಪುಟಾಣಿ ಪಂಟ್ರು ಚಿತ್ರಗಳ ನಂತರ ನಾನು ಅಭಿನಯಿಸುತ್ತಿರುವ ಚಿತ್ರವಿದು. ಇದರಲ್ಲಿ ನಾನು ಒಬ್ಬ ಸಾಮಾನ್ಯ ಕ್ಯಾಬ್‌ ಡ್ರೈವರ್ ಪಾತ್ರ ನಿರ್ವಹಿಸಿದ್ದೇನೆ. ಒಂದು ಸಂದರ್ಭದಲ್ಲಿ ಕಾಡಿಗೆ ಹೋಗಬೇಕಾಗುತ್ತದೆ. ಅಲ್ಲಿಂದಲೇ ಕಥೆ ಪ್ರಾರಂಭವಾಗುತ್ತದೆ. ಯುಕ್ತ ನನ್ನ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ ಎಂದರು.

Oriyo Movie team
ಓರಿಯೋ ಚಿತ್ರ ತಂಡ

ಸದ್ಯ ಚಿತ್ರದ ಎಡಿಟಿಂಗ್ ಕಾರ್ಯ ನಡೆಯುತ್ತಿದೆ. ಒರಿಯೋ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆಗಳನ್ನು ನಿರ್ದೇಶಕ ನಂದನ್​ ಪ್ರಭು ಅವರೇ ಬರೆದಿದ್ದಾರೆ. ಸಾಯಿಕಿರಣ್ ಸಂಗೀತ, ಬ್ಯಾಟಪ್ಪಗೌಡ ಹಾಗೂ ಪ್ರಭಾಕರ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ವಿಜಯಶ್ರೀ ಆರ್.ಎಂ. ಹಾಗೂ ವೈಶಾಲಿ ವೈ.ಜೆ. ಈ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಬಹುತೇಕ ಚಿತ್ರೀಕರಣ ಮುಗಿಸಿರುವ ಓರಿಯೋ ಸಿನಿಮಾ ಸದ್ಯದಲ್ಲೇ ತೆರೆಗೆ ಬರಲಿದೆ.

ಇದನ್ನೂ ಓದಿ: ನ್ಯೂಯಾರ್ಕ್ ಫಿಲ್ಮ್ ಫೆಸ್ಟಿವಲ್​ಗೆ ಕನ್ನಡದ 'ಮ್ಯಾನ್ ಆಫ್ ದಿ ಮ್ಯಾಚ್' ಚಿತ್ರ ಆಯ್ಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.