ETV Bharat / entertainment

ವಿಹಾನ್​ಗೆ ನಾಯಕಿಯಾದ 'ನಮ್ಮನೆ ಯುವರಾಣಿ'.. 'ಪಂಚತಂತ್ರ' ನಟನಿಗೆ ಸಿಂಪಲ್ ಸ್ಟಾರ್ ಸಾಥ್ - Paramvah Studios

ಸ್ಯಾಂಡಲ್​ವುಡ್​ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಯುವ ಪ್ರತಿಭೆಗಳಿಗೆ ಸಾಥ್ ನೀಡುತ್ತಿದ್ದಾರೆ. ಇದೀಗ 'ಪಂಚತಂತ್ರ’ ಖ್ಯಾತಿಯ ವಿಹಾನ್‌ ಮತ್ತು 'ನಮ್ಮನೆ ಯುವರಾಣಿ' ಧಾರಾವಾಹಿಯ ಅಂಕಿತಾ ಅಮರ್‌ ಅಭಿನಯದ ನೂತನ ಸಿನಿಮಾಕ್ಕೆ ಸಾಥ್ ನೀಡುತ್ತಿದ್ದಾರೆ.

ankita amar
ಅಂಕಿತಾ ಅಮರ್‌
author img

By

Published : Jul 18, 2022, 2:29 PM IST

'ಕಾಲ್‌ ಕೆಜಿ ಪ್ರೀತಿ' ಹಾಗು 'ಪಂಚತಂತ್ರ' ಸಿನಿಮಾಗಳ ಮೂಲಕ ಸ್ಯಾಂಡಲ್‌ವು ಡ್‌ನಲ್ಲಿ ಗುರುತಿಸಿಕೊಂಡಿರುವ ನಟ ವಿಹಾನ್‌ ಮತ್ತೆ ಬೆಳ್ಳಿತೆರೆ ಮೇಲೆ ಮಿಂಚಲು ರೆಡಿಯಾಗಿದ್ದಾರೆ. ವಿಹಾನ್​ಗೆ ನಾಯಕಿಯಾಗಿ 'ನಮ್ಮನೆ ಯುವರಾಣಿ' ಧಾರಾವಾಹಿ ಮೂಲಕ ಎಲ್ಲರ ಗಮನ ಸೆಳೆದ ಅಂಕಿತಾ ಅಮರ್‌ ನಟಿಸಲಿದ್ದಾರೆ. ವಿಶೇಷ ಅಂದ್ರೆ, ಈ ಸಿನಿಮಾವನ್ನ ಪರಂವಃ‌ ಸ್ಟುಡಿಯೋ ಅಡಿ ನಿರ್ಮಾಣ ಮಾಡುತ್ತಿದ್ದು, ಸಿಂಪಲ್ ಸ್ಟಾರ್ ರಕ್ಷಿತ್‌ ಶೆಟ್ಟಿ ಸಾಥ್‌ ನೀಡುತ್ತಿದ್ದಾರೆ.

ಕಳೆದ ಮೂರು ವರ್ಷಗಳ ಹಿಂದೆ ನಟ ವಿಹಾನ್‌, ಯೋಗರಾಜ್‌ ಭಟ್‌ ನಿರ್ದೇಶನದ "ಪಂಚತಂತ್ರ" ಸಿನಿಮಾದಲ್ಲಿ ನಟಿಸಿದ ಬಳಿಕ ಬೇರೆ ಸಿನಿಮಾಗಳತ್ತ ಮುಖ ಮಾಡಿರಲಿಲ್ಲ. ಇದೀಗ ವಿಶೇಷ ಕಥೆಯೊಂದಿಗೆ ಮತ್ತೆ ಪ್ರೇಕ್ಷಕರ ಮುಂದೆ ಆಗಮಿಸುತ್ತಿದ್ದಾರೆ. ರೊಮ್ಯಾನ್ಸ್‌ ಡ್ರಾಮಾ ಶೈಲಿಯ ಈ ಚಿತ್ರದ ಪ್ರೀ ಪ್ರೊಡಕ್ಷನ್‌ ಕೆಲಸಗಳು ಈಗಾಗಲೇ ಶುರುವಾಗಿವೆ. ಚಿತ್ರದಲ್ಲಿ ನಾಯಕನಿಗೆ ಮೂರು ಹಂತಗಳಿರಲಿವೆ. ಕಾಲೇಜ್‌ ವಿದ್ಯಾರ್ಥಿ, ಕ್ರಿಕೆಟ್‌ ಆಟಗಾರ ಹಾಗೂ ಬಿಜಿನೆಸ್‌ ಮ್ಯಾನ್‌ ಆಗಿ ವಿಹಾನ್‌ ಕಾಣಿಸಿಕೊಳ್ಳಲಿದ್ದಾರೆ.

vihan
ನಟ ವಿಹಾನ್‌

ಹಾಗಾದ್ರೆ ಈ ಚಿತ್ರದ ನಿರ್ದೇಶಕರು ಯಾರು?: ರಕ್ಷಿತ್‌ ಅವರ ಸೆವೆನ್‌ ಆ್ಯಡ್ಸ್‌ ಟೀಮ್‌ನಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿರುವ ಚಂದ್ರಜೀತ್‌ ಬೆಳ್ಳಿಯಪ್ಪ ಇನ್ನೂ ಶೀರ್ಷಿಕೆ ಅಂತಿಮವಾಗದ ಈ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ. ಈ ಮೊದಲು ರಿಷಬ್‌ ಶೆಟ್ಟಿ ಅವರ ಕಥಾಸಂಗಮ ಸಿನಿಮಾದಲ್ಲಿನ ರೇನ್‌ಬೋ ಲ್ಯಾಂಡ್‌ ಏಪಿಸೋಡ್‌ ಅನ್ನು ಚಂದ್ರಜಿತ್‌ ನಿರ್ದೇಶನ ಮಾಡಿದ್ದರು. ಅದಕ್ಕೂ ಮೊದಲು "ಅವನೇ ಶ್ರೀಮನ್ನಾರಾಯಣ ಚಿತ್ರದ ಬರವಣಿಗೆಯ ಭಾಗವಾಗಿದ್ದರು.

ankita amar
ನಟಿ ಅಂಕಿತಾ ಅಮರ್‌

ರೊಮ್ಯಾನ್ಸ್‌, ಡ್ರಾಮಾ ಮತ್ತು ಲವ್‌ಸ್ಟೋರಿ ಹಿನ್ನೆಲೆಯ ಈ ಸಿನಿಮಾಕ್ಕೆ ಅಮೆರಿಕದ ನ್ಯೂಯಾರ್ಕ್‌ ಫಿಲಂ ಅಕಾಡೆಮಿಯಲ್ಲಿ ಪದವಿ ಪಡೆದು, ಅಲ್ಲಿಯೇ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿರುವ ಶ್ರೀವಾತ್ಸವನ್‌ ಸೆಲ್ವರಾಜನ್‌ ಕ್ಯಾಮರಾ ಹಿಡಿಯಲಿದ್ದಾರೆ. ಇದು ಅವರ ಚೊಚ್ಚಲ ಚಿತ್ರವಾಗಿದ್ದು, ಗಗನ್‌ ಬದೇರಿಯಾ ಸಂಗೀತ ಸಂಯೋಜಿಸಲಿದ್ದಾರೆ.

ಸದ್ಯಕ್ಕೆ ಚಿತ್ರೀಕರಣದ ಪೂರ್ವ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ತಂಡ, ಆಗಸ್ಟ್‌ ವೇಳೆಗೆ ಚಿತ್ರದ ಶೀರ್ಷಿಕೆ ಘೋಷಣೆ ಮಾಡಿಕೊಳ್ಳುವ ಮೂಲಕ ಸಿನಿಮಾ ಕೆಲಸಗಳಿಗೆ ಚಾಲನೆ ನೀಡಲಿದೆ. ಅದಾದ ಬಳಿಕ ಸೆಪ್ಟೆಂಬರ್‌ನಲ್ಲಿ ಚಿತ್ರದ ಶೂಟಿಂಗ್‌ ಶುರು ಮಾಡುವ ಪ್ಲಾನ್​ನಲ್ಲಿದೆ.

ಇದನ್ನೂ ಓದಿ: ವಿಶ್ವದ ಮೊದಲ ಎನ್​​ಎಫ್​​ಟಿ ಪ್ರೀಮಿಯರ್ ಸದಸ್ಯತ್ವ ಅನಾವರಣಗೊಳಿಸಿದ 'ವಿಕ್ರಾಂತ್ ರೋಣ'

ETV Bharat Logo

Copyright © 2024 Ushodaya Enterprises Pvt. Ltd., All Rights Reserved.